Homeಕರ್ನಾಟಕಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ; ಅನ್ನದಾತರಿಂದ ಸರ್ಕಾರಕ್ಕೆ ಅಂತಿಮ ಗಡುವು

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ; ಅನ್ನದಾತರಿಂದ ಸರ್ಕಾರಕ್ಕೆ ಅಂತಿಮ ಗಡುವು

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಗಾಗಿ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆಎಚ್ ಮುನಿಯಪ್ಪನವರಿಗೆ ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರು ಘೇರಾವ್ ಹಾಕಿದ್ದು,, ಭೂಸ್ವಾಧೀನ ಹಿಂಪಡೆಯುವಂತೆ ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ.

ಸುದೀರ್ಘ 975 ದಿನಗಳಿಂದ ಭೂಸ್ವಾಧೀನವನ್ನು ವಿರೋಧಿಸಿ ಚನ್ನರಾಯಪಟ್ಟಣದ ನಾಡಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರ ತಾಳ್ಮೆ ಕಟ್ಟೆಯೊಡೆದಿದ್ದು, ಅನ್ನದಾತರನ್ನು ನಿರ್ಲಕ್ಷಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಆಕ್ರೋಶ ಹೊರಹಾಕಿದರು.

“ಇಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದಾಗಿನಿಂದಲೂ ಕೂಡ ಒಂದಲ್ಲೊಂದು ನೆಪ ಹೇಳುತ್ತಿದೆ. ಆ ಮೂಲಕ ದಿನದೊಡುತ್ತಿರುವ ಸಚಿವರು ರೈತ ವಿರೋಧಿಯಾಗಿ ವರ್ತಿಸುತ್ತಿದ್ದಾರೆ. ಇವರಿಗೆ ರೈತರ ಭೂಮಿಯನ್ನು ಕೈಬಿಡುವ ಯಾವುದೇ ಯೋಚನೆ ಇದ್ದಂತೆ ಕಾಣುತ್ತಿಲ್ಲ. ಇವರು ಕೂಡ ಹಿಂದಿನ ಸರ್ಕಾರಗಳ ರೀತಿಯಲ್ಲೇ ಬಂಡವಾಳಶಾಹಿಗಳ ಪರವಾಗಿ ವರ್ತಿಸುತ್ತಿದ್ದಾರೆ” ಸ್ಥಳದಲ್ಲಿದ್ದ ರೈತರು ಸಚಿವರನ್ನು ತರಾಟೆಗೆ ತೆಗೆದುಕೊಂಡರು.

ರೈತರಿಗೆ ಸಮಜಾಯಿಷಿ ನೀಡಲು ಮುಂದಾದ ಮಂತ್ರಿಗಳು, “ಬೆಳಗಾವಿ ಅಧಿವೇಶನ ಮುಗಿಯುವುದರೊಳಗಾಗಿ ಈ ಸಮಸ್ಯೆಯನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಹೇಳಿದರು. ಸಚಿವರ ಉತ್ತರಕ್ಕೆ ಸಮಾಧಾನಗೊಳ್ಳದ ಪ್ರತಿಭಟನಾನಿರತರು, “ನೀವು ಅಧಿಕಾರಕ್ಕೆ ಬಂದಾಗಿನಿಂದ ಇಂತಹ ಹತ್ತಾರು ಗಡುವುಗಳನ್ನು ನೀಡುತ್ತಲೇ ಬಂದಿದ್ದೀರಿ, ಯಾವ ಬಾರಿಯೂ ಕೊಟ್ಟ‌ಮಾತಿನಂತೆ ನಡೆದುಕೊಳ್ಳಲೇ ಇಲ್ಲ. ನಾವು ನಿಮ್ಮ ಮನೆಗೆ ಅಲೆಯುತ್ತಲೇ ಇದ್ದೇವೆ, ಇಷ್ಟಾದರೂ ನಮ್ಮ ಸಮಸ್ಯೆ ಬಗ್ಗೆ ಹರಿಸಿಲ್ಲ. ಆದ್ದರಿಂದ ನೀವು ಇಂದು ನೀಡುತ್ತಿರುವ ಗಡುವಿನಲ್ಲಿ ಸಮಸ್ಯೆ ಬಗೆಹರಿಸುತ್ತೀರೆಂಬ ಯಾವ ಭರವಸೆಯೂ ಇಲ್ಲ” ಎಂದು ಮಂತ್ರಿಗಳಿಗೆ ತಿರುಗೇಟು ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರೈತ ಮಹಿಳೆಯರು

“ರೈತರನ್ನು ಕಡೆಗಣಿಸುವ ಉದ್ದೇಶ ನನಗಿಲ್ಲ. ನಾನೂ ನಿಮ್ಮ‌ವಿಷಯವನ್ನು ಸರ್ಕಾರದ ಮುಂದೆ ಮಾತನಾಡುತ್ತಲೇ ಬಂದಿದ್ದೇನೆ. ಸಮಸ್ಯೆ ಬಗೆಹರಿಸಲು ಸಾದ್ಯವಾಗದಿರುವುದರ ಬಗ್ಗೆ ನನಗೂ ಬೇಸರವಿದೆ. ಇನ್ನು ಮುಂದೆ ನಾವೂ ಕಾಯಿಸಲು ಸಾಧ್ಯವಿಲ್ಲ. ಕೈಗಾರಿಕಾ ಸಚಿವರಾದ ಎಂಬಿ ಪಾಟೀಲ್ ರವರು ಹೊರದೇಶದ ಪ್ರಯಾಣದಲ್ಲಿರುವ ಕಾರಣ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಧಿವೇಶನದ ಸಂದರ್ಭದಲ್ಲಿ ಅವರು ವಾಪಸ್ಸಾಗಲಿದ್ದು, ಅವರೊಂದಿಗೆ ಚರ್ಚಿಸಿ ತುರ್ತಾಗಿ ಕ್ರಮ ಕೈಗೊಳ್ಳುತ್ತೇವೆ” ಎಂದರು.

“ಅದಕ್ಕೂ ಮುಂಚೆ ಕೆಐಎಡಿಬಿ ಅಧಿಕಾರಿಗಳು ಮತ್ತು ರೈತರನ್ನೊಳಗೊಂಡ ಜಿಲ್ಲಾಧಿಕಾರಿಗಳ ಸಭೆ ನಡೆಸಿ, ಆ ಸಭೆಯ ನಿರ್ಣಯಗಳೊಂದಿಗೆ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳ ಸಭೆಗೆ ಬನ್ನಿ. ಅಲ್ಲಿ ರೈತರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರುತ್ತೇವೆ” ಎಂದು ತಿಳಿಸಿದರು.

ಸ್ಥಳದಲ್ಲಿಯೇ ಹಾಜರಿದ್ದ ಜಿಲ್ಲಾಧಿಕಾರಿಗಳು, ರೈತನಿಯೋಗ ಮತ್ತು ಕೆಐಎಡಿಬಿ ಅಧಿಕಾರಿಗಳ ಸಭೆಯನ್ನು ಇದೆ ಶನಿವಾರ ಡಿಸೆಂಬರ್ 7ನೇ ತಾರೀಕಿನಂದು ನಡೆಸುವುದಾಗಿ ತಿಳಿಸಿದರು. ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ರೈತರಲ್ಲಿ ಮನವಿ ಮಾಡಿಕೊಂಡರು.

“ಇದು ಅಂತಿಮ ಗಡುವು, ಸಚಿವರು ಹೇಳಿದಂತೆ ಅಧಿವೇಶನ ಮುಗಿಯುವುದರೊಳಗಾಗಿ ಸರ್ಕಾರ ಭೂಸ್ವಾಧೀನ ಕೈ ಬಿಡುವ ನಿರ್ಣಯವನ್ನು ಪ್ರಕಟಿಸದಿದ್ದರೆ ಮುಂದಿನ ಪ್ರಗತಿ ಪರಿಶೀಲನಾ ಸಭೆ ಸೇರಿದಂತೆ, ಮಂತ್ರಿಗಳು ಹಾಜರಾಗುವ ಎಲ್ಲಾ ಕಾರ್ಯಕ್ರಮಗಳಲ್ಲೂ ರೈತರು ಘೇರಾವ್ ಹಾಕೋಣ, ಅನಿರ್ದಿಷ್ಟ ಅವಧಿ ಹೋರಾಟದ ಸಾವಿರ ದಿನಕ್ಕೆ ಕಾಲಿಡುವ ಸಂಧರ್ಭದಲ್ಲಿ ಉಗ್ರ ಹೋರಾಟವನ್ನು ರೂಪಿಸಿ, ಮಂತ್ರಿಗಳಿಗೆ ಸರಿಯಾದ ಪಾಠ ಕಲಿಸೋಣ” ಎಂದು ತೀರ್ಮಾನಿಸಲಾಗಿದೆ ಎಂದು ಮುಖಂಡರು ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಭಟನೆಯಲ್ಲಿ ಹೋರಾಟಗಾರರದ ಕಾರಳ್ಳಿ ಶ್ರೀನಿವಾಸ್, ವಕೀಲರಾದ ಸಿದ್ದಾರ್ಥ್, ರೈತ ಮುಖಂಡರಾದ ನಲ್ಲಪ್ಪನಹಳ್ಳಿ ನಂಜಪ್ಪ, ಅಶ್ವತಪ್ಪ, ಮಾರೇಗೌಡ, ಜಯರಾಮೇಗೌಡ, ಮೋಹನ್, ವೆಂಕಟರಮಣಪ್ಪ, ನಾರಾಯಣಮ್ಮ, ಲಕ್ಷ್ಮಮ್ಮ, ಪ್ರಮೋದ್, ಮುಕುಂದ, ನಂದನ್, ಗೋಪಿನಾಥ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

ಇದನ್ನೂ ಓದಿ; ಬಿಡಿಎ ಪ್ರಕರಣ: ಯಡಿಯೂರಪ್ಪ ವಿರುದ್ಧದ ಪ್ರಾಸಿಕ್ಯೂಷನ್ ಮರುಪರಿಶೀಲಿಸುವಂತೆ ಗೌರ್ನರ್‌ಗೆ ರಾಜ್ಯ ಸರ್ಕಾರ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...