Homeಕರ್ನಾಟಕಚಂದ್ರು ಕೊಲೆ ಪ್ರಕರಣ: ಪೊಲೀಸ್‌ ಕಮಿಷನರ್‌ ಹೇಳಿಕೆ ಅಲ್ಲಗಳೆದ ಬಿಜೆಪಿ ನಾಯಕರಿಗೆ ಭಾಸ್ಕರ್‌ ರಾವ್‌ ಖಡಕ್‌...

ಚಂದ್ರು ಕೊಲೆ ಪ್ರಕರಣ: ಪೊಲೀಸ್‌ ಕಮಿಷನರ್‌ ಹೇಳಿಕೆ ಅಲ್ಲಗಳೆದ ಬಿಜೆಪಿ ನಾಯಕರಿಗೆ ಭಾಸ್ಕರ್‌ ರಾವ್‌ ಖಡಕ್‌ ಪ್ರತಿಕ್ರಿಯೆ

- Advertisement -
- Advertisement -

ಕೊಲೆ ಪ್ರಕರಣವೊಂದನ್ನು ರಾಜಕೀಯಗೊಳಿಸಲು ಯತ್ನಿಸುತ್ತಿರುವ ಬೆಳವಣಿಗೆಗಳನ್ನು ಮಾಜಿ ಪೊಲೀಸ್‌ ಕಮಿಷನರ್‌, ಎಎಪಿ ರಾಜ್ಯ ನಾಯಕ ಭಾಸ್ಕರ್‌ ರಾವ್‌ ಟೀಕಿಸಿದ್ದಾರೆ.

‌ʼಪೊಲೀಸ್‌ ಕಮಿಷನರ್‌ ಸುಳ್ಳು ಹೇಳುತ್ತಾರೆʼ ಎಂದು ಆಡಳಿತ ಪಕ್ಷದ ಹಿರಿಯ ನಾಯಕರೇ ಹೇಳುವುದು ಸ್ವತಃ ಮುಖ್ಯಮಂತ್ರಿ ಮತ್ತು ರಾಜ್ಯ ಸರ್ಕಾರಕ್ಕೆ ಮಾಡುವ ಅವಮಾನ ಎಂದು ಭಾಸ್ಕರ್‌ ರಾವ್‌ ಅಭಿಪ್ರಾಯಪಟ್ಟಿದ್ದಾರೆ.

ಸ್ವಯಂ ನಿವೃತ್ತಿ ಪಡೆದು ಇತ್ತೀಚೆಗೆ ಆಮ್‌ ಆದ್ಮಿ ಪಕ್ಷ ಸೇರಿರುವ ಅವರು, ಸೋಮವಾರ ತಮ್ಮ ಫೇಸ್‌ಬುಕ್‌ ಮತ್ತು ಟ್ವಿಟ್ಟರ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರಿನ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜವಾಬ್ದಾರಿಯುತವಾದ ಪೊಲೀಸ್ ಸಂಸ್ಥೆಯ ಆಯುಕ್ತರು ಸುಳ್ಳು ಹೇಳುತ್ತಾರೆ ಎಂದು ಆಡಳಿತ ಪಕ್ಷದ ಹಿರಿಯ ನಾಯಕರೇ ಹೇಳುತ್ತಿರುವುದು ಆಕ್ಷೇಪಾರ್ಹ. ಪೊಲೀಸ್ ಆಯುಕ್ತರು ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಏನೇ ಭಿನ್ನಾಭಿಪ್ರಾಯವಿದ್ದರೂ ಅವರನ್ನು ನೇರವಾಗಿ ಭೇಟಿ ಮಾಡುವುದು ಸೂಕ್ತ. ಈ ವಿಷಯದಲ್ಲಿ ಆಡಳಿತ ಪಕ್ಷ ತನ್ನ ಹಿರಿಯ ನಾಯಕರಿಗೆ ತಿಳಿ ಹೇಳಬೇಕು ಎಂದು ಜನ ಬಯಸುತ್ತಾರೆ. ಅದು ಬಿಟ್ಟು 1.5 ಕೋಟಿ ನಾಗರಿಕರನ್ನು ರಕ್ಷಣೆ ಮಾಡುವ ಪೊಲೀಸ್‌ ಕಮಿಷನರ್ ಸಂಸ್ಥೆಯನ್ನು ಹೀಗೆ ಬಹಿರಂಗವಾಗಿ ಅವಮಾನ ಮಾಡುವುದು ಸರಿಯಲ್ಲ. ಇದು ಅವಿವೇಕಿತನದ ರಾಜಕೀಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ನಗರದ ಜೆ ಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್‌ 5 ರಂದು ಚಂದ್ರಶೇಖರ್(22)‌ ಎಂಬ ಯುವಕನ ಹತ್ಯೆ ನಡೆದಿತ್ತು. ಘಟನೆಯ ಬೆನ್ನಲ್ಲೇ “ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ಚಂದ್ರು ಹತ್ಯೆಯಾಗಿದೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದರು.

ಆದರೆ, ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್ ಅವರು ‌ʼಬೈಕ್‌ ಡಿಕ್ಕಿಯಿಂದಾಗಿ ಯುವಕರ ಮಧ್ಯೆ ಜಗಳ ಉಂಟಾಗಿ, ಕೊಲೆಯಾಗಿದೆ. ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ಅಲ್ಲʼ ಎಂದು ಸ್ಪಷ್ಟನೆ ನೀಡಿದರು. ತಕ್ಷಣವೇ ಸಚಿವ ಆರಗ ಜ್ಞಾನೇಂದ್ರ ತಮ್ಮ ಹೇಳಿಕೆ ವಾಪಸ್ ಪಡೆದಿದ್ದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮತ್ತು ವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌ ಕೂಡ “ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ದುಷ್ಕರ್ಮಿಗಳು ಚಂದ್ರು ಎಂಬ ಯುವಕನನ್ನು ಕೊಲೆ ಮಾಡಿದ್ದಾರೆ” ಎಂದು ಹೇಳಿಕೆ ನೀಡಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ, “ಈ ಪ್ರಕರಣದಲ್ಲಿ ಸತ್ಯಾಂಶ ಹೊರಬರಬೇಕಿದೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್‌ ಆಯುಕ್ತರು ಹಾಗೂ ರಾಜ್ಯ ಪೊಲೀಸ್‌ ಮಹಾನಿರ್ದೇಶಕರೊಂದಿಗೆ ಚಚಿರ್ಸಿ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲು ನಿರ್ಧರಿಸಲಾಗಿದೆ” ಎಂದಿದ್ದರು.

ಈ ನಡುವೆ, ಬಿಜೆಪಿ ವಿಧಾನಪರಿಷತ್‌ ಸದಸ್ಯ ರವಿಕುಮಾರ್‌, “ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಕಮಿಷನರ್‌ ಸುಳ್ಳು ಹೇಳಿದ್ದಾರೆ. ಗೃಹ ಸಚಿವರನ್ನು ದಾರಿತಪ್ಪಿಸಿದ್ದಾರೆ. ವಾಸ್ತವವಾಗಿ ಗೃಹ ಸಚಿವರು ಮೊದಲು ಹೇಳಿದಂತೆ ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೇ ಕೊಲೆ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ಭಾಸ್ಕರ್‌ ರಾವ್‌ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...