Homeಮುಖಪುಟಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್

ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್

- Advertisement -
- Advertisement -

ಬಿಜೆಪಿಯಲ್ಲಿದ್ದ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಿದ ಬಳಿಕ ಎನ್‌ಡಿಎ ಮಿತ್ರಪಕ್ಷವಾದ ಜೆಡಿಎಸ್ ನಾಯಕರು ಚನ್ನಪಟ್ಟಣ ಅಭ್ಯರ್ಥಿಯ ಘೋಷಣೆ ಬಗ್ಗೆ ಕಾದು ನೋಡುವ ತಂತ್ರ ಅನುಭವಿಸಿದ್ದರು. ಯೋಗೇಶ್ವರ್ ಇಂದು ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ ಸಹ ತನ್ನ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರನ್ನು ಘೋಚಿಸಿದೆ.

ಉಪ ಚುನಾವಣೆ ಎದುರಿಸುತ್ತಿರುವ ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ರಾಜಕೀಯ ಹಾಟ್‌ಸ್ಪಾಟ್ ಆಗಿದೆ.

ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಕೆ ಮಾಡಲು ಅಕ್ಟೋಬರ್ 25 ಕೊನೆಯ ದಿನವಾಗಿದ್ದು, ಇಂದು ಯೋಗೇಶ್ವರ್ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಎಚ್‌ಡಿ ಕುಮಾರಸ್ವಾಮಿ, ನಿಖಿಲ fಸೇರಿದಂತೆ ಹಲವು ಜೆಡಿಎಸ್ ನಾಯಕರು ಇಂದು ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ, ಅಧಿಕೃತವಾಗಿ ನಿಖಿಲ್ ಹೆಸರು ಘೋಷಿಸಿದ್ದಾರೆ. ಆ ಮೂಲಕ ಎನ್‌ಡಿಎ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆಗೆ ತೆರೆ ಬಿದ್ದಿದೆ.

ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿಯೇ ಅಭ್ಯರ್ಥಿಯಾಗಲಿ ಎಂದು ಒತ್ತಾಯಿಸಿದ್ದರು. ಇಂದು ಸಹ ಹಲವು ಕಾರ್ಯಕರ್ತರು ನಿಖಿಲ ಪರವಾಗಿ ಫ್ಲೆಕಾರ್ಡ್‌ ಹಿಡಿದು ಬಂದಿದ್ದರು. ಚನ್ನಪಟ್ಟಣ ಸ್ಥಳೀಯ ಕಾರ್ಯಕರ್ತರ ಒತ್ತಡಕ್ಕೆ ಮಣಿದಿರುವ ಕುಮಾರಸ್ವಾಮಿಯವರು, ನಿಖಿಲ್ ಅವರ ಹೆಸರನ್ನು ಅಂತಿಮಗೊಳಿಸಿದ್ದಾರೆ.

ಯೋಗೇಶ್ವರ್ ಬೆನ್ನಿಗೆ ನಿಂತ ಕಾಂಗ್ರೆಸ್

ಇಂದು ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ತೆರಳಿದ ಸಿಪಿ ಯೋಗೇಶ್ವರ್ ಅವರಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿಸ ಸಂಸದ ಡಿಕೆ ಸುರೇಶ್, ಸಚಿವರಾದ ರಾಮಲಿಂಗಾರೆಡ್ಡಿ ಸೇರಿದಂತೆ ಸಚಿವ ಸಂಪುಟದ ಹಲವು ಸದಸ್ಯರು ಭಾಗವಹಿಸಿದ್ದರು. ಭಾರೀ ಜನಸ್ತೋಮದ ನಡುವೆ ಮೆರವಣಿಗೆ ನಡೆಸಿ, ನಾಮಪತ್ರ ಸಲ್ಲಿಸಿದರು.

“ಚನ್ನಪಟ್ಟಣ ಉಪಚುನಾವಣೆ ಫಲಿತಾಂಶವನ್ನು ನಾನೂ ನೋಡುತ್ತೇನೆ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು. ನನ್ನ ಈ ಕೋರಿಕೆಯನ್ನು ತಾವೆಲ್ಲರೂ ಈಡೇರಿಸುತ್ತೀರಿ ಎಂದು ನಂಬಿದ್ದೇನೆ. ಕೆರೆಗಳಿಗೆ ಜೀವದಾನ ಮಾಡಿದ ಯೋಗೇಶ್ವರ್, ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದಾರೆ. ಈಗ ಅಭಿವೃದ್ಧಿಪರವಾಗಿರುವ ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಖುಷಿಯಿಂದ ಸ್ವಾಗತಿಸಿದ್ದೇವೆ. ಯೋಗೇಶ್ವರ್ ಗೆಲ್ಲುವ ಮೂಲಕ‌ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

“ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೇಶ್ವರ್ ಅವರೇ ಭರ್ಜರಿ ಬಹುಮತದಿಂದ ಜಯಗಳಿಸೋದು ಖಚಿತ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ನಮ್ಮದು ಜನಕಲ್ಯಾಣದ ಸರ್ಕಾರ. ಈ ಸರ್ಕಾರದಲ್ಲಿ ಯೋಗೇಶ್ವರ್ ಅವರು ಇರಬೇಕು. ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕರಾಗಿ, ಮುಖ್ಯಮಂತ್ರಿ ಆಗಿದ್ದಾಗಲೂ ಮಾಡದ ಚನ್ನಪಟ್ಟಣದ ಅಭಿವೃದ್ಧಿ ಕೆಲಸಗಳು ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೇಶ್ವರ್ ಅವರು ಮುಂದುವರೆಸುತ್ತಾರೆ. ಇವತ್ತು ನಾಮಪತ್ರ ಸಲ್ಲಿಕೆ ಬಳಿಕ ನಾನು ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ” ಎಂದು ಘೋಷಿಸಿದರು.

ಇದನ್ನೂ ಓದಿ; “ಪೇಜಾವರ ಶ್ರೀ ಜಾತ್ಯತೀತತೆ ಬಗ್ಗೆ ಮಾತಾಡುವುದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಿದೆ” : ಬಿ.ಕೆ ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...