Homeಮುಖಪುಟಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕಾರ

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕಾರ

- Advertisement -
- Advertisement -

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು  ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ಈ ಬಾರಿ ಪ್ರಮಾಣ ಸ್ವೀಕರಿಸಿದ್ದರಿಂದ ನಾಲ್ಕನೇ ಅವಧಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಂತಾಗುತ್ತದೆ.

ಚಂದ್ರಬಾಬು ನಾಯ್ಡು ಜೊತೆಗೆ ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ‘ಪವರ್ ಸ್ಟಾರ್’ ಪವನ್ ಕಲ್ಯಾಣ್ ಕೂಡ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದರೊಂದಿಗೆ ಚಂದ್ರಬಾಬು ನಾಯ್ಡು ಅವರು ಆಂಧ್ರದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಬರೆದಿದ್ದಾರೆ. ಕೇವಲ ತಿಂಗಳುಗಳ ಹಿಂದೆಯಷ್ಠೇ ಕೌಶಲ್ಯ ಅಭಿವೃದ್ಧಿ ಹಗರಣಕ್ಕೆ ಸಂಬಂಧಿಸಿ ಮನಿ ಲಾಂಡರಿಂಗ್ ತನಿಖೆಯಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ನಂತರ ಅವರು ಜೈಲು ಸೇರಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ, ನಾಯ್ಡು ಅವರು ಟಿಡಿಪಿಯನ್ನು ಬಿಜೆಪಿ ಮತ್ತು ಜನಸೇನೆಯೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸಿದ್ದರು ಮತ್ತು ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು.

ಪವನ್ ಕಲ್ಯಾಣ್ ಅವರೊಂದಿಗೆ ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಸೇರಿದಂತೆ 23 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜನಸೇನೆಗೆ ಮೂರು ಕ್ಯಾಬಿನೆಟ್ ಸ್ಥಾನಗಳು ದೊರೆತಿದ್ದರೆ, ಬಿಜೆಪಿಯ ಸತ್ಯ ಕುಮಾರ್ ಯಾದವ್ ಅವರಿಗೆ ಕೂಡ ಆಂಧ್ರಪ್ರದೇಶದ ಸಚಿವ ಸಂಪುಟದಲ್ಲಿ ಅವಕಾಶವನ್ನು ನೀಡಲಾಗಿದೆ.

ವಿಜಯವಾಡದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೂಪರ್‌ಸ್ಟಾರ್ ರಜನಿಕಾಂತ್, ನಟ ಚಿರಂಜೀವಿ, ತೆಲಂಗಾಣ ಮಾಜಿ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಮತ್ತು ಹಲವಾರು ನಾಯಕರು ಉಪಸ್ಥಿತರಿದ್ದರು.

2024ರ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 175 ಸ್ಥಾನಗಳಲ್ಲಿ 164 ಸ್ಥಾನಗಳನ್ನು ಗಳಿಸಿದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA)ಗೆ ಪ್ರಚಂಡ ವಿಜಯವನ್ನು ನೀಡಿತ್ತು. ಟಿಡಿಪಿ ಏಕಾಂಗಿಯಾಗಿ 135 ಸ್ಥಾನಗಳನ್ನು ಗೆದ್ದರೆ, ಪವನ್ ಕಲ್ಯಾಣ್ ಅವರ ಜನಸೇನೆ 21 ಸ್ಥಾನಗಳನ್ನು ಗಳಿಸಿತ್ತು ಮತ್ತು ಬಿಜೆಪಿ 8 ಸ್ಥಾನಗಳನ್ನು ಗಳಿಸಿತ್ತು. ಆಡಳಿತರೂಢ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ಕೇವಲ 11 ಸ್ಥಾನಗಳನ್ನು ಮಾತ್ರ ಗಳಿಸಿಕೊಂಡಿದೆ.

ಮಂಗಳವಾರ ಮುಂಜಾನೆ ತೆಲುಗು ದೇಶಂ ಶಾಸಕಾಂಗ ಪಕ್ಷ ಮತ್ತು ಎನ್‌ಡಿಎ ಪಾಲುದಾರರು ನಾಯ್ಡು ಅವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ್ದರು. ಶಾಸಕರನ್ನು ಉದ್ದೇಶಿಸಿ ಮಾತನಾಡಿದ ನಾಯ್ಡು, ರಾಜ್ಯದ ಏಕೈಕ ರಾಜಧಾನಿಯಾಗಿ ಅಮರಾವತಿಯನ್ನು ಅಭಿವೃದ್ಧಿಪಡಿಸಲು ನಾನು ಬದ್ಧನಾಗಿದ್ದೇನೆ ಎಂದು ಹೇಳಿದ್ದರು.

ಇದನ್ನು ಓದಿ: ಘರ್ ವಾಪ್ಸಿ: ಎನ್‌ಸಿಪಿ ಶಾಸಕರ ಭೇಟಿಗೆ ಸಿದ್ಧರಿರುವುದಾಗಿ ಹೇಳಿದ ಸುಪ್ರಿಯಾ ಸುಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...