Homeಮುಖಪುಟಚಂಡೀಗಢ: ಮೇಯರ್ ಚುನಾವಣೆಗೂ ಮುನ್ನವೇ ಕಾರ್ಯಕರ್ತರ ನಡುವೆ ಮಾರಾಮಾರಿ

ಚಂಡೀಗಢ: ಮೇಯರ್ ಚುನಾವಣೆಗೂ ಮುನ್ನವೇ ಕಾರ್ಯಕರ್ತರ ನಡುವೆ ಮಾರಾಮಾರಿ

- Advertisement -
- Advertisement -

ಚಂಡೀಗಢ ಕಾಂಗ್ರೆಸ್ ಅಧ್ಯಕ್ಷ ಹರ್ಮೊಹಿಂದರ್ ಸಿಂಗ್ ಲಕ್ಕಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರು ಮೇಯರ್ ಅಭ್ಯರ್ಥಿಯನ್ನು ಅಪಹರಿಸಿದ್ದಾರೆ ಎಂಬ ಬಿಜೆಪಿ ಆರೋಪವನ್ನು ಇಂಡಿಯಾ ಮೈತ್ರಿಕೂಟ ತಳ್ಳಿಹಾಕಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸೋಲು ಖಚಿತವಾಗಿರುವ ಕಾರಣಕ್ಕೆ ಬಿಜೆಪಿ ಇಂತಹ ಹೇಳಿಕೆಗಳನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.

ಚಂಡೀಗಢದ ಮುನ್ಸಿಪಲ್ ಕಾರ್ಪೊರೇಷನ್ ಕಚೇರಿಯಲ್ಲಿ ಮಂಗಳವಾರ ಬಿಜೆಪಿ ಮತ್ತು ಕಾಂಗ್ರೆಸ್-ಎಎಪಿ ಮೈತ್ರಿಕೂಟದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಮೇಯರ್ ಸ್ಥಾನದಿಂದ ಕಾಂಗ್ರೆಸ್ ನ ಮುನ್ಸಿಪಲ್ ಕೌನ್ಸಿಲರ್ ಜಸ್ಬೀರ್ ಸಿಂಗ್ ಬಂಟಿ ನಾಮಪತ್ರ ಹಿಂಪಡೆಯಲು ಬಂದಾಗ ಈ ಘಟನೆ ನಡೆದಿದೆ. ಎಂಸಿ ಕಚೇರಿಗೆ ಆಗಮಿಸಿದ ಬಂಟಿ ಅವರ ತಂದೆ, ತನ್ನ ಮಗನನ್ನು ತನ್ನೊಂದಿಗೆ ಕಳುಹಿಸುವಂತೆ ಕಾಂಗ್ರೆಸ್ ಮುಖಂಡರನ್ನು ಕೇಳಿದರು, ಅವರನ್ನು ಅಪಹರಿಸಲಾಗಿದೆ ಎಂದು ಆರೋಪಿಸಿದರು. ಇದರಿಂದ ಕಾಂಗ್ರೆಸ್-ಎಎಪಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಜಗಳ ನಡೆದಿದೆ.

ಬಂಟಿ ಅವರ ತಂದೆ ಬಿಜೆಪಿಯ ಪ್ರಭಾವದಿಂದ ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪರಿಸ್ಥಿತಿ ಕೈ ಮೀರಿದ್ದರಿಂದ ಚಂಡೀಗಢ ಪೊಲೀಸರು ಬಂಟಿಯನ್ನು ಅವರ ನಿವಾಸಕ್ಕೆ ಕರೆದೊಯ್ದರು.

ಆರಂಭದಲ್ಲಿ ಮೇಯರ್ ಹುದ್ದೆಗೆ ಜಸ್ಬೀರ್ ಸಿಂಗ್ ಬಂಟಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ, ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಎಎಪಿ ಮೈತ್ರಿ ಮಾಡಿಕೊಂಡ ನಂತರ, ಮೇಯರ್ ಹುದ್ದೆಗೆ ಎಎಪಿ, ಹಿರಿಯ ಉಪಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಕಾಂಗ್ರೆಸ್ ನಾಮನಿರ್ದೇಶಿತರು ಸ್ಪರ್ಧಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ನಂತರ, ವೀಡಿಯೊ ಸಂದೇಶ ಬಿಡುಗಡೆ ಮಾಡಿರುವ ಬಂಟಿ, ನಾನು ಕಾಂಗ್ರೆಸ್‌ನೊಂದಿಗೆ ಇದ್ದೇನೆ, ಮುಂದೆಯೂ ಪಕ್ಷದೊಂದಿಗೆ ಇರುತ್ತೇನೆ ಎಂದು ಹೇಳಿದ್ದಾರೆ. ‘ವಿರೋಧ ಪಕ್ಷಗಳ ನಾಯಕರನ್ನು ಬೇಟೆಯಾಡಲು ಬಿಜೆಪಿ ಸ್ಥಳೀಯ ಆಡಳಿತವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಪವನ್ ಕುಮಾರ್ ಬನ್ಸಾಲ್ ಆರೋಪಿಸಿದ್ದಾರೆ.

ಮುಂಬರುವ ಚಂಡೀಗಢ ಮೇಯರ್ ಚುನಾವಣೆಗೆ ಆಪ್ ಮತ್ತು ಕಾಂಗ್ರೆಸ್ ಸೋಮವಾರ ಮೈತ್ರಿ ಮಾಡಿಕೊಂಡಿವೆ.

ಈ ಒಪ್ಪಂದದ ಪ್ರಕಾರ, ಆಮ್ ಆದ್ಮಿ ಪಕ್ಷ (ಎಎಪಿ) ಮೇಯರ್ ಸ್ಥಾನಕ್ಕಾಗಿ ಹೋರಾಡಲಿದೆ ಮತ್ತು ಕಾಂಗ್ರೆಸ್ ಹಿರಿಯ ಉಪಮೇಯರ್ ಮತ್ತು ಉಪಮೇಯರ್ ಹುದ್ದೆಗಳಿಗೆ ಸ್ಪರ್ಧಿಸಲಿದೆ. 35 ಸದಸ್ಯ ಬಲದ ಚಂಡೀಗಢ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 14 ಕೌನ್ಸಿಲರ್‌ಗಳನ್ನು ಹೊಂದಿದೆ. ಇದು ಮತದಾನದ ಹಕ್ಕು ಹೊಂದಿರುವ ಪದನಿಮಿತ್ತ ಸದಸ್ಯ ಎಂಪಿಯನ್ನು ಸಹ ಹೊಂದಿದೆ.

ಎಎಪಿ 13 ಮತ್ತು ಕಾಂಗ್ರೆಸ್ ಏಳು ಕೌನ್ಸಿಲರ್‌ಗಳನ್ನು ಹೊಂದಿದೆ. ಶಿರೋಮಣಿ ಅಕಾಲಿ ದಳವು ತನ್ನ ಏಕೈಕ ಕೌನ್ಸಿಲರ್ ಅನ್ನು ಹೊಂದಿದೆ. ಮೇಯರ್, ಹಿರಿಯ ಉಪಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ನಾಳೆ ಗುರುವಾರ ಚುನಾವಣೆ ನಡೆಯಲಿದೆ.

ಇದನ್ನೂ ಓದಿ; ಮಣಿಪುರ ಗಲಭೆ: ಕರ್ಫ್ಯೂ ನಡುವೆಯೆ ಮೊರೆಹ್‌ನಲ್ಲಿ ಐಆರ್‌ಬಿ ಯೋಧನ ಹತ್ಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆಂಧ್ರಪ್ರದೇಶ: 7 ಮತಗಟ್ಟೆಗಳಲ್ಲಿ ಇವಿಎಂ ಧ್ವಂಸ ಮಾಡಿದ ಶಾಸಕ

0
ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರು ಮತಗಟ್ಟೆಯಲ್ಲಿ ವಿವಿಪ್ಯಾಟ್‌ ಯಂತ್ರವನ್ನು ನೆಲಕ್ಕೆ ಎಸೆದು ಒಡೆದು ಹಾಕಿರುವ ಘಟನೆಯ ವಿಡಿಯೋ ವೈರಲ್‌ ಆಗಿದೆ. ಇದೇ ರೀತಿ 7 ಮತಗಟ್ಟೆಗಳಲ್ಲಿ ಶಾಸಕ ಇವಿಎಂ ಯಂತ್ರವನ್ನು...