Homeಮುಖಪುಟಚಂಡೀಗಢ ಮೇಯರ್ ಚುನಾವಣೆ: ತಿರಸ್ಕೃತ ಮತಗಳನ್ನು ತೋರಿಸದ ಚುನಾವಣಾ ಅಧಿಕಾರಿ, ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

ಚಂಡೀಗಢ ಮೇಯರ್ ಚುನಾವಣೆ: ತಿರಸ್ಕೃತ ಮತಗಳನ್ನು ತೋರಿಸದ ಚುನಾವಣಾ ಅಧಿಕಾರಿ, ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

- Advertisement -
- Advertisement -

‘ಚುನಾವಣಾ ಅಧಿಕಾರಿ ಫಲಿತಾಂಶ ಪ್ರಕಟಿಸಿದಾಗ, ಬಿಜೆಪಿ ವಿಜೇತ ಅಭ್ಯರ್ಥಿ ಓಡಿಬಂದು ಮೇಯರ್ ಕುರ್ಚಿಯ ಮೇಲೆ ಕುಳಿತುಕೊಳ್ಳುತ್ತಾರೆ. ಕೂಡಲೇ ಚುನಾವಣಾ ಅಧಿಕಾರಿಯು ತಾನು ತಿರಸ್ಕರಿಸಿದ ಮತಗಳನ್ನು ಸದಸ್ಯರ ಏಜೆಂಟಿಗೆ ತೋರಿಸದೆ ನಿರ್ಗಮಿಸಿದ್ದು, ಸ್ಥಳದಲ್ಲಿ ವಾದವಿವಾದ ಉಂಟಾಗಿದೆ’. ಇದಿಷ್ಟು ಇಂದು ನಡೆದ ಚಂಡೀಗಢ ಮೇಯರ್ ಚುನಾವಣೆ ಸಂದರ್ಭದಲ್ಲಿ ಕಂಡುಬಂದ ಚಿತ್ರಣ. ಕಾಂಗ್ರೆಸ್-ಎಎಪಿ ಮೈತ್ರಿ ಪಕ್ಷವು 20 ಸದಸ್ಯರನ್ನು ಹೊಂದಿದ್ದರೂ, ಕೇವಲ 14 ಸದಸ್ಯರಿರುವ ಬಿಜೆಪಿ ಮೇಯರ್ ಸ್ಥಾನ ಪಡೆದುಕೊಂಡಿರುವುದು ಚರ್ಚೆಗೆ ಕಾರಣವಾಗಿದೆ.

ಪ್ರತಿಪಕ್ಷಗಳ ಆಕ್ರೋಶದ ನಡುವೆಯೆ ಬಿಜೆಪಿ ನಾಯಕ ಮನೋಜ್ ಸೋಂಕರ್ ಅವರು ಮಂಗಳವಾರ ಚಂಡೀಗಢ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. 36 ಮತಗಳ ಪೈಕಿ ಎಂಟು ಮತಗಳು ಅಸಿಂಧು ಎಂದು ಘೋಷಿಸಲಾಯಿತು. ಎಎಪಿ-ಕಾಂಗ್ರೆಸ್ ಗುಂಪು ಈ ವಿಷಯವನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನಲ್ಲಿ ಪ್ರಶ್ನಿಸಲು ತೀರ್ಮಾನ ತೆಗೆದುಕೊಂಡಿವೆ.

36 ಮತಗಳಲ್ಲಿ ಸೋಂಕರ್ 16 ಮತಗಳನ್ನು ಪಡೆದು ಉನ್ನತ ಸ್ಥಾನವನ್ನು ಪಡೆದುಕೊಂಡರೆ, ಇಂಡಿಯಾ ಬ್ಲಾಕ್‌ನ ಎಎಪಿ ಅಭ್ಯರ್ಥಿ ಕುಲದೀಪ್ ಸಿಂಗ್ 12 ಮತಗಳನ್ನು ಪಡೆದರು. ವಿರೋಧ ಪಕ್ಷಗಳ ಎಂಟು ಮತಗಳನ್ನು ಚುನಾವಣಾ ಅಧಿಕಾರ ಅಮಾನ್ಯವೆಂದು ಘೋಷಿಸಿದರು. ಆದರೆ, ಅದಕ್ಕೆ ಕಾರಣ ತಿಳಿಸದೆ ಅಲ್ಲಿಂದ ನಿರ್ಗಮಿಸಿದರು.

ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್ 35 ಸದಸ್ಯರನ್ನು ಹೊಂದಿದೆ ಮತ್ತು ಮತದಾನದ ಹಕ್ಕು ಹೊಂದಿರುವ ನಾಮನಿರ್ದೇಶಿತ ಸದಸ್ಯರನ್ನು ಹೊಂದಿದೆ. ಪ್ರಸ್ತುತ ಬಿಜೆಪಿ ಸಂಸದ ಕಿರಣ್ ಖೇರ್ ಅವರು ಈ ಹುದ್ದೆಯನ್ನು ಹೊಂದಿದ್ದಾರೆ. ಎಎಪಿ ಪ್ರಸ್ತುತ 13 ಕೌನ್ಸಿಲರ್‌ಗಳನ್ನು ಹೊಂದಿದ್ದರೆ, ಕಾಂಗ್ರೆಸ್ ಏಳು ಸದಸ್ಯರನ್ನು ಹೊಂದಿದೆ. ಬಿಜೆಪಿ 14 ಸದಸ್ಯರು ಮತ್ತು ಶಿರೋಮಣಿ ಅಕಾಲಿದಳದ ಇಬ್ಬರು ಸದಸ್ಯರಿದ್ದಾರೆ.

ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಮೊದಲ ಬಾರಿಗೆ 36 ಮತಗಳಲ್ಲಿ ಎಂಟು ಅಸಿಂಧು ಎಂದು ಘೋಷಿಸಲಾಯಿತು. ಕಾಂಗ್ರೆಸ್ ಮತ್ತು ಎಎಪಿ ಮೈತ್ರಿಕೂಟ 20 ಮತಗಳನ್ನು ಪಡೆಯಬೇಕಿತ್ತು. ನಮಗೆ 12 ಮತಗಳು ಬಂದಿದ್ದು, ಎಂಟು ಮತಗಳು ಅಸಿಂಧುವಾಗಿವೆ. ಬಿಜೆಪಿಯ ಒಂದು ಮತವೂ ಅಸಿಂಧು ಎಂದು ಘೋಷಣೆಯಾಗಿಲ್ಲ… ಮುಂಬರುವ 2024ರ ಚುನಾವಣೆಯಲ್ಲಿ ಏನಾಗುತ್ತದೋ ಎಂಬ ಆತಂಕ ನಮ್ಮನ್ನು ಕಾಡುತ್ತಿದೆ. ಬಿಜೆಪಿಯು ಇಂತಹ ಕೀಳು ಮಟ್ಟಕ್ಕೆ ಇಳಿದು ನಕಲಿ ಮತ್ತು ಅಕ್ರಮ ಎಸಗಲು ಸಾಧ್ಯವಾದರೆ… ಅದು ಯಾವುದೇ ಹಂತಕ್ಕೆ ಹೋಗಬಹುದು’ ಎಂದು ಆಪ್ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.

‘ಇದು ದರೋಡೆ. ಚಂಡೀಗಢದಲ್ಲಿ 36 ಕೌನ್ಸಿಲರ್ ಸ್ಥಾನಗಳಿದ್ದು, ಅದರಲ್ಲಿ 14 ಸ್ಥಾನಗಳು ಬಿಜೆಪಿ. 13 ಸ್ಥಾನಗಳು ಎಎಪಿ ಮತ್ತು ಏಳು ಸ್ಥಾನಗಳು ಕಾಂಗ್ರೆಸ್. ಒಟ್ಟು ಎಎಪಿ (13 + 7) 20 ಸ್ಥಾನಗಳನ್ನು ಹೊಂದಿದೆ…ಬಿಜೆಪಿ ಬಣ್ಣ ಮತ್ತೆ ಬಹಿರಂಗವಾಗಿದೆ…” ಎಂದು ಪಕ್ಷದ ಸಹ ನಾಯಕ ಸೌರಭ್ ಭಾರದ್ವಾಜ್ ವಾಗ್ದಾಳಿ ನಡೆಸಿದ್ದಾರೆ.

ಪ್ರಜಾಪ್ರಭುತ್ವದ ಗೆಲುವು ಎಂದ ಬಿಜೆಪಿಗರು

ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಕೇಸರಿ ಪಕ್ಷದ ನಾಯಕರು, “ಪ್ರಜಾಪ್ರಭುತ್ವದ ಗೆಲುವು ಮತ್ತು ಎಎಪಿ ಮತ್ತು ಕಾಂಗ್ರೆಸ್‌ನ ‘ತಗ್ಬಂಧನ್’ ಸೋಲು” ಎಂದು ಹೇಳಿದ್ದಾರೆ. ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರು ಇಂಡಿಯಾ ಬಣದ ಸೋಲು; ಅವರ ಅಂಕಗಣಿತವು ಕಾರ್ಯನಿರ್ವಹಿಸುತ್ತಿಲ್ಲ ಅಥವಾ ಅವರ ರಸಾಯನಶಾಸ್ತ್ರ ಕೆಲಸ ಮಾಡುತ್ತಿಲ್ಲ ಎಂಬುದನ್ನು ತೋರಿಸುತ್ತದೆ” ಎಂದು ಲೇವಡಿ ಮಾಡಿದ್ದಾರೆ.

‘ಚಂಡೀಗಢ ಮೇಯರ್ ಚುನಾವಣೆಯಲ್ಲಿ ಹಗಲು ಹೊತ್ತಿನಲ್ಲಿ ಅಪ್ರಾಮಾಣಿಕತೆ ನಡೆಸಿರುವ ರೀತಿ ಅತ್ಯಂತ ಕಳವಳಕಾರಿಯಾಗಿದೆ. ಈ ಜನರು ಮೇಯರ್ ಚುನಾವಣೆಯಲ್ಲಿ ಇಷ್ಟು ಕೆಳಮಟ್ಟಕ್ಕೆ ಇಳಿದರೆ, ದೇಶದ ಚುನಾವಣೆಯಲ್ಲಿ ಅವರು ಯಾವುದೇ ಮಟ್ಟಕ್ಕೆ ಹೋಗಬಹುದು. ಇದು ತುಂಬಾ ಕಳವಳಕಾರಿಯಾಗಿದೆ’ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ‘ಹಿರಿಯ ಅಧಿಕಾರಿಯೊಬ್ಬರು ಮತಗಳನ್ನು ದುರ್ಬಳಕೆ ಮಾಡುತ್ತಿದ್ದಾರೆ’ ಎಂದು ಪ್ರತಿಪಾದಿಸಲು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಇದು ಅವರ ಹಳೆಯ ಅಭ್ಯಾಸ

‘ಇಂದು ನಮ್ಮ ದೇಶದ ಪ್ರಜಾಪ್ರಭುತ್ವದಲ್ಲಿ “ಕಪ್ಪು ದಿನ” ಎಂದು ಬರೆಯಲಾಗುತ್ತದೆ. ದುರದೃಷ್ಟವಶಾತ್, ನಾವು ಗಣರಾಜ್ಯೋತ್ಸವವನ್ನು ಆಚರಿಸುವುದು ಇದೇ ತಿಂಗಳು. ಇಂದು ಸಂವಿಧಾನ ಛಿದ್ರಗೊಂಡಿದೆ. ಚಂಡೀಗಢ ಮೇಯರ್ ಚುನಾವಣೆಯನ್ನು ಬಿಜೆಪಿಯವರು ಮಾಧ್ಯಮಗಳ ಮುಂದೆ, ಕ್ಯಾಮರಾಗಳ ಮುಂದೆ ‘ಲೂಟಿ’ ಮಾಡಿದ ರೀತಿ. ಅವರು ಈ ಮೊದಲು ಮಧ್ಯಪ್ರದೇಶ, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಈಶಾನ್ಯ ರಾಜ್ಯಗಳಲ್ಲಿ ಇದನ್ನು ಮಾಡಿದರು. ಹಾಗಾಗಿ, ಇದು ಅವರ ಹಳೆಯ ಅಭ್ಯಾಸ’ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆಕ್ರೋಶ ಹೊರಹಾಕಿದ್ದಾರೆ.

ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

ಬಿಜೆಪಿ ಮತ್ತು ಇಂಡಿಯಾ ಮೈತ್ರಿಕೂಟದ ನಡುವಿನ ಮೊದಲ ಪ್ರಮುಖ ಸ್ಪರ್ಧೆ ಎಂದು ಬಿಂಬಿಸಲಾಗಿದ್ದ ಆಘಾತಕಾರಿ ಹಿನ್ನಡೆಯ ನಂತರ, ಚಂಡೀಗಢದ ಮೇಯರ್ ಚುನಾವಣೆಗೆ ಎಎಪಿ ಅಭ್ಯರ್ಥಿ ಕ್ಯಾಮರಾಗಳ ಮುಂದೆ ಅಳಲು ತೋಡಿಕೊಂಡರು. ಮೇಯರ್ ಸ್ಥಾನಕ್ಕೆ ಅಭ್ಯರ್ಥಿಯಾಗಿದ್ದ ಕುಲದೀಪ್ ಕುಮಾರ್ ಅವರು ಬಿಜೆಪಿಯ ಮನೋಜ್ ಸೋಂಕರ್ ಅವರಿಂದ ಪರಾಭವಗೊಂಡಿದ್ದು, ಸುತ್ತಮುತ್ತಲಿನ ಜನರು ಅವರನ್ನು ಸಮಾಧಾನಪಡಿಸಿ ಘೋಷಣೆಗಳನ್ನು ಕೂಗುತ್ತಿದ್ದರೂ ಅವರು ಕಣ್ಣೀರು ಸುರಿಸುವುದನ್ನು ನಿಲ್ಲಿಸಲಿಲ್ಲ.

ಇದನ್ನೂ ಓದಿ; ಇಂಡಿಯಾ ಬಣಕ್ಕೆ ಆರಂಭಿಕ ಆಘಾತ; ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...