Homeಮುಖಪುಟಬೆದರಿಕೆಯಿಂದಾಗಿ ಅಪ್ರಾಪ್ತ ಕುಸ್ತಿಪಟು ಬ್ರಿಜ್ ಭೂಷಣ್ ವಿರುದ್ಧ ಹೇಳಿಕೆ ಬದಲಾಯಿಸಿದ್ದಾರೆ: ಸಾಕ್ಷಿ ಮಲಿಕ್ ಆರೋಪ

ಬೆದರಿಕೆಯಿಂದಾಗಿ ಅಪ್ರಾಪ್ತ ಕುಸ್ತಿಪಟು ಬ್ರಿಜ್ ಭೂಷಣ್ ವಿರುದ್ಧ ಹೇಳಿಕೆ ಬದಲಾಯಿಸಿದ್ದಾರೆ: ಸಾಕ್ಷಿ ಮಲಿಕ್ ಆರೋಪ

- Advertisement -
- Advertisement -

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದವರಲ್ಲಿ ಅಪ್ರಾಪ್ತ ಕುಸ್ತಿಪಟು ತಮ್ಮ ಕುಟುಂಬಕ್ಕೆ ಬೆದರಿಕೆ ಹಾಕಿದ್ದರಿಂದ ಹೇಳಿಕೆಯನ್ನು ಬದಲಾಯಿಸಿದ್ದಾರೆ ಎಂದು ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಶನಿವಾರ ಹೇಳಿದ್ದಾರೆ.

ಬಿಜೆಪಿ ಸಂಸದ ಸಿಂಗ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ದೇಶದ ಅಗ್ರ ಕುಸ್ತಿಪಟುಗಳು ಏಪ್ರಿಲ್‌ನಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಲ್ಲಿ ಸಾಕ್ಷಿ ಮಲಿಕ್ ಕೂಡ ಒಬ್ಬರು.

ಜೂನ್ 15 ರಂದು, ದೆಹಲಿ ಪೊಲೀಸರು ಸಿಂಗ್ ವಿರುದ್ಧ ಯಾವುದೇ ದೃಢೀಕರಿಸುವ ಸಾಕ್ಷ್ಯಗಳಿಲ್ಲ ಎಂದು ಹೇಳುವ ಮೂಲಕ ಅಪ್ರಾಪ್ತ ವಯಸ್ಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣವನ್ನು ರದ್ದುಗೊಳಿಸುವಂತೆ ಶಿಫಾರಸು ಮಾಡಿದರು. ಬಾಲಕಿ ಮತ್ತು ಆಕೆಯ ತಂದೆಯ ಹೇಳಿಕೆಗಳ ಆಧಾರದ ಮೇಲೆ ನಾವು ಶಿಫಾರಸು ಮಾಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಲಿಕ್ ಮತ್ತು ಅವರ ಪತಿ, ಕುಸ್ತಿಪಟು ಸತ್ಯವರ್ತ್ ಕಡಿಯನ್ ಶನಿವಾರ ಟ್ವಿಟರ್‌ನಲ್ಲಿ ವೀಡಿಯೊವನ್ನು ಬಿಡುಗಡೆ ಮಾಡಿದರು, ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ; ಪೋಕ್ಸೊ ಕೈಬಿಡಲು ಶಿಫಾರಸು

ಒಲಂಪಿಕ್ ಕಂಚಿನ ಪದಕ ವಿಜೇತೆ ಅಪ್ರಾಪ್ತ ಕುಸ್ತಿಪಟು ತನ್ನ ಹೇಳಿಕೆಯನ್ನು ಬದಲಾಯಿಸಿದ್ದಾರೆ. ಅವಳ ಕುಟುಂಬದವರು ಬೆದರಿಕೆಗಳನ್ನು ಎದುರಿಸಿದ್ದರಿಂದ ತನ್ನ ಹೇಳಿಕೆಯನ್ನು ಬದಲಾಯಿಸಿದೆ ಎಂದು ಹೇಳಿಕೊಂಡಿದ್ದಾಳೆ. ಕ್ರೀಡಾಪಟುಗಳು ತಮ್ಮ ಮೇಲೆ ನಡೆಯುವ ಲೈಂಗಿಕ ಕಿರುಕುಳದ ಬಗ್ಗೆ ಮಾತನಾಡುವುದು ಕಷ್ಟ ಎಂದು ಅವರು ಹೇಳಿದರು.

”ಕುಸ್ತಿಯಲ್ಲಿ ತೊಡಗುವವರೆಲ್ಲರೂ ಬಡ ಕುಟುಂಬದಿಂದ ಬಂದವರು. ಅವರಿಗೆ ವ್ಯವಸ್ಥೆಯ ವಿರುದ್ಧ ಮತ್ತು ಅಂತಹ ಪ್ರಬಲ ವ್ಯಕ್ತಿಯ ವಿರುದ್ಧ ಮಾತನಾಡಲು ಧೈರ್ಯ ಬರುವುದಿಲ್ಲ” ಎಂದು ಹೇಳಿದ್ದಾರೆ.

ವೀಡಿಯೊದಲ್ಲಿ, ಪ್ರತಿಭಟನೆಯು ರಾಜಕೀಯ ಪ್ರೇರಿತವಾಗಿದೆ ಎಂಬ ಆರೋಪವನ್ನು ಕಡಿಯನ್ ನಿರಾಕರಿಸಿದರು. ಜನವರಿಯಲ್ಲಿ ಮೊದಲು ಪ್ರತಿಭಟನೆಯನ್ನು ಪ್ರಾರಂಭಿಸಿದಾಗ ಪೊಲೀಸರ ಅನುಮತಿ ಪಡೆಯಲು ಪತ್ರ ಬರೆದಿದ್ದಾರೆ ಎಂದು ಹೇಳಲು ಬಿಜೆಪಿ ನಾಯಕರಾದ ತಿರತ್ ರಾಣಾ ಮತ್ತು ಬಬಿತಾ ಫೋಗಟ್ ಅವರ ಹೆಸರಿರುವ ಪತ್ರವನ್ನು ತೋರಿಸಲಾಗಿದೆ.

ಕಡಿಯನ್ ಮತ್ತು ಮಲಿಕ್ ಶನಿವಾರ ತೋರಿಸಿದ ಪತ್ರದಲ್ಲಿ ರಾಣಾ ಮತ್ತು ಫೋಗಟ್ ಇಬ್ಬರ ಹೆಸರನ್ನು ಉಲ್ಲೇಖಿಸಲಾಗಿದೆ, ಆದರೆ ರಾಣಾ ಅವರ ಸಹಿ ಮಾತ್ರ ಇತ್ತು.

ಪ್ರತಿಭಟನಾಕಾರರು ಕಾಂಗ್ರೆಸ್ ನಾಯಕರ ಬೆಂಬಲ ಪಡೆಯುವ ಬದಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಬೇಕಿತ್ತು ಎಂದು ಬಬಿತಾ ಫೋಗಟ್ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...