Homeಮುಖಪುಟಚಂಡೀಗಢ ಮೇಯರ್ ಚುನಾವಣೆ: 'ಬ್ಯಾಲೆಟ್ ಪೇಪರ್ ಟ್ಯಾಂಪರಿಂಗ್' ವಿಡಿಯೋ ಬಿಡುಗಡೆ

ಚಂಡೀಗಢ ಮೇಯರ್ ಚುನಾವಣೆ: ‘ಬ್ಯಾಲೆಟ್ ಪೇಪರ್ ಟ್ಯಾಂಪರಿಂಗ್’ ವಿಡಿಯೋ ಬಿಡುಗಡೆ

- Advertisement -
- Advertisement -

ಚಂಡೀಗಢದ ಮೇಯರ್ ಚುನಾವಣೆಯ ಮತದಾನದ ರದ್ದತಿಯನ್ನು ಪ್ರಜಾಪ್ರಭುತ್ವದ ಅಪಹಾಸ್ಯ ಎಂದು ಸುಪ್ರೀಂ ಕೋರ್ಟ್ ಕರೆದ ಕೆಲವೇ ಗಂಟೆಗಳ ನಂತರ, ಆಮ್ ಆದ್ಮಿ ಪಕ್ಷವು ಸೋಮವಾರ ಮತಪತ್ರಗಳನ್ನು ಅಮಾನ್ಯವೆಂದು ಘೋಷಿಸುವ ಮೊದಲು ಮತಪತ್ರಗಳನ್ನು ತಿರುಚಿದ ಹೊಸ ವೀಡಿಯೊವನ್ನು ಬಿಡುಗಡೆ ಮಾಡಿದೆ. ಬಿಜೆಪಿಯ ಸರ್ವಾಧಿಕಾರಕ್ಕೆ ಈ ವಿಡಿಯೋ ಜೀವಂತ ಸಾಕ್ಷಿಯಾಗಿದೆ ಎಂದು ಪಕ್ಷ ಹೇಳಿದೆ.

‘ಈಗ ಒಪ್ಪಿಕೊಳ್ಳಿ ಬಿಜೆಪಿ, ಇದಕ್ಕಿಂತ ದೊಡ್ಡ ಪುರಾವೆ ಬೇಕೇ? ಬಿಜೆಪಿಯ ಚುನಾವಣಾ ಅಧ್ಯಕ್ಷರೆ ಬಹಿರಂಗವಾಗಿ ಮತಗಳನ್ನು ರದ್ದುಪಡಿಸುವ ಮೂಲಕ ಪ್ರಜಾಪ್ರಭುತ್ವವನ್ನು ಹೇಗೆ ನಾಶಪಡಿಸಿದರು ಎಂಬುದನ್ನು ನೋಡಿ. ಇದು ಬಿಜೆಪಿಯ ಸರ್ವಾಧಿಕಾರಕ್ಕೆ ಜೀವಂತ ಸಾಕ್ಷಿ’ ಎಂದು ಆಪ್ ಕಿಡಿಕಾರಿದೆ.

ಚುನಾವಣಾ ಅಧಿಕಾರಿಯಾಗಿದ್ದ ಅನಿಲ್ ಮಸಿಹ್ ಅವರು 8 ಮತಗಳು ಅಸಿಂಧು ಎಂದು ಘೋಷಿಸಿದ ನಂತರ, ಚಂಡೀಗಢ ಮುನ್ಸಿಪಲ್ ಕೌನ್ಸಿಲ್‌ನಲ್ಲಿ ಕಾಂಗ್ರೆಸ್-ಎಎಪಿ ಮೈತ್ರಿಕೂಟಕ್ಕಿದ್ದ ಬಹುಮತದ ಹೊರತಾಗಿಯೂ ಬಿಜೆಪಿಯ ಅಭ್ಯರ್ಥಿ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಗೆದ್ದರು. ಫಲಿತಾಂಶದ ನಂತರ ಚುನಾವಣಾ ಪ್ರಕ್ರಿಯೆ ವಿರುದ್ಧ ಎಎಪಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಚುನಾವಣಾಧಿಕಾರಿ ಮತಪತ್ರಗಳನ್ನು ವಿರೂಪಗೊಳಿಸಿರುವುದನ್ನು ಸೋಮವಾರ ನ್ಯಾಯಾಲಯ ಗಮನಿಸಿದೆ. ಇದು ಪ್ರಜಾಪ್ರಭುತ್ವದ ಅಣಕ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ.

‘ಇವರು ಚುನಾವಣೆ ನಡೆಸುವುದು ಹೀಗೆಯೇ? ಇದು ಪ್ರಜಾಪ್ರಭುತ್ವದ ಅಣಕ, ಇದು ಪ್ರಜಾಪ್ರಭುತ್ವದ ಕೊಲೆ. ನಾವು ದಿಗ್ಭ್ರಮೆಗೊಂಡಿದ್ದೇವೆ. ಈ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇದು ಚುನಾವಣಾಧಿಕಾರಿಯ ವರ್ತನೆಯೇ’ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದರು.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಮೂಲಕ ಬ್ಯಾಲೆಟ್ ಪೇಪರ್‌ಗಳು, ವಿಡಿಯೋಗ್ರಫಿ ಮತ್ತು ಇತರ ವಸ್ತುಗಳನ್ನು ಒಳಗೊಂಡಂತೆ ಚುನಾವಣಾ ಪ್ರಕ್ರಿಯೆಯ ಸಂಪೂರ್ಣ ದಾಖಲೆಯನ್ನು ಸಂರಕ್ಷಿಸಲು ಸುಪ್ರೀಂ ಕೋರ್ಟ್ ನಂತರ ಅಧಿಕಾರಿಗಳಿಗೆ ಸೂಚಿಸಿತು.

ಜನವರಿ 30ರಂದು ಬಿಜೆಪಿಯ ಪ್ರತಿಸ್ಪರ್ಧಿ ಮನೋಜ್ ಸೋಂಕರ್ ವಿರುದ್ಧ ಸೋತ ಎಎಪಿ ಅಭ್ಯರ್ಥಿ ಕುಲದೀಪ್ ಧಲೋರ್ ಅವರ ಮನವಿಯನ್ನು ಆಲಿಸಿದ ನ್ಯಾಯಾಲಯ, ಸಭಾಧ್ಯಕ್ಷರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಹೇಳಿದೆ. ಅವರ ನಡವಳಿಕೆಯಿಂದ ನಮಗೆ ದಿಗಿಲಾಯಿತು ಎಂದು ಕೋರ್ಟ್ ಆತಂಕ ವ್ಯಕ್ತಪಡಿಸಿದೆ.

‘ಪ್ರಜಾಪ್ರಭುತ್ವದಲ್ಲಿ ಸ್ಥಿರಗೊಳಿಸುವ ಏಕೈಕ ವಿಷಯವೆಂದರೆ ನಮ್ಮ ಚುನಾವಣಾ ಪ್ರಕ್ರಿಯೆಯ ಶುದ್ಧತೆ. ಆದರೆ, ಇಲ್ಲಿ ಏನಾಗುತ್ತಿದೆ? ಪ್ರಜಾಪ್ರಭುತ್ವವನ್ನು ಕೊಲೆ ಮಾಡಲು ನಾವು ಬಿಡುವುದಿಲ್ಲ’ ಎಂದು ಸಿಜೆಐ ಚಂದ್ರಚೂಡ್ ಹೇಳಿದರು. ಫೆಬ್ರವರಿ 19 ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಪೀಠವು ಚುನಾವಣಾಧಿಕಾರಿ ಅನಿಲ್ ಮಸಿಹ್ ಅವರಿಗೆ ನಿರ್ದೇಶನ ನೀಡಿ ನೋಟಿಸ್ ನೀಡಿತು.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...

ಬಿಜೆಪಿ ಆಡಳಿತದಲ್ಲಿ 151 ಅಂಬೇಡ್ಕರ್ ಪ್ರತಿಮೆಗಳ ಧ್ವಂಸ: ಅಖಿಲೇಶ್ ಯಾದವ್ ಆರೋಪ

ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ 72 ಜಿಲ್ಲೆಗಳಲ್ಲಿ ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ 151 ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ಆದರೆ ಈವರೆಗೆ ಕೇವಲ 14 ಮಂದಿಯನ್ನು ಮಾತ್ರ ಬಂಧಿಸಲಾಗಿದೆ ಎಂದು ಸಮಾಜವಾದಿ ಪಕ್ಷದ...

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...