Homeಮುಖಪುಟಪಂಜಾಬ್ ಚುನಾವಣೆ: ಚರಣ್‌ಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ- ರಾಹುಲ್ ಗಾಂಧಿ ಘೋಷಣೆ

ಪಂಜಾಬ್ ಚುನಾವಣೆ: ಚರಣ್‌ಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ- ರಾಹುಲ್ ಗಾಂಧಿ ಘೋಷಣೆ

- Advertisement -
- Advertisement -

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹಾಲಿ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಲೂಧಿಯಾನದಲ್ಲಿ ಈ ಕುರಿತು ಘೋಷಣೆ ಮಾಡಿದ್ದಾರೆ.

ಪಂಜಾಬ್‌ನ ಮುಖ್ಯಮಂತ್ರಿ ಅಭ್ಯರ್ಥಿಯ ಆಯ್ಕೆ ನನ್ನ ನಿರ್ಧಾರವಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಪಂಜಾಬ್ ಸಿಎಂ ಬಡ ಕುಟುಂಬದಿಂದ ಬಂದಿದ್ದಾರೆ. ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಚನ್ನಿ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕುರಿತು ಟೆಲಿಪೋಲ್‌ನ ಮೂಲಕ ಜನರ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಈಗ ಹಾಲಿ ಮುಖ್ಯಮಂತ್ರಿಯನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಇದರಿಂದ ಮತ್ತೆ ರಾಜ್ಯ ಘಟಕದಲ್ಲಿ ಬಿಕ್ಕಟ್ಟು ಉಂಟಾಗಬಹುದು ಎನ್ನಲಾಗಿದೆ.

ಇದನ್ನೂ ಓದಿ: ಓವೈಸಿ ಕಾರಿನ ಮೇಲೆ ದಾಳಿ ಬೆನ್ನಲ್ಲೇ ಸ್ಟಾರ್ ಪ್ರಚಾರಕರಿಗೆ ಭದ್ರತೆ ನೀಡಲು ಚುನಾವಣಾ ಆಯೋಗ ಸೂಚನೆ

2017 ರಲ್ಲಿ ರಾಜ್ಯ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರಿದ್ದ ನವಜೋತ್ ಸಿಂಗ್ ಸಿಧು ಅಂದಿನಿಂದ ತಮ್ಮ ಮಹತ್ವಾಕಾಂಕ್ಷೆಗಳನ್ನು ಸ್ಪಷ್ಟಪಡಿಸುತ್ತಿದ್ದಾರೆ. ಹೊರಗಡೆ ರಾಹುಲ್ ಗಾಂಧಿಯವರ ಅಭಿಪ್ರಾಯಗಳಿಗೆ ಬದ್ಧ ಎಂದು ಹೇಳಿದ್ದರೂ ಕೂಡ ಬೂದಿ ಮುಚ್ಚಿದ ಕೆಂಡದಂತಹ ಸ್ಥಿತಿ ಪಂಜಾಬ್ ಕಾಂಗ್ರೆಸ್‌ನಲ್ಲಿದೆ.

ಕಾಂಗ್ರೆಸ್ ನಿರ್ಧಾರಕ್ಕೆ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್‌ ಚನ್ನಿ ಧನ್ಯವಾದ ತಿಳಿಸಿದ್ದಾರೆ. “ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಮತ್ತು ಪಂಜಾಬ್ ಜನತೆಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ. ಪಂಜಾಬ್ ಅನ್ನು ಮುಂದಕ್ಕೆ ಕೊಂಡೊಯ್ಯಲು ಕಳೆದ 111 ದಿನಗಳಲ್ಲಿ ನಾವು ತುಂಬಾ ಶ್ರಮಿಸುತ್ತಿರುವುದನ್ನು ನೀವು ನೋಡಿದ್ದೀರಿ. ಹೀಗೆಯೇ ಹೊಸ ಉತ್ಸಾಹ ಮತ್ತು ಸಮರ್ಪಣೆಯೊಂದಿಗೆ ಪಂಜಾಬ್ ಮತ್ತು ಪಂಜಾಬಿಗಳನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯುವ ಭರವಸೆಯನ್ನು ನಿಮಗೆ ನೀಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು? ಒಂದು ಪ್ರತ್ಯಕ್ಷದರ್ಶಿ ವರದಿ

ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ ಘೋಷಿಸುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದು ಪಂಜಾಬ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಇಂದು ಮುಂಜಾನೆ ತಿಳಿಸಿದ್ದರು.

“ನಿರ್ಧಾರದ ಕ್ರಿಯೆಯಿಲ್ಲದೆ ಏನನ್ನೂ ಸಾಧಿಸಲಾಗಿಲ್ಲ. ಪಂಜಾಬ್‌ಗೆ ಸ್ಪಷ್ಟತೆ ನೀಡಲು ಬರುತ್ತಿರುವ ರಾಹುಲ್ ಜಿ ಅವರಿಗೆ ಆತ್ಮೀಯ ಸ್ವಾಗತ. ಎಲ್ಲರೂ ಅವರ ನಿರ್ಧಾರಕ್ಕೆ ಬದ್ಧರಾಗುತ್ತಾರೆ” ಎಂದು ಟ್ವೀಟ್ ಮಾಡಿದ್ದರು.

ಇನ್ನು, ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಕಾಂಗ್ರೆಸ್ ಎರಡು ಸ್ಥಾನಗಳಿಂದ ಕಣಕ್ಕಿಳಿಸಿದೆ. ಜೊತೆಗೆ ಉತ್ತರಾಖಂಡದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅವರನ್ನು ಸೇರಿಸಿದೆ. ಫೆಬ್ರವರಿ 20 ರಂದು 117 ಸದಸ್ಯ ಬಲದ ಪಂಜಾಬ್‌ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿ: ನಿರುದ್ಯೋಗ ಸಮಸ್ಯೆ ಪ್ರಸ್ತಾಪಿಸಿ ರೋಡ್‌ ಶೋ ನಡೆಸಿದ ಪ್ರಿಯಾಂಕಾ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...