Homeಕರೋನಾ ತಲ್ಲಣಕೃಷಿಕರ ಮೂಲೋತ್ಪಾಟನೆಗೆ ಸರ್ಕಾರ ಸಂಚು ಹೂಡಿದೆ: ಚಂಸು ಪಾಟೀಲ

ಕೃಷಿಕರ ಮೂಲೋತ್ಪಾಟನೆಗೆ ಸರ್ಕಾರ ಸಂಚು ಹೂಡಿದೆ: ಚಂಸು ಪಾಟೀಲ

ಡಿಸೇಲ್, ಪೆಟ್ರೋಲ್ ದರಗಳ ನಿರಂತರ ಏರಿಕೆ ಕೃಷಿ ಮೇಲೂ ಪರಿಣಾಮ ಬೀರುತ್ತಿದ್ದು, ಕೃಷಿ ವೆಚ್ಚವನ್ನು ಮತ್ತಷ್ಟು ಹೆಚ್ಚಿಸುತ್ತಿವೆ. ಆದರೆ ಆದಾಯವೆಂಬುದು ಮರೀಚಿಕೆಯಾಗಿದೆ.

- Advertisement -
- Advertisement -

ಹಳ್ಳಕ್ಕೆ ಬಿದ್ದ ಗೂಳಿಗೆ ಆಳಿಗೊಂದು ಕಲ್ಲು ಎಂಬ ಗಾದೆ ಇದೆ‌. ಕೊರೊನಾ ಸಾಂಕ್ರಾಮಿಕ ರೋಗದ ಈ ಕಾಲಘಟ್ಟದಲ್ಲಿ ಇದು ರೈತರ ಪರಿಸ್ಥಿತಿ‌ಗೆ ಸರಿಯಾಗಿ ಅನ್ವಯಿಸುತ್ತದೆ. ಲಾಕ್‌ಡೌನ್ ಸಂದರ್ಭದಲ್ಲಿ ಬಹುತೇಕ ಉತ್ಪಾದನಾ ಚಟುವಟಿಕೆಗಳು ಸ್ತಬ್ಧ‌ಗೊಂಡಿದ್ದರೂ ಕೃಷಿ ಕ್ಷೇತ್ರ ಇದಕ್ಕೆ ಹೊರತಾಗಿದೆ. ಕೃಷಿಕರು ಎಂದಿನಂತೆ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಲಾಕ್‌ಡೌನ್ ಅವರ ಪಾಲಿಗೆ ಹೆಚ್ಚು ಅನಾನುಕೂಲತೆಗಳನ್ನು ತಂದೊಡ್ಡಿದೆ. ಈ ಸಂಕಷ್ಟದ ಸಮಯದಲ್ಲೂ ದೃತಿಗೆಡದೆ ತಮ್ಮ ಕಾಯಕದಲ್ಲಿ ತೊಡಗಿಕೊಂಡಿದ್ದರೂ ಕೃಷಿಕರು ಮತ್ತು ಕೃಷಿ ಕಾರ್ಮಿಕರು ಮತ್ತಷ್ಟು ಸಂಕಷ್ಟಕ್ಕೆ ಗುರಿಯಾಗುತ್ತಿರುವುದು ವಿಪರ್ಯಾಸ‌ವೇ ಸರಿ.

ಡಿಸೇಲ್, ಪೆಟ್ರೋಲ್ ದರಗಳ ನಿರಂತರ ಏರಿಕೆ ಕೃಷಿಯ ಮೇಲೂ ಪರಿಣಾಮ ಬೀರುತ್ತಿದೆ. ಕೃಷಿ ಕ್ಷೇತ್ರ ಯಾಂತ್ರೀಕರಣಗೊಳ್ಳುತ್ತಲೇ ಇದೆ. ಟ್ರ್ಯಾಕ್ಟರ್‌ಗಳ ಬಳಕೆ, ಒಕ್ಕಣೆ ಯಂತ್ರಗಳ ಬಳಕೆ ಅನಿವಾರ್ಯ‌ವಾಗಿವೆ. ಇಂಧನ ಬೆಲೆಗಳ ಏರಿಕೆ ಸಹಜವಾಗಿ ಕೃಷಿಯ ಖರ್ಚನ್ನೂ ಹೆಚ್ಚಿಸುತ್ತಿವೆ. ಬಹುಪಾಲು ಮಧ್ಯಮವರ್ಗದ ರೈತರು, ಸಣ್ಣ ಮತ್ತು ಅತಿ ಸಣ್ಣ ರೈತರು ಉಳುಮೆಗೆ ಬಾಡಿಗೆ ಟ್ರ್ಯಾಕ್ಟರ್‌ಗಳನ್ನು ಅವಲಂಬಿಸಿದ್ದರೆ, ದೊಡ್ಡ ಹಿಡುವಳಿ ಹೊಂದಿರುವ ರೈತರು ಸ್ವಂತ ಟ್ರ್ಯಾಕ್ಟರ್ ಹೊಂದಿರುತ್ತಾರೆ. ಶೇಂಗಾ, ಭತ್ತ, ಜೋಳ, ಗೋವಿನ ಜೋಳ, ಸೂರ್ಯಪಾನ ಮೊದಲಾದ ಪ್ರಮುಖ ಬೆಳೆಗಳ ಕೊಯ್ಲು ಮತ್ತು ಒಕ್ಕಣೆ ಈಗ ಯಂತ್ರಗಳಿಂದಲೇ ನಡೆಯುತ್ತಿದೆ. ಇಲ್ಲೂ ಸಣ್ಣ ಹಿಡುವಳಿಯ ರೈತರು ಬಾಡಿಗೆ ಯಂತ್ರಗಳನ್ನೇ ಅವಲಂಬಿಸಿರುತ್ತಾರೆ. ಹೀಗೆ ಕೃಷಿ ಚಟುವಟಿಕೆಗಾಗಿನ ಖರ್ಚಿನ ಪ್ರಮಾಣ ಒಂದು ಕಡೆ ಹೆಚ್ಚಾಗುತ್ತಲೇ ಸಾಗಿದೆ. ಆದರೆ, ಅದಕ್ಕೆ ಪೂರಕವಾಗಿ ಆದಾಯ ಹೆಚ್ಚದಿರುವುದು ಅವರನ್ನು ಸಾಲಗಾರರನ್ನಾಗಿ ಮಾಡುತ್ತಿದೆ. ಲಾಕ್‌ಡೌನ್ ಸಂದರ್ಭದಲ್ಲಂತೂ ರೈತರು ತಾವು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಸಿಗದೇ, ಸೂಕ್ತ ಬೆಲೆ ಸಿಗದೇ ಕಂಗಾಲಾಗಿದ್ದಾರೆ.

ಎರಡು ವರ್ಷಗಳ ಹಿಂದೆ ಒಮ್ಮೆ ಗೋವಿನಜೋಳದ ಬೆಲೆ ಕ್ವಿಂಟಾಲ್‌ಗೆ  2400 ರವರೆಗೆ ಏರಿತ್ತು ಮಾರನೇ ವರ್ಷವೇ ಅದು 1200 ಕ್ಕೆ ಬಂದಿತ್ತು. ಲಾಕ್‌ಡೌನ್‌ನಲ್ಲಿ ರೈಲುಸಂಚಾರ ಸ್ಥಗಿತಗೊಂಡು, ವ್ಯಾಗನ್‌ಗಳಲ್ಲಿ  ಸಾಗಾಣಿಕೆಯಾಗುತ್ತಿದ್ಧ ಗೋವಿನಜೋಳ ಸ್ಥಳೀಯ ಮಾರುಕಟ್ಟೆಗಳನ್ನು ತುಂಬಿ ಅಲ್ಲಿ ಮಾರಾಟವಾಗದೇ ಒಮ್ಮೆಲೆ ಬೆಲೆಕುಸಿತ ಉಂಟಾಗಿತ್ತು. ಇದ್ಯಾವುದನ್ನೂ ಊಹಿಸಿರದ ರೈತ ತಾನು ಬೆಳೆದ ಬೆಳೆಗೆ ನಿರೀಕ್ಷಿತ ಬೆಲೆ ಸಿಗದೇ ಹೋದಾಗ ಹತಾಶನಾಗುವುದೂ ಸಹಜ. ಯಾವ ಬೆಳೆ ಬೆಳೆದರೆ ಒಳ್ಳೆಯ ಬೆಲೆ ಸಿಕ್ಕೀತು ಎಂಬ ಗೊಂದಲದಲ್ಲಿ ಎಲ್ಲ ಬೆಳೆಗಳದೂ ಇದೇ ಸ್ಥಿತಿಯಾದಾಗ ಯಾವ ಬೆಳೆ ಬೆಳೆಯಬೇಕೆಂಬುದೇ ಅವನಿಗೆ ತೋಚದಂತಾಗುತ್ತದೆ. ಬೆಲೆಗಳ ಅಸ್ಥಿರತೆ ರೈತರ ಬದುಕನ್ನು ನರಕಸದೃಶವಾಗಿಸುತ್ತಿದೆ.  ದೆಹಲಿಯ ಗಡಿ ಭಾಗಗಳಲ್ಲಿ ಕಳೆದ ಏಳು ತಿಂಗಳಿನಿಂದ ಸತ್ಯಾಗ್ರಹ ನಿರತರಾಗಿರುವ ರೈತರು ಬೆಂಬಲಬೆಲೆಯನ್ನು ಕಾನೂನುಬದ್ದಗೊಳಿಸಬೇಕೆಂದು ಆಗ್ರಹಿಸುತ್ತಿರುವುದೂ ಇದೇ ಕಾರಣಕ್ಕಾಗಿ ಎಂಬುದು ಸ್ವಯಂವೇದ್ಯ.

ಲಾಕ್‌ಡೌನ್ ಮಧ್ಯೆಯೂ ಕೃಷಿ ಕ್ಷೇತ್ರ ಕ್ರಿಯಾಶೀಲವಾಗಿದೆ‌. ರೈತರು ವಿವಿಧ ಬೆಳೆಗಳನ್ನು ಬೆಳೆಯುತ್ತಲೇ ಇದ್ದಾರೆ. ಹೀಗೆ ಬೆಳೆದ ಬೆಳೆಗೆ ಅಗತ್ಯ ಮಾರುಕಟ್ಟೆ, ಸೂಕ್ತ ಬೆಲೆ ಸಿಗದೇ ರೈತರು
ಬೆಳೆ ಬೆಳೆಯದೇ ಇರಲಿಕ್ಕೂ ಆಗದೇ, ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೇ, ಇತ್ತ ದರಿ ಅತ್ತ ಪುಲಿ ಎಂಬಂತೆ ಏನು ಮಾಡಬೇಕೆಂಬುದು ತಿಳಿಯದೇ ನಿಟ್ಟುಸಿರು ಬಿಡುವಂತಾಗಿದೆ.

ಕಿಲೋಗೆ 25/30 ರೂ. ಮಾರುತಿದ್ದ ಕ್ಯಾಬೀಜ ಈ ಸಂದರ್ಭದಲ್ಲಿ ಹತ್ತರೊಳಗೇ ಮಾರಾಟವಾಗುತ್ತದೆ. ಎಲ್ಲ ತರಕಾರಿ ಬೆಳೆಗಳ ಸ್ಥಿತಿಯೂ ಹೀಗೆ ಇದೆ. ರೈತರಿಂದ ಅಗ್ಗದ ಬೆಲೆಗೆ ಕೊಳ್ಳುವ ವ್ಯಾಪಾರಸ್ಥರು ಅತ್ತ ಗ್ರಾಹಕರನ್ನೂ ಸುಲಿಗೆ ಮಾಡುತ್ತಿರುತ್ತಾರೆ. ಆದರೆ, ಅದನ್ನು ಕಷ್ಟಪಟ್ಟು ಬೆಳೆದ ರೈತ ಮಾತ್ರ ಅದಕ್ಕೆ ಹಾಕಿದ ಶ್ರಮ, ಸಮಯ, ಬಂಡವಾಳ ಎಲ್ಲವನ್ನೂ ಕಳೆದುಕೊಂಡು ಸಾಲಗಾರನಾಗುವ ಸ್ಥಿತಿ ನಿರ್ಮಾಣವಾಗಿದೆ. ಇದು ಇನ್ನೂ ಎಷ್ಟು ದಿನ? ರೈತ ಬೆಳೆದ ಬೆಳೆಗೆ ಖಚಿತ ಬೆಲೆ, ಖಚಿತ ಆದಾಯ ಸಿಗುವುದೇ? ಎಂಬುದು ಸಧ್ಯಕ್ಕೆ ಯಕ್ಷಪ್ರಶ್ನೆಯಾಗಿದೆ.

ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗಬೇಕೆಂಬ ಆಗ್ರಹ ಬಹುದಿನಗಳಿಂದಲೂ ಇದ್ದೇ ಇದೆ‌. ಆದರೆ, ಸರ್ಕಾರವೇ ಇತ್ತೀಚಿನ ವರ್ಷಗಳಲ್ಲಿ ಪ್ರತಿವರ್ಷ ಬೆಳೆಗಳಿಗೆ ಬೆಂಬಲಬೆಲೆ ಘೋಷಿಸುತಿತ್ತು. ವಾಸ್ತವದಲ್ಲಿ ಆ ಬೆಲೆ ರೈತರಿಗೆ ಸಿಕ್ಕಿದ್ದೇ ಇಲ್ಲ. ಶೇಂಗಾದ ಬೆಂಬಲ ಬೆಲೆ 5200 ಇದ್ದರೆ, ಎಪಿಎಂಸಿಗಳಲ್ಲಿ ಅದು ಮಾರೋದು 3000/ 5000 ರೂ. ಒಳಗೇ. ಗೋವಿನ ಜೋಳಕ್ಕೆ ಬೆಂಬಲಬೆಲೆ 1700 ಇದ್ದರೂ ಅದು ಮಾರುತ್ತಿರುವುದು 1000/1500ರೊಳಗೇ. ಹತ್ತಿಯ ಬೆಂಬಲ ಬೆಲೆ 6000 ಇದ್ದರೂ ಅದು ಮಾರುವುದು 3000/5500ರ ಒಳಗೇ. ಹೀಗೆ ಬೆಂಬಲ ಬೆಲೆಗೂ ವಾಸ್ತವ ಬೆಲೆಗೂ ಇಷ್ಟೊಂದು ವ್ಯತ್ಯಾಸ ಇರುವಾಗ ಈ ಬೆಂಬಲ ಬೆಲೆ ಘೋಷಿಸುವುದಾದರೂ ಯಾವ ಪುರುಷಾರ್ಥಕ್ಕೆ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತದೆ.  ಇದೇ ಕಾರಣಕ್ಕೆ ಸಂಯುಕ್ತ ಕಿಸಾನ್ ಮೋರ್ಚಾದ ನೇತೃತ್ವದಲ್ಲಿ ದೆಹಲಿಯ ಹೊರ ವಲಯದಲ್ಲಿ ರೈತರು ಐತಿಹಾಸಿಕ ದೀರ್ಘಕಾಲಿಕ ಹೋರಾಟ ಕೈಗೊಂಡಿದ್ದಾರೆ‌. ಸರ್ಕಾರ ಘೋಷಿಸುವ ಬೆಂಬಲಬೆಲೆಗಳನ್ನೇ ಕಾನೂನುಬದ್ದಗೊಳಿಸಿ ಎಂಬುದು ಅವರ ಹಕ್ಕೊತ್ತಾಯವಾಗಿದೆ. ವೈಜ್ಞಾನಿಕ ಬೆಲೆ ಅಲ್ಲದಿದ್ದರೂ ಬೆಂಬಲಬೆಲೆಗಳೆ ವಾಸ್ತವದಲ್ಲಿ ರೈತರ ಬೆಳೆಗಳಿಗೆ ಸಿಕ್ಕರೆ ಅದರಿಂದ ಅವರಿಗೆ ಎಷ್ಟೋ ಆಸರೆ ದೊರೆತಂತಾಗುತ್ತದೆ. ಆದರೆ, ಒಕ್ಕೂಟ ಸರ್ಕಾರ ಈ ಕುರಿತು ಸರಿಯಾಗಿ ಸ್ಪಂದಿಸದೇ ಇರುವುದು ಕೃಷಿಪ್ರಧಾನ ದೇಶವೊಂದರ ದೊಡ್ಡ ದುರಂತವೇ ಸರಿ.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

ಈ ಮಧ್ಯೆ ರಾಸಾಯನಿಕ ಗೊಬ್ಬರಗಳ ಬೆಲೆಗಳನ್ನೂ ಏರಿಸಿ ಮತ್ತೆ ಇಳಿಸಲಾಗಿದೆ. ಈ ತರದ ರೈತರ ಸಹನೆಯ ಪರೀಕ್ಷೆಗಳು ನಡದೇ ಇರುತ್ತವೆ. ಮೊದಲು ಸಹಾಯಧನದ ರೂಪದಲ್ಲಿ ವಿನಾಯ್ತಿಯಲ್ಲಿ ಸಿಗುತಿದ್ದ ಗೊಬ್ಬರಗಳನ್ನು ರೈತರು ಇಂದು ಪೂರ್ಣಬೆಲೆ ತೆತ್ತು ಕೊಳ್ಳುವ ಸ್ಥಿತಿ ಎದುರಾಗಿದೆ. ಒಂದು ವೇಳೆ ನಿರೀಕ್ಷಿತ ಮಳೆ ಬಾರದೆಯೋ, ಹವಾಮಾನ ವೈಪರೀತ್ಯದಿಂದಲೋ ಆ ಬೆಳೆ ಕೈಗೆ ಸಿಗದಿದ್ದರೆ ರೈತನ ಪರಿಸ್ಥಿತಿ ಏನಾದೀತು ಎಂಬ ಬಗ್ಗೆ ಚಿಂತಿಸಬೇಕಾಗಿದೆ.

ಬೆಂಬಲಬೆಲೆಯ ಹಾಗೆಯೇ ಬೆಳೆವಿಮೆ ಯೋಜನೆ ಇದೆ ಆದರೂ ಪ್ರತಿವರ್ಷ ಪ್ರಿಮಿಯಂ ಕಟ್ಟುತಿದ್ದರೂ.. ಯಾವುದೋ ವರ್ಷದ ವಿಮೆ ಬರುತ್ತದೆ. ಅದು ಬಂದಾಗ ಇದು ಯಾವ ವರ್ಷದ್ದು, ಯಾವ ಬೆಳೆಗೆ ಬಂದದ್ದು ಎಂಬುದು ರೈತನಿಗೆ ತಿಳಿಯದಷ್ಟು ಸಂಕೀರ್ಣ ಯೋಜನೆ ಇದಾಗಿದೆ. ಆದಕಾರಣ ಬೆಳೆವಿಮೆ ಯೋಜನೆ ಒಳ್ಳೆಯ ಯೋಜನೆ ಆದರೂ ಅದರ ಪ್ರಯೋಜನ ಪ್ರತಿವರ್ಷವೂ, ಪ್ರತಿಬೆಳೆಗೂ ರೈತನಿಗೆ ದೊರೆಯಬೇಕಾದರೆ ಅದಿನ್ನೂ ಹೆಚ್ಚು ಕ್ರಮಬದ್ದವೂ ಪಾರದರ್ಶಕವೂ ಆಗಬೇಕಿದೆ.

ಗೋಹತ್ಯೆ ನಿಷೇಧದಂತಹ ಕಾನೂನುಗಳ ಜಾರಿ ನಂತರ ರೈತರು ಪಶುಸಂಗೋಪಣೆಯಿಂದಲೇ ವಿಮುಖರಾಗುವಂಥ ಸ್ಥಿತಿ ನಿರ್ಮಾಣವಾಗಿದೆ. ಹೇಗೆಂದರೆ, ಈ ಮೊದಲು ರೈತರು ವಯಸಾದ ದನಕರುಗಳನ್ನು ಅವು ಇನ್ನೂ ಆರೋಗ್ಯಪೂರ್ಣವಾಗಿರುವಾಗಲೇ ಮಾರಾಟ ಮಾಡಿ ಅದೇ ಹಣಕ್ಕೆ ಮತ್ತೆ ಒಂದಿಷ್ಟು ಹಣ ಸೇರಿಸಿ ಹೊಸ ಎತ್ತು, ದನಕರು ಕೊಳ್ಳುತಿದ್ದರು. ಎತ್ತುಗಳನ್ನು ಉಳುಮೆಗೆ, ದನಕರುಗಳನ್ನು ಹೈನುಗಾರಿಕೆಗೆ ಸಾಕುತ್ತಿದ್ದರು. ಗೋಹತ್ಯೆ ನಿಷೇಧದ ನಂತರ ಅವರು ಬಂಜೆದನಗಳನ್ನೂ ಸಾಕಲೇಬೇಕಾದಂತಹ ಅನಿವಾರ್ಯ‌ತೆ ಸೃಷ್ಠಿಯಾಗಿದೆ. ವಯಸ್ಸಾದ ದನಗಳ ಮಾರಾಟ ಕ್ಲಿಷ್ಟದಾಯಕವಾಗಿ ಅವುಗಳ ಚಿಕಿತ್ಸೆ‌ಗೆ ತಗಲುವ ವೈದ್ಯಕೀಯ ವೆಚ್ಚವನ್ನು ಭರಿಸಬೇಕಾಗಿದೆ. ಒಂದು ವೇಳೆ ಅವು ಮನೆಯಲ್ಲೆ ಅಸುನೀಗಿದರೆ ಅವುಗಳ ವಿಲೇವಾರಿ ಮಾಡುವುದೆ ಕಷ್ಟಕರವಾಗಿ ತಲೆಮೇಲೆ ಕೈಹೊತ್ತು ಕೂಡುವಂತಾಗಿದೆ.

ಲಾಕ್‌ಡೌನ್‌ ಸಂದರ್ಭದಲ್ಲಂತೂ ದನದ ಮಾರುಕಟ್ಟೆಗಳು ಬಂದ್ ಆಗಿ ತಮಗೆ ಬೇಕಾದ ಎತ್ತುಗಳನ್ನು ಸಮಯಕ್ಕೆ ಸರಿಯಾಗಿ ಕೊಳ್ಳುವುದೇ ದುಸ್ತರವಾಗಿದೆ. ಈ ಕಾರಣಕ್ಕೆ ಎತ್ತುಗಳ ಬೆಲೆಗಳೂ ಈಗ ಸಿಕ್ಕಾಪಟ್ಟೆ ದುಬಾರಿಯಾಗಿವೆ. ಮೊದಲೆಲ್ಲ ಮೂವತ್ತು ನಲವತ್ತು ಸಾವಿರ ರೂ.ಗಳಿಗೆ ಸಿಗುತ್ತಿದ್ದ ಜೋಡಿ ಎತ್ತುಗಳಿಗೆ ಈಗ ಎಪ್ಪತ್ತು ಎಂಭತ್ತು ಸಾವಿರ ರೂ. ತೆರುವ ಪರಿಸ್ಥಿತಿ ಎದುರಾಗಿದೆ. ಕೃಷಿಗೆ ಎತ್ತುಗಳು ಅನಿವಾರ್ಯ‌ವಾದ ಕಾರಣ ಸಾಲಸೋಲ ಮಾಡಿ ಎತ್ತು ಕೊಳ್ಳುವ ರೈತರು, ಬೀಜ, ಗೊಬ್ಬರ, ಔಷಧಿ ಎಂದು ಸಾಲ ಮಾಡಲೇಬೇಕಾಗುತ್ತದೆ. ಉತ್ತಮ ಬೆಳೆ ಬಂದರೆ ಉತ್ತಮ ಬೆಲೆ ಇಲ್ಲ, ಉತ್ತಮ ಬೆಲೆ ಇರುವ ಬೆಳೆ ಉತ್ತಮ ಇಳುವರಿ ಬರಲಿಲ್ಲ ಎಂದರೆ ರೈತನಿಗೆ ನಷ್ಟ ಕಟ್ಟಿಟ್ಟ ಬುತ್ತಿ.

ಹೀಗೆ ಹತ್ತು ಹಲವು ಸಮಸ್ಯೆ‌ಗಳ ಸುಳಿಯಲ್ಲಿ ಸಿಲುಕಿರುವ ರೈತ ಒಂದೆಡೆ ತನ್ನ ಬದುಕಿಗೆ ಭದ್ರತೆಯೆ ಇಲ್ಲದ ಕಾರಣಕ್ಕೆ ಹತಾಶನಾಗಿ ಆತ್ಮಹತ್ಯೆಗೆ ಶರಣಾಗುವ ಘಟನೆಗಳು ನಿತ್ಯ ನಿರಂತರ ಘಟಿಸುತ್ತಲೇ ಇವೆ. ಇನ್ನೊಂದೆಡೆ ದಿನದಿನಕ್ಕೂ ಕಗ್ಗಂಟಾಗುತ್ತಿರುವ ಕೃಷಿ ಬಿಕ್ಕಟ್ಟುಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಸರ್ಕಾರಗಳು ತೋರುತ್ತಿರುವ ನಿರಾಸಕ್ತಿ ಕೃಷಿ ಹಾಗೂ ಕೃಷಿಕರ ಮೂಲೋತ್ಪಾಟನೆಗೆ ಹೂಡಿರುವ ಸಂಚಿನಂತೆ ಭಾಸವಾಗುತ್ತಿದೆ.

  • ಚಂಸು ಪಾಟೀಲ
    ಕೂನಬೇವು
    ತಾ. ರಾಣೇಬೆನ್ನೂರು
    ಜಿ. ಹಾವೇರಿ

(ಕೃಷಿಕರಾದ ಚಂಸು ಪಾಟೀಲರವರು ಲೇಖಕರೂ ಹೌದು. ಬೇಸಾಯದ ಕತಿ ಎಂಬ ಪುಸ್ತಕ ಬರೆದಿರುವ ಇವರು ಸಮಾಜದ ಆಗುಹೋಗುಗಳಿಗೆ ಸದಾ ಪ್ರತಿಕ್ರಿಯಿಸುತ್ತಿರುತ್ತಾರೆ)


ಇದನ್ನೂ ಓದಿ; ಕೊರೊನಾ ತಂದೆಳೆದ ಕೃಷಿ ಸಂಕಷ್ಟಗಳು ಮತ್ತು ಪ್ರಭುತ್ವದ ಹೊಣೆಗಾರಿಕೆ: ಡಾ. ಜಿ. ಎನ್. ಮಲ್ಲಿಕಾರ್ಜುನಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಎಸ್‌ಎಸ್ ಕುರಿತ ಹೇಳಿಕೆ: ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ನಲಪಾಡ್‌ಗೆ ಕೋರ್ಟ್ ನೋಟಿಸ್

ಬೆಂಗಳೂರು: ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಾನನಷ್ಟ ಮೊಕದ್ದಮೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಮತ್ತು ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಸಂಸದ/ಶಾಸಕರ...

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...