HomeUncategorizedಚನ್ನರಾಯಪಟ್ಟಣ ರೈತ ಹೋರಾಟ | ಅಕ್ಟೋಬರ್ ಅಂತ್ಯದೊಳಗೆ ಸಮಸ್ಯೆ ಬಗೆಹರಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಚನ್ನರಾಯಪಟ್ಟಣ ರೈತ ಹೋರಾಟ | ಅಕ್ಟೋಬರ್ ಅಂತ್ಯದೊಳಗೆ ಸಮಸ್ಯೆ ಬಗೆಹರಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

- Advertisement -
- Advertisement -

ಅಕ್ಟೋಬರ್ ಅಂತ್ಯದೊಳಗೆ ಚನ್ನರಾಯಪಟ್ಟಣ ರೈತರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರ ನಿಯೋಗಕ್ಕೆ ಸೋಮವಾರ ಭರವಸೆ ನೀಡಿದ್ದಾರೆ. ಉಸ್ತುವಾರಿ ಸಚಿವರು ಮತ್ತು ಬೃಹತ್ ಕೈಗಾರಿಕಾ ಸಚಿವರು ಸಭೆ ನಡೆಸಿ ರೈತರ ಸಮಸ್ಯೆಯನ್ನು ಬಗೆಹರಿಸುವ ತೀರ್ಮಾನಕ್ಕೆ ಬರಲಾಗುವುದು ಎಂದು ಅವರು ಹೇಳಿದ್ದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸೇರಿದ್ದ ಸಭೆಯಲ್ಲಿ ಕರ್ನಾಟಕ ಪ್ರಾಂತ್ಯ ರೈತ ಸಂಘದ ಜಿ.ಸಿ. ಬಯ್ಯಾರೆಡ್ಡಿ ಮಾತನಾಡಿ, “ಚನ್ನರಾಯಪಟ್ಟಣ ಹೋಬಳಿಯಲ್ಲಿ 4 ಬಾರಿ ಭೂಸ್ವಾಧೀನ ಮಾಡಿಕೊಂಡಿದ್ದು ರೈತರು ಈಗಾಗಲೇ ಬಹುಪಾಲು ಭೂಮಿ ಕಳೆದುಕೊಂಡಿದ್ದಾರೆ. ಉಳಿದಿರುವುದು ಅಲ್ಪಸ್ವಲ್ಪ ಭೂಮಿ ಮಾತ್ರ. ಈ ಭೂಮಿಯನ್ನು ಸ್ವಾದೀನ ಪ್ರಕ್ರಿಯೆಯಿಂದ ಕೈಬಿಡಲೇಬೇಕು ಎಂದು ಒತ್ತಾಯಿಸಿ ವಿರೋಧ ಪಕ್ಷದಲ್ಲಿ ಇದ್ದಾಗ ಧರಣಿ ಸ್ಥಳಕ್ಕೆ ಬಂದು ರೈತರ ಪರ ನಿಲ್ಲುವುದಾಗಿ ಭರವಸೆ ನೀಡಿದ್ದೀರಿ” ಎಂದು ನೆನಪು ಮಾಡಿದರು.

ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಮೂವರಿಗೆ ಜಾಮೀನು; ದರ್ಶನ್ ಅರ್ಜಿ ಸೆ.27ಕ್ಕೆ ಮುಂದೂಡಿಕೆ

ಕರ್ನಾಟಕ ರಾಜ್ಯ ರೈತಸಂಘದ ಬಡಗಲಪುರ ನಾಗೇಂದ್ರ, ಹೋರಾಟ ಸಮಿತಿಯ ಕಾರಳ್ಳಿ ಶ್ರೀನಿವಾಸ್, ಮಾರೇಗೌಡ ಕೂಡ ದ್ವನಿಗೂಡಿಸಿ, ಅದೇ ಭೂಮಿಯಲ್ಲಿ ಬೆಂಗಳೂರಿಗೆ ಬೇಕಾದ ಹಣ್ಣು ತರಕಾರಿ, ಹೂವು ಎಲ್ಲವನ್ನೂ ಬೆಳೆಯುತ್ತಿದ್ದೇವೆ. ರೈತರ ವಾಸದ ಮನೆಗಳು, ಕೋಳಿಪಾರಂ ಸೇರಿದಂತೆ ಸುಮಾರು ಆರ್ಥಿಕ ಚಟುವಟಿಕೆಗಳು ಕೂಡ ಇದೇ ಭೂಮಿಯಲ್ಲಿ ನಡೆಯುತ್ತಿವೆ. ಆದ್ದರಿಂದ ಭೂಮಿಯನ್ನು ಸ್ವಾಧೀನದಿಂದ ಕೈಬಿಟ್ಟು ರೈತರನ್ನು ರಕ್ಷಿಸಬೇಕು ಎಂದು ಹೇಳಿದರು.

ಹೋರಾಟಗಾರರ ಮಾತು ಕೇಳಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಹೌದು ನಾನು ಅಧಿಕಾರಕ್ಕೆ ಬಂದಾಗ ರೈತರ ಪರವಾರ ನಿರ್ಧಾರ ಮಾಡೋಣ ಎಂದು ಹೇಳಿದ್ದೇನೆ. ಈ ಸಭೆಯಲ್ಲಿ ತೀರ್ಮಾನಕ್ಕೆ ಬರಲು ಬೇಕಾದ ತಯಾರಿ ಇಲ್ಲವಾದ್ದರಿಂದ, ಈ ಕುರಿತು ಮಾಹಿತಿ ತರೆಸಿಕೊಂಡು ಪರಿಶೀಲಿಸಿ ಅಕ್ಟೋಬರ್‌ ತಿಂಗಳಲ್ಲಿ ಸಭೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರೋಣ ಎಂದು ತಿಳಿಸಿದ್ದಾಗಿ ಹೋರಾಟಗಾರರು ತಿಳಿಸಿದ್ದಾರೆ.

ಈ ವೇಳೆ ಮುಂದಿನ ದಿನಾಂಕವನ್ನು ಇಂದೇ ನಿಗದಿಪಡಿಸಿ ಎಂದು ರೈತರು ಪಟ್ಟು ಹಿಡಿದಾಗ, ದಸರಾ ಹಬ್ಬದ ನಂತರ ತಿಂಗಳ ಕೊನೆಯೊಳಗೆ ಒಂದು ದಿನಾಂಕ ನಿಗದಿಪಡಿಸಿ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸಭೆಯಲ್ಲಿ, ಕರ್ನಾಟಕ ಪ್ರಾಂತ್ಯ ರೈತಸಂಘದ ಪ್ರಭಾ ಬೆಳವಂಗಲ, ಚಂದ್ರ ತೇಜಸ್ವಿ, ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ನಂಜಪ್ಪ, ಅಶ್ವತ್ಥಪ್ಪ, ರಾಮಚಂದ್ರಪ್ಪ, ಗೋಪಿನಾಥ್ ಸೇರಿದಂತೆ ರೈತ ಮುಖಂಡರು ಭಾಗಿಯಾಗಿದ್ದರು.

ವಿಡಿಯೊ ನೋಡಿ: ನಂಗ ಜೇನು ಕುರುಬ ಮಕ್ಕಾಳು.. ದೂರಿ ದೂರಿ, ನಂಗ ಕಾಡಿನ ಅರಸಾರು.. ದೂರಿ ದೂರಿ – ಜೇನು ಕುರುಬರ ಹಾಡು ಕೇಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ಸಲಹೆಯಂತೆ ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ : ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದ ನ್ಯಾ. ಉಜ್ಜಲ್ ಭುಯಾನ್

ಕೇಂದ್ರ ಸರ್ಕಾರದ ಕೋರಿಕೆಯ ಮೇರೆಗೆ ಹೈಕೋರ್ಟ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಪ್ರಸ್ತಾವನೆ ಮಾರ್ಪಡಿಸಿದ ಕೊಲಿಜಿಯಂನ ಇತ್ತೀಚಿನ ನಿರ್ಧಾರವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಪ್ರಶ್ನಿಸಿದ್ದು, "ನ್ಯಾಯಾಧೀಶರ ವರ್ಗಾವಣೆ ಮತ್ತು ನೇಮಕಾತಿ...

ತಮಿಳುನಾಡಿನಲ್ಲಿ ಎಂದೆಂದಿಗೂ ಹಿಂದಿಗೆ ಸ್ಥಾನವಿಲ್ಲ: ಮುಖ್ಯಮಂತ್ರಿ ಸ್ಟಾಲಿನ್

ಹಿಂದಿ ವಿರೋಧಿ ಆಂದೋಲನದ ಸಮಯದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ರಾಜ್ಯದ ಹುತಾತ್ಮರನ್ನು ಡಿಎಂಕೆ ಅಧ್ಯಕ್ಷ ಮತ್ತು ತನಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಇಂದು ಶ್ಲಾಘಿಸಿದರು. ನಮ್ಮಲ್ಲಿ ಹಿಂದಿ ಭಾಷೆಗೆ ಶಾಶ್ವತವಾಗಿ...

ಒಡಿಶಾ : ಗಣರಾಜ್ಯೋತ್ಸವ ದಿನ ಮಾಂಸ, ಮೊಟ್ಟೆ, ಮೀನು ಮಾರಾಟ ನಿಷೇಧಿಸಿದ ಜಿಲ್ಲಾಡಳಿತ!

ಗಣರಾಜ್ಯೋತ್ಸವದಂದು ಜಿಲ್ಲೆಯಾದ್ಯಂತ ಮಾಂಸಾಹಾರಿ ವಸ್ತುಗಳ ಮಾರಾಟವನ್ನು ನಿಷೇಧಿಸಿ ಒಡಿಶಾದ ಕೊರಾಪುಟ್ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜನವರಿ 26, ಗಣರಾಜ್ಯೋತ್ಸವದಂದು ಮಾಂಸ, ಕೋಳಿ, ಮೊಟ್ಟೆ, ಮೀನು ಮತ್ತು ಇತರ ಮಾಂಸಾಹಾರಿ ವಸ್ತುಗಳ...

ಮೋದಿ ಸ್ವಾಗತಿಸುವ ಫ್ಲೆಕ್ಸ್ ಬೋರ್ಡ್‌; ದಂಡ ವಿಧಿಸಿದ ಬಿಜೆಪಿ ಆಡಳಿತದ ತಿರುವನಂತಪುರಂ ಮಹಾನಗರ ಪಾಲಿಕೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿಗೆ ಸಂಬಂಧಿಸಿದಂತೆ ನಗರದಲ್ಲಿನ ಪಾದಚಾರಿ ಮಾರ್ಗಗಳಲ್ಲಿ ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸಿದ್ದಕ್ಕಾಗಿ ಬಿಜೆಪಿ ಆಡಳಿತವಿರುವ ತಿರುವನಂತಪುರಂ ಮಹಾನಗರ ಪಾಲಿಕೆ ತನ್ನದೇ ಪಕ್ಷಕ್ಕೆ ದಂಡ ವಿಧಿಸಿದೆ. ಪೊಲೀಸ್ ಠಾಣೆಯಲ್ಲಿ ದೂರು...

ಲಂಚ ಪ್ರಕರಣ : ಅದಾನಿಗೆ ಸಮನ್ಸ್ ತಲುಪಿಸಲು ಎರಡು ಬಾರಿ ನಿರಾಕರಿಸಿದ ಕೇಂದ್ರ

ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಅವರಿಗೆ ಕಾನೂನು ಸಮನ್ಸ್ ಕಳುಹಿಸಿತ್ತು. ಆದರೆ, ಭಾರತದ ಕಾನೂನು ಮತ್ತು ನ್ಯಾಯ ಸಚಿವಾಲಯ ಈ...

ನಕಾರಾತ್ಮಕ ಪರಿಣಾಮ ಕಡಿಮೆ ಮಾಡಲು ಸಾಮಾಜಿಕ ಮಾಧ್ಯಮ ನಿಯಂತ್ರಣ ಅಗತ್ಯ: ಕೈಲಾಶ್‌ ಸತ್ಯಾರ್ಥಿ

ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಕೈಲಾಶ್ ಸತ್ಯಾರ್ಥಿ ಅವರು ಅಪ್ರಾಪ್ತರಿಗೆ ಸಾಮಾಜಿಕ ಮಾಧ್ಯಮದ ನಿಯಂತ್ರಣ ನಿರ್ಧಾರವನ್ನು ಬೆಂಬಲಿಸಿದ್ದಾರೆ. 'ಇದರ ನಕಾರಾತ್ಮಕ ಪರಿಣಾಮವನ್ನು ಕಡಿಮೆ ಮಾಡಲು, ಸಕಾರಾತ್ಮಕವಾಗಿ ನೈತಿಕ ಮೌಲ್ಯಗಳನ್ನು ಹರಡಲು ಮತ್ತು ಸಮುದಾಯಗಳನ್ನು...

ನ್ಯೂಸ್ ಲಾಂಡ್ರಿ ಸಂಪಾದಕಿ ಬಗ್ಗೆ ತಪ್ಪು ವರದಿ: ದೆಹಲಿ ಹೈಕೋರ್ಟ್ ಅಸಮಾಧಾನ

ನ್ಯೂಸ್ ಲಾಂಡ್ರಿ ವ್ಯವಸ್ಥಾಪಕ ಸಂಪಾದಕಿ ಮನೀಷಾ ಪಾಂಡೆ ಅವರ ಮಾನನಷ್ಟ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ, ಕೋರ್ಟ್‌ನ ಮೌಖಿಕ ಅವಲೋಕನಗಳ ಕುರಿತು ಕೆಲ ಮಾಧ್ಯಮಗಳ ವರದಿ ಮಾಡಿದ ರೀತಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಅಸಮಾಧಾನ...

ಇಬ್ಬರು ಬಂಗಾಳಿ ವಲಸೆ ಕಾರ್ಮಿಕರ ಶವ ಪತ್ತೆ : ಒಬ್ಬರನ್ನು ಹಿಂದುತ್ವ ಗುಂಪು ಥಳಿಸಿ ಕೊಂದಿರುವ ಆರೋಪ

ಪ್ರತ್ಯೇಕ ರಾಜ್ಯಗಳಲ್ಲಿ ಇಬ್ಬರು ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರು ಶವವಾಗಿ ಪತ್ತೆಯಾಗಿದ್ದು, ದೇಶದಲ್ಲಿ ಬಂಗಾಳಿ ಮಾತನಾಡುವ ಕಾರ್ಮಿಕರ ವಿರುದ್ದ ಹೆಚ್ಚುತ್ತಿರುವ ಹಿಂಸಾಚಾರದ ಭಾಗವಾಗಿ ಇಬ್ಬರನ್ನೂ ಕೊಲ್ಲಲಾಗಿದೆ ಎಂದು ಅವರ ಕುಟುಂಬಗಳು ಆರೋಪಿಸಿವೆ. ಆಂಧ್ರ ಪ್ರದೇಶದ...

ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂ. ಕಳೆದುಕೊಂಡ ವ್ಯಕ್ತಿ : ಹಣ ಮರುಪಾವತಿ, ವಂಚನೆ ತಡೆಗೆ ಮಾರ್ಗಸೂಚಿ ಕೋರಿ ಸುಪ್ರೀಂ ಮೊರೆ

ಸೈಬರ್ ವಂಚನೆಯಾದ ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂಪಾಯಿ (22.92 ಕೋಟಿ) ಕಳೆದುಕೊಂಡ 82 ವರ್ಷದ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರ, ಭಾರತೀಯ ರಿಸರ್ವ್...

ಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

ಈ ತಿಂಗಳ ಆರಂಭದಲ್ಲಿ ಗುಂಪೊಂದು ಹಲ್ಲೆ ನಡೆಸಿ ಸಾರ್ವಜನಿಕವಾಗಿ ಅವಮಾನಿಸಿತ್ತು ಎನ್ನಲಾದ ಒಡಿಶಾ ಪಾದ್ರಿ ಕುಟುಂಬ ಎಂಟು ವರ್ಷಗಳ ಕಾಲ ವಾಸಿಸುತ್ತಿದ್ದ ಮನೆಯಿಂದ ಖಾಲಿ ಮಾಡುವಂತೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರ ಕುಟುಂಬ ಭಯಭೀತರಾಗಿ...