Homeಕರ್ನಾಟಕಸಚಿವ ಮುನಿಯಪ್ಪ ಭೇಟಿಗೆ ಹೊರಟಿದ್ದ ಅನ್ನದಾತರಿಗೆ ಪೊಲೀಸರ ಅಡ್ಡಿ; ಚನ್ನರಾಯಪಟ್ಟಣ ರೈತರಿಂದ ರಸ್ತೆಯಲ್ಲೆ ಅಹೋರಾತ್ರಿ ಧರಣಿ

ಸಚಿವ ಮುನಿಯಪ್ಪ ಭೇಟಿಗೆ ಹೊರಟಿದ್ದ ಅನ್ನದಾತರಿಗೆ ಪೊಲೀಸರ ಅಡ್ಡಿ; ಚನ್ನರಾಯಪಟ್ಟಣ ರೈತರಿಂದ ರಸ್ತೆಯಲ್ಲೆ ಅಹೋರಾತ್ರಿ ಧರಣಿ

- Advertisement -
- Advertisement -

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ರೈತರು ಇಂದು ಬೆಳಿಗ್ಗೆ ಭೂ ಸ್ವಾಧೀನವನ್ನು ಕೈ ಬಿಡುವಂತೆ ಒತ್ತಾಯಿಸಿ ಸಚಿವ ಕೆ.ಎಚ್. ಮುನಿಯಪ್ಪನವರನ್ನು ಭೇಟಿ ಮಾಡಲು‌ ಹೊರಟಿದ್ದ ರೈತರ ವಾಹನಗಳನ್ನು ಪೋಲೀಸರು ಮಾರ್ಗ ಮಧ್ಯೆ ತಡೆದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಅನ್ನದಾತರು, ಚನ್ನರಾಯಪಟ್ಟಣ ದೇವನಹಳ್ಳಿ ಮಾರ್ಗ ಮಧ್ಯೆ ರಸ್ತೆಯಲ್ಲಿ ಕುಳಿತು ಅಹೋರಾತ್ರಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಹಲವು ಭಾರಿ ಭೂಸ್ವಾಧೀನ ಹಿಂತೆಗೆದುಕೊಳ್ಳುವ ಭರವಸೆ ನೀಡಿದ್ದ ಸಚಿವರು, ಈಗ ರೈತರನ್ನು ಭೇಟಿ ಮಾಡಲು ಹೆದರಿಕೊಂಡಿದ್ದಾರೆ. ಸಾಲದ್ದಕ್ಕೆ ಭೇಟಿಗೆ ಹೊರಟ ರೈತರನ್ನು ಕಂಡ ಕಂಡಲ್ಲಿ ಪೋಲೀಸ್ ದಿಗ್ಬಂದನ ಹಾಕಿಸಿ ತಡೆಯುತ್ತಿದ್ದಾರೆ.

ಚನ್ನರಾಯಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಪ್ರತಿಭಟನಾನಿರತ ರೈತರು ಮಾತಾನಾಡಿದರು.

ಚನ್ನರಾಯಪಟ್ಟಣದ 13 ಹಳ್ಳಿಗಳಲ್ಲಿ ನಡೆಯುತ್ತಿರುವ ಭೂ ಸ್ವಾದೀನವನ್ನು ವಿರೋಧಿಸಿ ಕಳೆದ ಮೂರು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದರು ಭೂಸ್ವಾಧೀನ ಪ್ರಕ್ರಿಯೆಯನ್ನು ಮುಂದುವರಿಸುವಂತೆ ಕೆಐಎಡಿಬಿ ಅಧಿಕಾರಿಗಳು ಶಿಫಾರಸ್ಸು ಮಾಡಿರುವುದರ ಕುರಿತಾಗಿ ಮಾತನಾಡಿ, ಈ ಪ್ರಕ್ರಿಯೆ ತಡೆಹಿಡಿಯುವಂತೆ ಒತ್ತಾಯಿಸಲು ಕಳೆದ ಸೋಮವಾರ ರೈತರು ದೇವನಹಳ್ಳಿ ಶಾಸಕ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪನವರನ್ನು 10ನೇ ತಾರೀಕು ಗುರುವಾರದಂದು ಬಂದು ಭೇಟಿ ಮಾಡುವಂತೆ ಮಾತುಕತೆಯಾಗಿತ್ತು. ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸುತ್ತಿದ್ದ ರೈತರನ್ನು ಉದ್ದೇಶಿಸಿ, ನಾನು ರೈತರ ಪರವಾಗಿ ನಿಂತು ಭೂಸ್ವಾಧೀನ ಪ್ರಕ್ರಿಯೆಯನ್ನು ತಡೆಹಿಡುವಂತೆ ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಹೇಳಿದ್ದರು. ಅವರ ಮಾತಿನಂತೆ ನಾವು ಇಂದು ಮಂತ್ರಿಗಳನ್ನು ಭೇಟಿ ಮಾಡಲು ಹೊರಟರೆ ಪೊಲೀಸರು ನಮ್ಮನ್ನು ತಡೆಯುತ್ತಿದ್ದಾರೆ ಎಂದು ರೈತರು ಆಕ್ರೋಶ ಹೊರಹಾಕಿದರು.

ವಿಷ ಸೇವಿಸಲು ಮುಂದಾದ ರೈತ

ಈ ಮಧ್ಯೆ, ಕಳೆದ ಮೂರು ವರ್ಷಗಳಿಂದ ಬೀದಿಯಲ್ಲಿ ಕುಳಿತಿದ್ದರು ಸರ್ಕಾರಗಳು ನಮ್ಮನ್ನು ಗಮನಿಸುತ್ತಿಲ್ಲ ಎಂದು ಆಕ್ರೋಶಬರಿತವಾಗಿ ಮಾತನಾಡುತ್ತಿದ್ದ ರೈತರ ಗುಂಪು ಊಟದಲ್ಲಿ ವಿಷ ಬೆರೆಸಿ ತಿನ್ನಲು ಮುಂದಾಗಿತ್ತು. ಆದರೆ, ಅಲ್ಲಿನ ರೈತರು ನಿಂದವರನ್ನು ತಡೆದು ಸಮಾಧಾನಪಡಿಸಿದರು. ಈ ಮಧ್ಯೆ ನೂಕುನುಗ್ಗಲು ಉಂಟಾಗಿ ವಿಷ ಸೇವನೆಗೆ ಮುಂದಾಗಿದ್ದ ರೈತ ವೆಂಕಟೇಶ್ ರವರು ಅಸ್ವಸ್ಥಗೊಂಡರು. ತಕ್ಷಣವೇ ಅವರನ್ನು ರೈತರು ದೇವನಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.

‘ಪ್ರಾಣ ಬಿಟ್ಟರೂ ಸರಿ ಭೂಮಿ ಬಿಡುವುದಿಲ್ಲ’ ಎಂದು ಹಠ ಹಿಡಿದು ಕುಳಿತಿರುವ ರೈತರು, ನಾವು ಮಂತ್ರಿಗಳು ಅಧಿಕಾರಿಗಳು ಸೇರಿದಂತೆ ಎಲ್ಲರ ಮೇಲೆ ವಿಶ್ವಾಸವನ್ನು ಕಳೆದುಕೊಂಡಿದ್ದು, ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಿ ನಮ್ಮ ಸಮಸ್ಯೆಯನ್ನು ಬಗೆಹರಿಸುವವರಿಗೆ ನಾವು ವಾಪಸ್ಸು ಹೋಗುವುದಿಲ್ಲ ಎಂದು ಹೇಳುವ ಮೂಲಕ ರಸ್ತೆ ತಡೆಗೆ ಮುಂದಾಗಿದ್ದಾರೆ.

ಪೊಲೀಸ್ ಇಲಾಖೆ ಮಂತ್ರಿಗಳನ್ನು ಸಂಪರ್ಕಿಸಲು ಪ್ರಯತ್ನ ಪಡುತ್ತಿದೆಯಾದರೂ ಸಂಜೆಯವರೆಗೂ ಮುಖ್ಯಮಂತ್ರಿಗಳ ಭೇಟಿಯ ಕುರಿತಾಗಿ ಯಾವುದೇ ಮಾಹಿತಿ ಬಂದಿಲ್ಲ. ಆದ್ದರಿಂದ, ತಕ್ಷಣ ಭೂಸ್ವಾಧೀನಕ್ಕೆ ಉದ್ದೇಶಿಸಿ ನಡೆಸುತ್ತಿರುವ ಎಲ್ಲ ಪ್ರಕ್ರಿಯೆಗಳು ನಿಲ್ಲಿಸಬೇಕು ಮತ್ತು ಮುಖ್ಯಮಂತ್ರಿಗಳ ಭೇಟಿಗೆ ದಿನ ನಿಗದಿ ಮಾಡಲೇಬೇಕೆಂದು ಒತ್ತಾಯಿಸಿ ರೈತರು ರಸ್ತೆಯಲ್ಲಿ ಅಹೋರಾತ್ರಿ ಧರಣಿಗೆ  ಮುಂದಾಗಿದ್ದಾರೆ.

ಹೋರಾಟದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಚಂದ್ರ ತೇಜಸ್ವಿ, ದಲಿತ ಸಂಘರ್ಷ ಸಮಿತಿ ಮುಖಂಡರಾದ ಕಾರಳ್ಳಿ ಶ್ರೀನಿವಾಸ್, ರೈತರಾದ ಜಯರಾಮೇಗೌಡ, ನಲ್ಲಪ್ಪನಹಳ್ಳಿ ನಂಜಪ್ಪ, ಪ್ರಮೋದ್, ಮೋಹನ್, ಮಾರೇಗೌಡ, ಗೋಪಿನಾತ್, ಬೈರೇಗೌಡ, ನಂದನ್, ಮುಕುಂದ, ಅಶ್ವತ್ಥಪ್ಪ, ವೆಂಕಟರಮಣಪ್ಪ, ಸುಶೀಲಮ್ಮ, ನಾರಾಯಣಮ್ಮ, ವೆಂಕಟೇಶ್ ಸೇರಿದಂತೆ ನೂರಾರು ರೈತರು ಭಾಗಿಯಾಗಿದ್ದರು.

ಕರ್ನಾಟಕದ ಆರ್ಥಿಕ ಸ್ಥಿತಿ ಬಲಿಷ್ಠವಾಗಿದೆ: ಗೃಹ ಸಚಿವ ಪರಮೇಶ್ವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...