Homeಕರ್ನಾಟಕಇಂದು 'ಚಂದ್ರಯಾನ- 3' ಉಡಾವಣೆ; ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ನಡೆಗೆ ಖಂಡನೆ ವ್ಯಕ್ತ

ಇಂದು ‘ಚಂದ್ರಯಾನ- 3’ ಉಡಾವಣೆ; ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ನಡೆಗೆ ಖಂಡನೆ ವ್ಯಕ್ತ

- Advertisement -
- Advertisement -

ಚಂದ್ರನ ಮೇಲ್ಮೈ ಮೇಲೆ ಗಗನನೌಕೆ ಇಳಿಸಿ, ಅಧ್ಯಯನ ಕೈಗೊಳ್ಳುವ ಉದ್ದೇಶದ ‘ಚಂದ್ರಯಾನ- 3’ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಶ್ರೀಹರಿಕೋಟದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಲ್ಯಾಂಡ‌ (ವಿಕ್ರಮ್) ಹಾಗೂ ರೋವರ್ (ಪ್ರಜ್ಞಾನ) ಹೊತ್ತರಾಕೆಟ್ ಶುಕ್ರವಾರ ಮಧ್ಯಾಹ್ನ ನಭಕ್ಕೆ ಉಡಾವಣೆಯಾಗಲಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು, ತಂತ್ರಜ್ಞರ ತಂಡ ಸಿದ್ಧತೆಯನ್ನು ಪೂರ್ಣಗೊಳಿಸಿದೆ. ಇಸ್ರೋದ ಕೆಲವು ವಿಜ್ಞಾನಿಗಳು ಚಂದ್ರಯಾನದ ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿದ್ದಾರೆ. ಅವರ ಈ ನಡೆಯಯನ್ನು ನಾಡಿನ ಪ್ರಜ್ಞಾವಂತರು ಹಾಗೂ ಸಾಹಿತಿಗಳು ಖಂಡಿಸಿದ್ದಾರೆ.

2019ರಲ್ಲಿ ಕೈಗೊಂಡಿದ್ದ ‘ಚಂದ್ರಯಾನ-2’ ಕಾರ್ಯಕ್ರಮ ಕೊನೆ ಗಳಿಗೆಯಲ್ಲಿ ವಿಫಲವಾಗಿತ್ತು. ಹಾಗಾಗಿ, ಈ ಬಾರಿ ವಿಜ್ಞಾನಿಗಳು ‘ಸಾಫ್ಟ್ ಲ್ಯಾಂಡಿಂಗ್’ ಬಗ್ಗೆ ಗಮನ ಕೇಂದ್ರೀಕರಿಸಲಿದ್ದಾರೆ. ಲ್ಯಾಂಡರ್‌ಗೆ ಯಾವುದೇ ರೀತಿಯ ಹಾನಿ ಆಗದಂತೆ, ಅದನ್ನು ಚಂದ್ರನ ಮೇಲೆ ಇಳಿಸುವುದನ್ನು ‘ಸಾಫ್ಟ್ ಲ್ಯಾಂಡಿಂಗ್’ ಎಂದು ಕರೆಯುತ್ತಾರೆ. ವಿಜ್ಞಾನಿಗಳು ಇಂಥ ಕೌಶಲವನ್ನು ಕರಗತ ಮಾಡಿಕೊಳ್ಳುವ ಗುರಿ ಹೊಂದಿದ್ದಾರೆ.

ಚಂದ್ರಯಾನ-2 ಕಾರ್ಯಕ್ರಮದ ವೇಳೆ, ಅರ್ಬಿಟರ್‌ನಿಂದ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿತ್ತು. ಚಂದ್ರನಿಂದ 100 ಕಿ.ಮೀ. ಅಂತರದಲ್ಲಿ ಲ್ಯಾಂಡರ್ ಯಶಸ್ವಿಯಾಗಿ ಪರಿಭ್ರಮಿಸಿತ್ತು. ಪೂರ್ವನಿಗದಿಯಂತೆ ಚಂದ್ರನ ಮೇಯಿಂದ 2.1 ಕಿ.ಮೀ. ಅಂತರದ ವರೆಗೆ ಇಳಿದಿದ್ದ ಲ್ಯಾಂಡ‌ ನಂತರ ಅಪ್ಪಳಿಸಿತ್ತು. ವಿಜ್ಞಾನಿಗಳಿಗೆ ಅದರ ಸಂಪರ್ಕವೂ ಕಡಿದು ಹೋಗಿತ್ತು.

‘ಸಾಫ್ಟ್ ಲ್ಯಾಂಡಿಂಗ್’ನಲ್ಲಿ ಯಶಸ್ಸು ಸಿಕ್ಕಲ್ಲಿ, ಭಾರತವು ಈ ಸಾಧನೆ ಮಾಡಿದ ನಾಲ್ಕನೇ ದೇಶವಾಗಲಿದೆ. ಅಮೆರಿಕ, ಚೀನಾ ಹಾಗೂ ಈ ಹಿಂದಿನ ಸೋವಿಯತ್ ಒಕ್ಕೂಟ ಈ ಸಾಧನೆ ಮಾಡಿರುವ ದೇಶಗಳಾಗಿವೆ.

ಇಸ್ರೋ ಸಂಸ್ಥೆಯ ನಡೆಗೆ ಸಾಹಿತಿಗಳಿಂದ ಖಂಡನೀಯ

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸಾಹಿತಿಗಳು, ”ಚಂದ್ರಯಾನ-3ಕ್ಕೆ ಇಸ್ರೋ ಸಂಸ್ಥೆ ಸಜ್ಜಾಗಿರುವುದು ಅಭಿನಂದನೀಯ. ಇದೇ ಸಂದರ್ಭದಲ್ಲಿ ಚಂದ್ರಯಾನದ ಯಶಸ್ವಿಗಾಗಿ ಇಸ್ರೋದ ಕೆಲವು ವಿಜ್ಞಾನಿಗಳು ಚಂದ್ರಯಾನದ ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿರುವುದು ತಿಳಿದುಬಂದಿದೆ. ಪ್ರಪಂಚದಲ್ಲೇ ಖ್ಯಾತಿ ಹೊಂದಿರುವ ಇಸ್ರೋದಂತಹ ಸರ್ಕಾರಿ ಸ್ವಾಮ್ಯದ ಸಂಸ್ಥೆಯ ಈ ರೀತಿಯ ನಡೆ ಸಾಮಾನ್ಯ ಜನರನ್ನು ದಿಕ್ಕುತಪ್ಪಿಸುವಂತಿದೆ” ಎಂದಿದ್ದಾರೆ.

”ಭಾರತದ ಸಂವಿಧಾನ 51ಎ(ಹೆಚ್) ಪ್ರಕಾರ ವೈಜ್ಞಾನಿಕ ಮನೋವೃತ್ತಿ, ಮಾನವ ಹಿತಾಸಕ್ತಿ, ಜಿಜ್ಞಾಸೆ ಮತ್ತು ಸುಧಾರಣಾ ಮನೋಭಾವವನ್ನು ಬೆಳೆಸುವುದು ದೇಶದ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಆದರೆ ಇಸ್ರೋದ ವಿಜ್ಞಾನಿಗಳು ತಾವು ಸತತವಾಗಿ ಹಲವಾರು ವರ್ಷಗಳಿಂದ ಎಲ್ಲ ಎಡರು ತೊಡರುಗಳ ನಡುವೆ ಸಂಶೋಧಿಸಿ, ಪರೀಕ್ಷಿಸಿ ರೂಪಿಸಿರುವ ಯಾನದ ಬಗೆಗೆ ತಮಗೇ ನಂಬಿಕೆ ಇಲ್ಲವೆಂಬುದನ್ನು ಈ ಮೂಲಕ ಸಾಬೀತುಗೊಳಿಸಿದ್ದಾರೆ. ಇದರಿಂದ ಆತ್ಮಸ್ಥೆರ್ಯ ಮತ್ತು ಸಂಶೋಧನೆಗಳ ಬಗೆಗೆ ಇರುವ ಅನುಮಾನಗಳು ವ್ಯಕ್ತವಾಗುತ್ತವೆ. ವೈಜ್ಞಾನಿಕ ನಡೆಯ ಬಗೆಗೆ ಈ ರೀತಿಯಾದ ಅನುಮಾನ ಮತ್ತು ಸಂಶಯ ದೃಷ್ಟಿಗೆ ಎಡೆಯಿಲ್ಲದಂತೆ ನಡೆದುಕೊಳ್ಳಬೇಕಾಗಿರುವುದು ವೈಜ್ಞಾನಿಕ ಸಂಸ್ಥೆಗಳ ಆಶಯವಾಗಿರುತ್ತದೆ. ಈ ನಿಟ್ಟಿನಲ್ಲಿ ಮೇಲೆ ಎಸಗಿರುವ ಕೃತ್ಯವು ಖಂಡನಾರ್ಹವಾಗಿದೆ ಮತ್ತು ಜನರನ್ನು ಮಾನಸಿಕವಾಗಿ ದುರ್ಬಲಗೊಳಿಸುತ್ತದೆ” ಎಂದು ಹೇಳಿದ್ದಾರೆ.

”ಈ ಹಿಂದೆಯೂ ಇದೇ ರೀತಿಯ ಅತಾಚುರ್ಯವನ್ನು ಆಗಿರುವುದನ್ನು ಅನೇಕ ಪ್ರಾಜ್ಞರು ಖಂಡಿಸಿದ್ದರೂ ಸಹ ಮತ್ತೊಮ್ಮೆ ಪುನರಾವರ್ತನೆಯಾಗಿರುವುದು ಒಪ್ಪತಕ್ಕ ವಿಚಾರವಲ್ಲ. ಈ ನಡೆಯು ಸಂಸ್ಥೆಯ ಸಂವಿದಾನವಿರೋಧಿ ಮನಸ್ಥಿತಿಯನ್ನು ಪ್ರದರ್ಶಿಸಿದೆ. ಇದಕ್ಕೆ ಕಾರಣೀಭೂತರಾದ ವ್ಯಕ್ತಿಗಳಿಗೆ ಸೂಕ್ತ ಸಲಹೆ ನೀಡುವುದು ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹೆಗಾರರ ಕರ್ತವ್ಯವಾಗಿದೆ” ಎಂದು ತಿಳಿಸಿದ್ದಾರೆ.

ನಾಡಿನ ಖ್ಯಾತ ಪ್ರಜ್ಞರು ಹಾಗೂ ಸಾಹಿತಿಗಳಾದ ಡಾ. ಮೂಡ್ಯಾಕೂಡು ಚಿನ್ನಸ್ವಾಮಿ, ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಡಾ. ವೆಂಕಟಯ್ಯ ಅಪ್ಪಗೆರೆ. ಸನತ್ ಕುಮಾರ್ ಬೆಳಗಲಿ, ಎಲ್. ಎನ್‌. ಮುಕುಂದರಾಜ್, ಡಾ.ಆರ್.ಎನ್. ರಾಜಾನಾಯಕ್ ಕೆ. ಬಿ. ಮಹದೇವಪ್ಪ ನಾಗೇಶ್ ಅರಳಕುಪ್ಪೆ ಡಾ. ಹುಲಿಕುಂಟೆ ಮೂರ್ತಿ ಹೆಚ್‌.ಕೆ. ವಿವೇಕಾನಂದ ಡಾ.ಹೆಚ್.ಕೆ.ಎಸ್.ಸ್ವಾಮಿ ಡಿ. ಎಂ. ಮಂಜುನಾಥಸ್ವಾಮಿ ಕೆ. ಮಹಂತೇಶ್ ಡಾ. ನಾಗೇಶ್‌ ಕೆ.ಎನ್ ಪ್ರಭಾ ಬೆಳವಂಗಲ ಹಾಗೂ ಆಲ್ಲೂರು ಶಿವರಾಜ ಅವರು ಇಸ್ರೋ ಸಂಸ್ಥೆಯ ನಡೆಯನ್ನು ಖಂಡಿಸಿ ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. What is the problem in doing Pooja?. All nonsense. You are learning the universe support now. What you do , invent today were there lakh years ago these were done. Now only reinventing, reasearch not the new.

LEAVE A REPLY

Please enter your comment!
Please enter your name here

- Advertisment -

Must Read

ವಿವಾಹವಾದ ಕಾರಣಕ್ಕೆ ಸೇನಾ ಮಹಿಳಾ ಅಧಿಕಾರಿಯ ವಜಾ; ‘ಲಿಂಗ ತಾರತಮ್ಯ’ ಎಂದ ಸುಪ್ರೀಂಕೋರ್ಟ್‌

0
ವಿವಾಹವಾದ ಕಾರಣಕ್ಕೆ ಮಿಲಿಟರಿ ನರ್ಸಿಂಗ್ ಸೇವೆಯಲ್ಲಿ ಖಾಯಂ ನಿಯೋಜಿತ ಅಧಿಕಾರಿಯನ್ನು ವಜಾ ಮಾಡಿರುವುದು ಸ್ವೇಚ್ಛೆಯ ಹಾಗೂ ಸೂಕ್ಷ್ಮತೆ ಇಲ್ಲದ ಲಿಂಗ ತಾರತಮ್ಯ ಹಾಗೂ ಅಸಮಾನತೆಯನ್ನು ಬಿಂಬಿಸುತ್ತದೆ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗ‌ಳಾದ ಸಂಜೀವ್ ಖನ್ನಾ...