Homeಕರ್ನಾಟಕನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಹೋರಾಟಗಾರರು

ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಹೋರಾಟಗಾರರು

- Advertisement -
- Advertisement -

ಆರು ಜನ ನಕ್ಸಲ್ ನಾಯಕರ ಶರಣಾಗತಿ ಪ್ರಕ್ರಿಯೆಯಲ್ಲಿ ದಿಡೀರ್ ಬದಲಾವಣೆ ಆಗಿದ್ದು, ಇಡೀ ಕಾರ್ಯಕ್ರಮ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಶಿಫ್ಟ್ ಆಗಿದೆ. ಜಿಲ್ಲಾಡಳಿತ ಬದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಆರು ಮಂದಿ ನಕ್ಸಲ್‌ ಹೋರಾಟಗಾರರು ಶರಣಾಗತರಾಗಲಿದ್ದಾರೆ.

ಈ ಮುಂಚೆ ನಿಗದಿಯಾದಂತೆ ಚಿಕ್ಕಮಗಳೂರಿನ ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯಲ್ಲಿ ಶರಣಾಗತರಾಗಬೇಕಿತ್ತು. ಬದಲಾದ ಕಾರ್ಯಕ್ರಮದಲ್ಲಿ ಸಿಎಂ ಸಮ್ಮುಖದಲ್ಲಿ ಇಂದು ಮಧ್ಯಾಹ್ನವೇ ಶರಣಾಗರಾಗಲಿದ್ದಾರೆ.

ಆರು ಜನ ನಕ್ಸಲರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ಕರೆತರಲಾಗುತ್ತಿದೆ. ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾಗತಿ ಆಗಬೇಕಿದ್ದ ಆರು ನಕ್ಸಲರನ್ನು ಮುಖ್ಯಮಂತ್ರಿ ಸೂಚನೆ ಮೇರೆಗೆ ಪೊಲೀಸರು ಬೆಂಗಳೂರಿಗೆ ಕರೆತಂದು ಶರಣಾಗತಿ ಮಾಡಿಸಲಿದ್ದಾರೆ. ಇಂದು ಬೆಳಗ್ಗೆಯಿಂದ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕರ ವೇದಿಕೆ, ದಲಿತ ಸಂಘಟನೆ ಮುಖಂಡರು, ಶರಣಾಗುತ್ತಿರುವ ನಕ್ಸಕರ ಕುಟುಂಬದ ಸದಸ್ಯರ ಹಾಗೂ ಮಾಧ್ಯಮದವರು ಕಾಯುತ್ತಿದ್ದರು.

“ನನ್ನ ಸಮ್ಮುಖದಲ್ಲೇ ಶರಣಾಗತಿ ಆಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗತಾನೇ ಸೂಚನೆ ಕೊಟ್ಟಿದ್ದಾರೆ. ಆದ್ದರಿಂದ, ಆರು ಜನ ನಕ್ಸಲ್ ಕಾರ್ಯಕರ್ತರನ್ನು ಪೊಲೀಸರ ಜೊತೆ ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದೇವೆ” ಎಂದು ಶಾಂತಿಗಾಗಿ ನಾಗರಿಕ ವೇದಿಕೆಯ ಕೆ.ಎಲ್.ಅಶೋಕ್ ಹೇಳಿದರು.

ಇವರ ಜೊತೆಗೆ ನಕ್ಸಲ್ ಕಾರ್ಯಕರ್ತರ ಕುಟುಂಬದ ಸದಸ್ಯರನ್ನು ಪೊಲೀಸರ ಜೊತೆಯಲ್ಲಿಯೇ ಕರೆದುಕೊಂಡು ಹೋಗಲಾಗುತ್ತಿದೆ. ಇಂದು ಸಂಜೆ 6 ಗಂಟೆಗೆ ಮುಂಡಗಾರು ಲತಾ ಸೇರಿದಂತೆ ಉಳಿದ 5 ನಕ್ಸಲರು ಬಂದೂಕುಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬರಲಿದ್ದಾರೆ.

“ಆರು ಮಂದಿ ನಕ್ಸಲ್ ಹೋರಾಟಗಾರರು ಬುಧವಾರ ಸರ್ಕಾರದ ಎದುರು ಶರಣಾಗಲಿದ್ದಾರೆ. ಅವರಿಗೆ ಸರ್ಕಾರವು ಶರಣಾಗತಿ ಮತ್ತು ಪುನರ್ವಸತಿಯ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಸೌಲಭ್ಯಗಳನ್ನು ಒದಗಿಸಲಿದೆ” ಎಂದು ಸರ್ಕಾರ ತಿಳಿಸಿದೆ.

ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ ಮತ್ತು ಆಂದ್ರಪ್ರದೇಶದ ಮಾರೆಪ್ಪ ಅರೋಲಿ ಅವರು ಸರ್ಕಾರದ ಮುಂದೆ ಶರಣಾಗುವುದಾಗಿ ಒಪ್ಪಿಕೊಂಡಿದ್ದಾರೆ.

ಸಶಸ್ತ್ರ ಹೋರಾಟವನ್ನು ತ್ಯಜಿಸಿ ಮುಖ್ಯವಾಹಿನಿ ಬರಲು ಮತ್ತು ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ನಕ್ಸಲ್ ಹೋರಾಟಗಾರರು ನಿರ್ಧಾರಿಸಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯೊಂದಿಗೆ ಚರ್ಚೆ ನಡೆಸಿರುವ ನಕ್ಸಲ್ ಹೋರಾಟಗಾರರು, ಸರ್ಕಾರದ ಕರೆಯನ್ನು ಒಪ್ಪಿಕೊಂಡಿದ್ದಾರೆ.

ಶಾಂತಿಗಾಗಿ ನಾಗರಿಕ ವೇದಿಕೆಯ ಮುಖಂಡರು ಮತ್ತು ಸರ್ಕಾರದ ಪ್ರತಿನಿಧಿಗಳೊಂದಿಗೆ ಮಾವೋವಾದಿ ಹೋರಾಟಗಾರರು ಸಭೆ ನಡೆಸಿದ್ದರು. ಸಭೆಯಲ್ಲಿ ತಮ್ಮ ಶರತ್ತುಗಳನ್ನು ಸರ್ಕಾರದ ಮುಂದಿರುವ ನಕ್ಸಲ್‌ ಹೋರಾಟಗಾರರು ಮುಖ್ಯವಾಹಿನಿ ಬರಲು ಸಮ್ಮತಿ ಸೂಚಿಸಿದ್ದಾರೆ.

ಕಾನೂನು ಪ್ರಕಾರ ಕ್ರಮ ಆಗಲಿದೆ: ಪರಮೇಶ್ವರ್

ನಕ್ಸಲರ ಶರಣಾಗತಿಯ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿ, “”ಶರಣಾಗುವ ನಕ್ಸಲರ ವಿರುದ್ಧ ಹಲವು ಪ್ರಕರಣಗಳಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದರು.

“ವಿಕ್ರಂಗೌಡ ಎನ್‌ಕೌಂಟರ್ ವೇಳೆ ನಕ್ಸಲರಿಗೆ ಶರಣಾಗಲು ಕರೆ ನೀಡಲಾಗಿತ್ತು. ಕಾಡಿನಲ್ಲಿದ್ದು ಈ ರೀತಿ ಜೀವನ ಏಕೆ ಮಾಡುತ್ತಿದ್ದೀರಿ, ಸಮಾಜದ ಮುಖ್ಯ ವಾಹಿನಿಗೆ ಬನ್ನಿ ಅಂತ ಹೇಳಿದ್ದೇವೆ. ನಕ್ಸಲರ ವಿರುದ್ಧ ಹಲವು ಪ್ರಕರಣಗಳಿವೆ ನಿಜ, ಪ್ರಕರಣಗಳ ವಿಚಾರದಲ್ಲಿ ಕಾನೂನು ಪ್ರಕಾರ ಕ್ರಮ ಆಗಲಿದೆ” ಎಂದು ತಿಳಿಸಿದರು.

ನಕ್ಸಲ್ ನಾಯಕರ ನಡೆ ಸ್ವಾಗತಿಸಿದ ಸಚಿವ ದಿನೇಶ್

“ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಮರಳುತ್ತಿರುವ ಆರು ಜನ ನಕ್ಸಲೀಯರ ನಿರ್ಧಾರವನ್ನು ಸ್ವಾಗತ್ತಿಸುತ್ತೇನೆ‌. ನಕ್ಸಲರ ಶರಣಾಗತಿಯಿಂದ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಲಿದೆ. ಹಿಂಸೆ ಮತ್ತು ಕ್ರೌರ್ಯದಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ ಎಂಬ ಸತ್ಯ ನಕ್ಸಲ್ ಚಳವಳಿಯಲ್ಲಿ ತೊಡಗಿದ್ದವರಿಗೆ ಅರಿವಾಗಿದೆ. ಹಿಂಸಾಮಾರ್ಗವನ್ನು ತ್ಯಜಿಸುವ ಮೂಲಕ ಎಲ್ಲರೊಂದಿಗೆ ಘನತೆಯಿಂದ ಬದುಕುವ ಆಯ್ಕೆ ಮಾಡಿಕೊಂಡ ನಕ್ಸಲ್ ಚಳವಳಿಗಾರರಿಗೆ ಶುಭವಾಗಲಿ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನಕ್ಸಲರನ್ನು ಮುಖ್ಯವಾಹಿನಿಗೆ ತರಲು ಮಧ್ಯಸ್ಥಿಕೆ ವಹಿಸಿದ ಪುನರ್ವಸತಿ ಸಮಿತಿ, ಶಾಂತಿಗಾಗಿ ನಾಗರಿಕ ವೇದಿಕೆಯ ಸದಸ್ಯರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ. ಶರಣಾದ ನಕ್ಸಲರ ಬದುಕು ರೂಪಿಸುವಲ್ಲಿ ನಮ್ಮ ಸರ್ಕಾರ ಕೂಡ ರಚನಾತ್ಮವಾಗಿ ಕ್ರಮ ವಹಿಸುವ ಜೊತೆಗೆ ನಕ್ಸಲರ ಕೆಲ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಲಿದೆ” ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ; ಚಿಕ್ಕಮಗಳೂರು| ‘ಶಾಂತಿಗಾಗಿ ನಾಗರಿಕ ವೇದಿಕೆ’ ನೇತೃತ್ವದಲ್ಲಿ ನಕ್ಸಲ್ ನಾಯಕರ ಶರಣಾಗತಿಗೆ ಕ್ಷಣಗಣನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...