Homeಮುಖಪುಟಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

ಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

- Advertisement -
- Advertisement -

ರೈತರ ಒಂದು ವರ್ಷ ನಿರಂತರ ನಡೆಸಿದ ಹೋರಾಟದ ಫಲವಾಗಿ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ರದ್ದುಗೊಳಿಸಿದ್ದಾರೆ. ವಿಶೇಷವೆಂದರೆ ಒಂದು ವರ್ಷ ಕಾಲ ರೈತರನ್ನು ಚಳವಳಿಗೆ ದೂಡಿದ್ದು, ಚುನಾವಣೆಗಳಲ್ಲಿ ಬಿಜೆಪಿಗೆ ಹೊಡೆತ ನೀಡುವ ಸಾಧ್ಯತೆಯನ್ನು ಹುಟ್ಟು ಹಾಕಿತ್ತು. ಈ ಹಿನ್ನೆಲೆಯಲ್ಲಿ ಚಂಡೀಗಢ ಮುನ್ಸಿಪಲ್‌ ಕಾರ್ಪೋರೇಷನ್‌ ಚುನಾವಣೆಯ ಫಲಿತಾಂಶವನ್ನು ಬಹು ಆಯಾಮದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಕೃಷಿ ಕಾಯ್ದೆಗಳನ್ನು ರದ್ದು ಮಾಡಿದ ಬಳಿಕ ನಡೆದ ಮೊದಲ ಚುನಾವಣೆ ಎಂಬ ಕಾರಣಕ್ಕೂ ಈ ಚುನಾವಣೆ ಗಮನ ಸೆಳೆದಿದ್ದು, ಬಿಜೆಪಿ ತನ್ನ ಅಧಿಕಾರವನ್ನು ಕಳೆದುಕೊಂಡು ಮುಖಭಂಗ ಅನುಭವಿಸಿದೆ. ಮೊದಲ ಭಾರಿಗೆ ಇಲ್ಲಿ ಕಣಕ್ಕಿಳಿದಿದ್ದ ಆಮ್‌ ಆದ್ಮಿ ಪಕ್ಷ 35 ಸ್ಥಾನಗಳಲ್ಲಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಹೆಚ್ಚು ಸ್ಥಾನಗಳನ್ನು ಗೆದ್ದ ಪಕ್ಷವಾಗಿ ಹೊರ ಹೊಮ್ಮಿದೆ.

ಬಿಜೆಪಿ-ವಿರೋಧಿ ಮತಗಳನ್ನು ಕಾಂಗ್ರೆಸ್ ಪಡೆದುಕೊಳ್ಳುತ್ತದೆ ಎಂದು ಊಹಿಸಲಾಗಿದ್ದರೂ, ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್‌ನ 35 ಸದಸ್ಯ ಸ್ಥಾನಗಳಲ್ಲಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಎಎಪಿ ಗಮನ ಸೆಳೆದಿದೆ.

ಆಡಳಿತಾರೂಢ ಬಿಜೆಪಿ 12 ಸ್ಥಾನಗಳಿಗೆ ಕುಸಿದಿದ್ದರೆ, ಕಾಂಗ್ರೆಸ್ 8 ಸ್ಥಾನಗಳಿಗಿಂತ ಹೆಚ್ಚು ಗೆಲ್ಲಲು ಸಾಧ್ಯವಾಗಲಿಲ್ಲ. ಒಂದು ಸ್ಥಾನವನ್ನು ಶಿರೋಮಣಿ ಅಕಾಲಿದಳ ಗೆದ್ದಿದೆ. ಈ ಚುನಾವಣೆ ಫಲಿತಾಂಶ ಮುಂಬರುವ ಚುನಾವಣೆಗೆ ಅಸ್ತ್ರವಾಗುವ ಸಾಧ್ಯತೆ ಇದೆ.

“ಕೃಷಿ ಕಾನೂನುಗಳ ಜಾರಿ ಮತ್ತು ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿರುವುದು ಫಲಿತಾಂಶದಿಂದ ಸ್ಪಷ್ಟವಾಗುತ್ತದೆ” ಎಂದು ಎಎಪಿಯ ಚಂಡೀಗಢ ಸಂಚಾಲಕ ಪ್ರೇಮ್ ಗಾರ್ಗ್ ‘ದಿ ವೈರ್‌’ಗೆ ತಿಳಿಸಿದ್ದಾರೆ.

“ಬಿಜೆಪಿಯ ದುರಾಡಳಿತಕ್ಕೆ ಚಂಡೀಗಢದಲ್ಲಿ ಜನರು ದೊಡ್ಡ ಪಾಠವನ್ನು ಕಲಿಸಿದ್ದಾರೆ. ಇದರಲ್ಲಿ ಕಳೆದ ಐದು ವರ್ಷಗಳ ಆಡಳಿತಾವಧಿಯಲ್ಲಿ ನಾಗರಿಕರಿಗೆ ಮೂಲಸೌಕರ್ಯಗಳನ್ನು ಬಿಜೆಪಿ ಕಲ್ಪಿಸಿಲ್ಲ” ಎಂದು ದೂರಿದ್ದಾರೆ.

ಕಾಂಗ್ರೆಸ್‌ಗೆ ಮತ ಹಾಕದಿರುವ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್‌ಗಿಂತ ಭಿನ್ನ ರಾಜಕಾರಣ ಬೇಕು ಎಂಬ ಸ್ಪಷ್ಟ ಸಂದೇಶವನ್ನು ಜನರು ರವಾನಿಸಿದ್ದಾರೆ. ಚಂಡೀಗಢ ಕೇವಲ ಟ್ರೇಲರ್. ಪಂಜಾಬ್ ನಮ್ಮ ಮುಂದಿನ ಗುರಿಯಾಗಿದೆ. ಅಲ್ಲಿ ಜನರು ಸಾಂಪ್ರದಾಯಿಕ ಪಕ್ಷಗಳಿಂದ ದೂರವಿದ್ದು, ಬದಲಾವಣೆಗೆ ಮತ ಹಾಕುತ್ತಾರೆ ಎಂದಿದ್ದಾರೆ.

2016ರ ಚುನಾವಣೆಯಲ್ಲಿ 26 ವಾರ್ಡ್‌‌ಗಳಲ್ಲಿ 21 ಸ್ಥಾನಗಳನ್ನು ಬಿಜೆಪಿ ಪಡೆದಿತ್ತು. (ಈ ಬಾರಿ ಸದಸ್ಯ ಸ್ಥಾನಗಳನ್ನು 35 ಸ್ಥಾನಗಳಿಗೆ ಹೆಚ್ಚಿಸಲಾಯಿತು). ಮೇಯರ್ ಸ್ಥಾನಕ್ಕಾಗಿ ಬಿಜೆಪಿಯೊಳಗೆ ನಿರಂತರವಾದ ಒಳಜಗಳಗಳು ನಡೆಯುತ್ತಿದ್ದವು. ಅಭಿವೃದ್ಧಿಯತ್ತ ಗಮನ ಹರಿಸದೆ ಇದ್ದದ್ದು ಬಿಜೆಪಿಗೆ ಮುಳವಾಯಿತು ಎಂದು ರಾಜಕೀಯ ವಿಶ್ಲೇಷಣೆಗಳು ಮೂಡಿಬಂದಿವೆ.

ಹಲವಾರು ಕಾಂಗ್ರೆಸ್ ಮುಖಂಡರು ಎಎಪಿಗೆ ಪಕ್ಷಾಂತರಗೊಂಡಿದ್ದು ಎಎಪಿ ಗೆಲುವಿಗೆ ಕಾರಣವಾಯಿತು. 2019ರ ಲೋಕಸಭಾ ಚುನಾವಣೆಯಲ್ಲಿ, ಇಲ್ಲಿ ಎಎಪಿಗೆ ಮತ ಹಂಚಿಕೆ ಕೇವಲ 3.8% ಆಗಿತ್ತು. ಪಾಲಿಕೆ ಚುನಾವಣೆಯಲ್ಲಿ ಮತ ಹಂಚಿಕೆ ಶೇ.27ಕ್ಕೆ ಏರಿಕೆಯಾಗಿದೆ.


ಇದನ್ನೂ ಓದಿರಿ: ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...