ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೆನ್ ಅವರು ಇಂದು (ಜುಲೈ 3) ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ಮಾಜಿ ಸಿಎಂ ಹೇಮಂತ್ ಸೊರೇನ್ ಸರ್ಕಾರದ ನೇತೃತ್ವ ವಹಿಸಲು ದಾರಿ ಮಾಡಿಕೊಟ್ಟಿದ್ದಾರೆ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಹೇಮಂತ್ ಸೊರೇನ್ ಸಿಎಂ ಹುದ್ದೆಗೆ ಮರಳುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿತ್ತು. ಈ ಬೆನ್ನಲ್ಲೇ ಚಂಪೈ ಸೊರೇನ್ ರಾಜೀನಾಮೆ ನೀಡಿದ್ದಾರೆ.
Champai Soren resigns as Jharkhand CM, Hemant Soren stakes claim to form govt
Read @ANI Story | https://t.co/Mc2d74htr5#ChampaiSoren #JharkhandCM #HemantSoren pic.twitter.com/T6fkdW4I2Q
— ANI Digital (@ani_digital) July 3, 2024
ಹೇಮಂತ್ ಸೊರೇನ್ ಬಂಧನಕ್ಕೊಳಗಾದ ಬಳಿಕ ಸರ್ಕಾರ ಪತನಗೊಳ್ಳುವ ಸಾಧ್ಯತೆ ಇತ್ತು. ಈ ವೇಳೆ ಚಂಪೈ ಸೊರೇನ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. 152 ದಿನಗಳ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಜೆಎಂಎಂ ಪಕ್ಷದಲ್ಲಿ ಆಂತರಿಕ ಕಲಹ ಉಂಟಾಗದಂತೆ ನೋಡಿಕೊಳ್ಳಲು ಮತ್ತು ವಿಧಾನಸಭೆ ಚುನಾವಣೆ ಹತ್ತಿರುವ ಬರುತ್ತಿರುವಾಗ ಪಕ್ಷ ಸಂಘಟಿಸಲು ಹೇಮಂತ್ ಸೊರೇನ್ ಮತ್ತೆ ಸಿಎಂ ಸ್ಥಾನಕ್ಕೇರಲು ಮುಂದಾಗಿದ್ದಾರೆ ಎಂದು ವರದಿಗಳು ಹೇಳಿವೆ.
ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ನಾಯಕರಾಗಿರುವ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯವು ಜನವರಿ 31ರಂದು ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ಬಂಧಿಸಿತ್ತು. ಅಕ್ರಮ ವಹಿವಾಟುಗಳು ಮತ್ತು ನಕಲಿ ದಾಖಲೆಗಳ ಮೂಲಕ ರಾಂಚಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ 8.86 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆಯನ್ನು ನಡೆಸಿದ್ದಾರೆ ಎಂದು ಇಡಿ ಆರೋಪಿಸಿದೆ.
ಇದನ್ನೂ ಓದಿ : ಮಧ್ಯ ಪ್ರದೇಶ : ಕಳೆದ ಮೂರು ವರ್ಷಗಳಲ್ಲಿ 31 ಸಾವಿರಕ್ಕೂ ಅಧಿಕ ಮಹಿಳೆಯರು ನಾಪತ್ತೆ!


