Homeಕರ್ನಾಟಕನುಡಿನಮನ: ಕಳಚಿತು ಜನಪರ ಚಳವಳಿಯ ಮತ್ತೊಂದು ಕೊಂಡಿ

ನುಡಿನಮನ: ಕಳಚಿತು ಜನಪರ ಚಳವಳಿಯ ಮತ್ತೊಂದು ಕೊಂಡಿ

- Advertisement -
- Advertisement -

ನಮ್ಮ ಪ್ರೀತಿಯ ಚಂದ್ರಶೇಖರ ಪಾಟೀಲರು (ಚಂಪಾ, ಜೂನ್‌ 18, 1939– ಜನವರಿ 10, 2022) ಇಂದು ಬೆಳಿಗ್ಗೆ 6.30ಕ್ಕೆ ಬೆಂಗಳೂರಲ್ಲಿ ನಿಧನರಾಗಿದ್ದಾರೆ. ಅವರು 1980ರ ಬಂಡಾಯ ಚಳುವಳಿಯಲ್ಲಿ ಬರಗೂರರೊಡಗೂಡಿ ನಮಗೆಲ್ಲ ಮಾರ್ಗದರ್ಶನ ಮಾಡಿದವರು. ಚಂಪಾ ನಿಧನದೊಂದಿಗೆ ಜನಪರ ಚಳವಳಿಯ ಇನ್ನೊಂದು ಕೊಂಡಿ ಕಳಚಿತು. ನನ್ನಂಥ ಹಲವರು ಏನಾದರೂ ಚಿಕ್ಕ ಪುಟ್ಟ ಪ್ರತಿಭಟನೆಯ ಕಿಚ್ಚು ಉಳಿಸಿಕೊಂಡಿದ್ದರೆ ಅದಕ್ಕೆ ಚಂಪಾ ಮತ್ತು ಅವರು ತರುತ್ತಿದ್ದ ಸಂಕ್ರಮಣ ಪತ್ರಿಕೆ ಕಾರಣ. ಕವಿ, ನಾಟಕಕಾರ, ವಿಮರ್ಶಕ, ಭಾಷಣಕಾರ ಮತ್ತು ಕನ್ನಡ ಪರ ಹೋರಾಟಗಾರರಾಗಿ ಅವರು ಸದಾ ನಮ್ಮ ನೆನಪಲ್ಲಿ ಉಳಿಯುತ್ತಾರೆ.

ಚಂಪಾ ಹುಟ್ಟಿದ್ದು ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನಲ್ಲಿ. ಓದಿದ್ದು ಹತ್ತಿಮತ್ತೂರು-ಹಾವೇರಿಗಳಲ್ಲಿನ ಕನ್ನಡ ಶಾಲೆಗಳಲ್ಲಿ. 1956ರಲ್ಲಿ ಕರ್ನಾಟಕ ಕಾಲೇಜಿಗೆ ಸೇರಿ, 1960ರಲ್ಲಿ ಬಿ.ಎ. ಪೂರೈಸಿದರು. 1962ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲಿಷಿನಲ್ಲಿ ಎಂ.ಎ. ಪದವಿ ಪಡೆದರು. 1996ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾದರು. 1980-83ರ ಅವಧಿಯಲ್ಲಿ ಧಾರವಾಡದ ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರಿಯಾಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಗೋಕಾಕ್ ಚಳವಳಿಗೆ ಪ್ರೇರಣೆ ನೀಡಿದರು. ಗೋಕಾಕ ಚಳವಳಿಯು ಅವರನ್ನು ನಾಡಿನ ಪ್ರಮುಖ ಹೋರಾಟಗಾರರೆಂದು ಗುರುತಿಸುವಂತೆ ಮಾಡಿತು. ತುರ್ತು ಪರಿಸ್ಥಿತಿಯಲ್ಲಿ ಜೈಲು ಸೇರಿದ್ದ ಅವರು ಸಾಹಿತಿಗಳ ಮೈ ಚಳಿ ಬಿಡಿಸಿದರು.

ಮಾತೃಭಾಷಾ ಮಾಧ್ಯಮ ಚಳುವಳಿಗೆ ಚಂಪಾ ಕೊಡುಗೆ ಬಹಳ ದೊಡ್ಡದು. ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡವೇ ಬೋಧನಾ ಮಾಧ್ಯಮವಾಗಿರಬೇಕು, ಬೇಕಿದ್ದರೆ ಇಂಗ್ಲಿಷನ್ನು ಪ್ರಾಥಮಿಕ 5ನೇ ತರಗತಿಯಿಂದ ಕಲಿಸಬೇಕು, ಕೇಂದ್ರ ಪಠ್ಯಕ್ರಮದ ಮಾಧ್ಯಮಗಳ ಶಾಲೆಗಳು ಕರ್ನಾಟಕದಲ್ಲಿದ್ದರೆ ಅವು ಕನ್ನಡವನ್ನು ಕಲಿಸಬೇಕು- ಎಂಬ ವಿಷಯಗಳ ಬಗ್ಗೆ ಚಂಪಾ ಅವರು ನಿರಂತರವಾಗಿ ಹೋರಾಡಿದರು. ಕನ್ನಡ ಮಾಧ್ಯಮದಲ್ಲಿ ಶಾಲೆಯನ್ನು ನಡೆಸಲು ಅನುಮತಿ ಪಡೆದು ಆಂಗ್ಲಮಾಧ್ಯಮದಲ್ಲಿ ಶಾಲೆ ನಡೆಸುತ್ತಿದ್ದ ಸುಮಾರು 2215 ಶಾಲೆಗಳ ಮಾನ್ಯತೆಯನ್ನು ರದ್ದು ಮಾಡಿಸುವಲ್ಲಿ ಚಂಪಾ ಅವರು ಯಶಸ್ವಿಯಾಗಿದ್ದರು.

1979ರಲ್ಲಿ ಬಂಡಾಯ ಚಳವಳಿಯು ಕನ್ನಡ ಸಾಹಿತ್ಯ ಪರಿಷತ್ತಿಗೆ ಬಹಿಷ್ಕಾರ ಹಾಕಿದರೂ ಚಂಪಾ ಮುಂದೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ( ನವೆಂಬರ್ 2004ರಿಂದ 2008ರವರೆಗೆ) ಸೇವೆ ಸಲ್ಲಿಸಿದರು. ಅವರ ನೇತೃತ್ವದಲ್ಲಿ ನಡೆದ ಶಿವಮೊಗ್ಗ ಸಾಹಿತ್ಯ ಸಮ್ಮೇಳನ ಅನೇಕ ಘಟನೆಗಳಿಗೆ ಸಾಕ್ಷಿಯಾಯಿತು. ಕಸಾಪವನ್ನು ಜನರ ಹತ್ತಿರ ಕೊಂಡೊಯ್ಯಲು ಅವರು ಮಾಡಿದ ಕೆಲಸಗಳು ಹಲವು. ಅದರಲ್ಲಿ ಅವರು ಚಾಲ್ತಿಗೆ ತಂದ ಶನಿವಾರದ ಪುಸ್ತಕಸಂತೆ ಕಾರ್ಯಕ್ರಮವೂ ಒಂದು. ಪ್ರತಿ ಶನಿವಾರವೂ ಪರಿಷತ್ತಿನ ಅಂಗಳದಲ್ಲಿ ಕನ್ನಡ ಪುಸ್ತಕ ಪ್ರಕಾಶಕರನ್ನು ಮತ್ತು ಮಾರಾಟಗಾರರನ್ನು ಆಹ್ವಾನಿಸಿ ರಿಯಾಯಿತಿ ದರದಲ್ಲಿ ಓದುಗರಿಗೆ ಪುಸ್ತಕಗಳು ದೊರೆಯುವಂತೆ ವ್ಯವಸ್ಥೆ ಮಾಡಿದರು. ಈ ಪುಸ್ತಕಸಂತೆಯಲ್ಲಿ ಹೊಸ ಪುಸ್ತಕ ಪ್ರಕಾಶಕರು ಮತ್ತು ಮಾರಾಟಗಾರರ ಜತೆಗೆ ಹಳೆ ಪುಸ್ತಕ ವ್ಯಾಪಾರಿಗಳೂ ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದರು. ಅಷ್ಟೇ ಅಲ್ಲದೆ ತಮ್ಮ ಪುಸ್ತಕಗಳನ್ನು ತಾವೇ ಪ್ರಕಟಿಸುತ್ತಿದ್ದ ಲೇಖಕರೂ ಇಲ್ಲಿ ತಮ್ಮ ಪುಸ್ತಕಗಳನ್ನು ತಂದು ಮಾರುತ್ತಿದ್ದರು. ಅಪರೂಪದ ಮತ್ತು ಅಲಭ್ಯ ಗ್ರಂಥಗಳು ಇಲ್ಲಿ ಸಿಗುತ್ತಿದ್ದವು. ಇದರ ಜತೆಗೆ ಪರಿಷತ್ತಿನ ಮುಂಭಾಗದಲ್ಲಿ ಹಾಡು, ನೃತ್ಯ, ಭಾಷಣ ಇತ್ಯಾದಿ ಕಾರ್ಯಕ್ರಮಗಳೂ ನಡೆದುವು. ಅವರ ಅಧಿಕಾರಾವಧಿ ಮುಗಿಯುತ್ತಿದ್ದಂತೆ ಅದು ಯಾಕೋ ನಿಂತು ಹೋಯಿತು.

ಬಾನುಲಿ, ಮಧ್ಯಬಿಂದು, ಹೂವು ಹಣ್ಣು ತಾರೆ, ಓ ಎನ್ನ ದೇಶ ಬಾಂಧವರೇ, ಗುಂಡಮ್ಮನ ಹಾಡು ಮೊದಲಾದುವು ಅವರ ಕವನ ಸಂಗ್ರಹಗಳು. ಕೊಡೆಗಳು, ಗೋಕರ್ಣದ ಗೌಡಶಾನಿ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ಮೊದಲಾದುವು ಅವರ ಜನಪ್ರಿಯ ನಾಟಕಗಳು. ಅವರ ಕೆಲವು ನಾಟಕಗಳಲ್ಲಿ ನಾನು ಅಭಿನಯಿಸಿದ್ದೂ ಉಂಟು. ಬೇಂದ್ರೆ-ನಾನು ಕಂಡಂತೆ, ಕನ್ನಡ ಕನ್ನಡ ಬರ್ರಿ ನಮ್ಮ ಸಂಗಡ, ಚಂಪಾದಕೀಯ, ಮೊದಲಾದುವು ಅವರ ಇತರ ಕೃತಿಗಳು.

ನವ್ಯ ಸಾಹಿತ್ಯ ಸಂದರ್ಭದಲ್ಲಿ ಗೋಪಾಲಕೃಷ್ಣ ಅಡಿಗರನ್ನು ʼ ಒಂದು ಜನಾಂಗದ ಕಣ್ಣು ತೆರೆಸಿದʼ ಕವಿ ಎಂದು ಕೊಂಡಾಡಲಾಗುತ್ತಿತ್ತು. ಆದರೆ ನಾವೆಲ್ಲರೂ ಸಂಕ್ರಮಣ ಪತ್ರಿಕೆಯ ಮೂಲಕ ಅನೇಕ ಲೇಖಕರನ್ನು ಬೆಳೆಸಿದ ಚಂಪಾ ಅವರನ್ನು ʼಅಡಿಗರು ಕಣ್ಣು ಮುಚ್ಚಿಸಿದರು, ಚಂಪಾ ಕಣ್ಣು ತೆರೆಸಿದರುʼ ಎಂದು ಹೇಳಿಕೊಂಡು ಕರ್ನಾಟಕಾದ್ಯಂತ ಓಡಾಡುತ್ತಿದ್ದೆವು. ನಮ್ಮೆಲ್ಲರ ಓದಿನ ಕೇಂದ್ರವಾಗಿದ್ದ ಸಂಕ್ರಮಣವನ್ನು ಚಂದ್ರಶೇಖರ ಪಾಟೀಲರು ಗಿರಡ್ಡಿ ಗೋವಿಂದರಾಜ, ಮತ್ತು ಸಿದ್ಧಲಿಂಗ ಪಟ್ಟಣಶೆಟ್ಟಿಯವರ ಜೊತೆ ಸೇರಿ ಆರಂಭಿಸಿದರು. ಈ ಪತ್ರಿಕೆಯು ನವ್ಯದ ಉಚ್ಛ್ರಾಯ ಸ್ಥಿತಿಯಲ್ಲಿ ಪ್ರಾರಂಭವಾಗಿ, ಎಪ್ಪತ್ತರ ದಶಕದ ನಂತರ ದಲಿತ, ಬಂಡಾಯ ಸಾಹಿತ್ಯ ಚಳವಳಿಗೆ ಬೆಂಬಲ ನೀಡಿ ಹಲವಾರು ಯುವ ಬರಹಗಾರರಿಗೆ ವೇದಿಕೆಯನ್ನು ಒದಗಿಸಿತು. ಆ ಹೊತ್ತಿಗೆ ಗಿರಡ್ಡಿ, ಪಟ್ಟಣಶೆಟ್ಟರು ಸಂಕ್ರಮಣದಿಂದ ಕಳಚಿಕೊಂಡಿದ್ದರು.

ಚಂಪಾ ತಮ್ಮ ಹರಿತವಾದ ವ್ಯಂಗ್ಯಕ್ಕೆ ಹೆಸರಾದವರು.

‘ಕನ್ನಡ ಕಾವ್ಯದ ಭೂತ ಭವಿಷ್ಯವ ಬಣ್ಣಿಸಿ ಹೇಳೋ ಗಾಂಪಾ;

ನಮ್ಮ ಆದಿಕವಿ ಪಂಪಾ, ಗುರುವೇ ನಮ್ಮ ಅಂತ್ಯಕವಿ ಚಂಪಾ’

ಅಂದು ತಮ್ಮನ್ನೇ ತಾವು ವಿನೋದ ಮಾಡಿಕೊಳ್ಳುತ್ತಿದ್ದರು.

ನಿನ್ನೆ ಬಸವಲಿಂಗಯ್ಯ, ಇವತ್ತು ಚಂಪಾ, ಯಾಕೋ ಸಾವು ಹತ್ತಿರದಲ್ಲೆಲ್ಲೋ ಓಡಾಡುವಂತೆ ಭಾಸವಾಗುತ್ತಿದೆ.

ಸರ್‌, ಹೋಗಿ ಬನ್ನಿ, ನಮಸ್ಕಾರ…


ಇದನ್ನೂ ಓದಿರಿ: ಹಿರಿಯ ಸಾಹಿತಿ ಚಂಪಾ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...