Homeಮುಖಪುಟರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕಗಳಲ್ಲಿ ಬದಲಾವಣೆ..

ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕಗಳಲ್ಲಿ ಬದಲಾವಣೆ..

- Advertisement -
- Advertisement -

ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕಗಳನ್ನು ಭಾರತದ ಚುನಾವಣಾ ಆಯೋಗವು ಬದಲಾಯಿಸಿದೆ. ನವೆಂಬರ್ 23ರಿಂದ 25ಕ್ಕೆ ಚುನಾವಣೆ ದಿನಾಂಕ ಬದಲಾಯಿಸಿದೆ. ಡಿಸೆಂಬರ್​​ 3ರಂದು ಮತಏಣಿಕೆ ನಡೆಸಲಿದೆ ಎಂದು ಹೇಳಿದೆ.

ಈ ಹಿಂದೆ ನವೆಂಬರ್ 23ಕ್ಕೆ ರಾಜಸ್ಥಾನ ಚುನಾವಣೆ ನಡೆಯಲಿದೆ ಎಂದು ಆಯೋಗವು ಹೇಳಿತ್ತು. ಆದರೆ  ಚುನಾವಣೆ ದಿನಾಂಕವನ್ನು ಮುಂದಕ್ಕೆ ಹಾಕಿದೆ. ನವೆಂಬರ್ 23ರ ಬದಲು ನವೆಂಬರ್ 25ಕ್ಕೆ ಚುನಾವಣೆ ದಿನಾಂಕ ನಿಗದಿಪಡಿಸಿದೆ.

ನವೆಂಬರ್​ 23ರಂದು ಸಾಲು ಸಾಲು ಮದುವೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ಇರುವ ಕಾರಣ ಜೋಧ್‌ಪುರ ಬಿಜೆಪಿ ಸಂಸದ ಪಿಪಿ ಚೌಧರಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಸಾಮಾಜಿಕ ಸಂಸ್ಥೆಗಳು ಮತ್ತು ಹಲವಾರು ಮಾಧ್ಯಮ ವೇದಿಕೆಗಳು ಮತದಾನದ ದಿನಾಂಕವನ್ನು ಬದಲಾಯಿಸಲು ಮನವಿ ಮಾಡಿಕೊಂಡಿದೆ. ಈ ಕಾರಣಕ್ಕೆ ರಾಜಸ್ಥಾನ ವಿಧಾನಸಭೆ ಚುನಾವಣೆಯನ್ನು ನವೆಂಬರ್​​ 25ಕ್ಕೆ ನಡೆಸಲು ನಿರ್ಧಾರಿಸಿದೆ.

ನವೆಂಬರ್ 23ರಂದು ಸುಮಾರು ಮದುವೆ ಕಾರ್ಯಕ್ರಮಗಳು ಹಾಗೂ ಸಾಮಾಜಿಕ ಕಾರ್ಯಕ್ರಮಗಳು ಇರುವ ಕಾರಣ ಜನರಿಗೆ ತೊಂದರೆ ಆಗಬಹುದು ಎಂದು ಹೇಳಿದ್ದಾರೆ. ಇದರಿಂದ ಮತದಾನ ಮಾಡಲು ಕಷ್ಟವಾಗಬಹುದು ಹಾಗೂ ಮತಗಟ್ಟೆ ಬರುವವರ ಸಂಖ್ಯೆ ಕಡಿಮೆಯಾಗಬಹುದು ಎಂದು ಹೇಳಿದ್ದಾರೆ.

ಈ ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ನವೆಂಬರ್​​ 23ರಂದು ನಡೆಯುವ ಚುನಾವಣೆಯನ್ನು ನವೆಂಬರ್​​ 24ಕ್ಕೆ ಬದಲಾವಣೆ ಮಾಡಲಾಗಿದೆ. ಇನ್ನುಳಿದ ರಾಜ್ಯಗಳ ಚುನಾವಣೆಗಳಿ ಈಗಾಗಲೇ ನಿಗದಿಪಡಿಸಿರುವ ದಿನಾಂಕದಂದೇ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇದನ್ನೂ ಓದಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆಂಧ್ರಪ್ರದೇಶ: 7 ಮತಗಟ್ಟೆಗಳಲ್ಲಿ ಇವಿಎಂ ಧ್ವಂಸ ಮಾಡಿದ ಶಾಸಕ

0
ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರು ಮತಗಟ್ಟೆಯಲ್ಲಿ ವಿವಿಪ್ಯಾಟ್‌ ಯಂತ್ರವನ್ನು ನೆಲಕ್ಕೆ ಎಸೆದು ಒಡೆದು ಹಾಕಿರುವ ಘಟನೆಯ ವಿಡಿಯೋ ವೈರಲ್‌ ಆಗಿದೆ. ಇದೇ ರೀತಿ 7 ಮತಗಟ್ಟೆಗಳಲ್ಲಿ ಶಾಸಕ ಇವಿಎಂ ಯಂತ್ರವನ್ನು...