Homeಕರ್ನಾಟಕಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

- Advertisement -
- Advertisement -

ಎನ್‌ಟಿಎ ಮತ್ತು ಯುಜಿಸಿ ಸಹಭಾಗಿತ್ವದಲ್ಲಿ ನಡೆಯುವ ನೆಟ್, ಜೆಆರ್‌ಎಫ್ ಪರೀಕ್ಷೆ ವೇಳೆ ಪೀಣ್ಯದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳಿಂದ ಸಿಬ್ಬಂದಿಗಳು ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳ ನಡುವೆ ಕೆಲಕಾಲ ವಾಗ್ವಾದ ನಡೆದಿದೆ.

ಬುಧವಾರ ನಗರದ ಪೀಣ್ಯ 1ನೇ ಹಂತದಲ್ಲಿರುವ ಬಿಟ್‌ಬೈಟೆಕ್ ಸೊಲ್ಯೂಷನ್‌ನಲ್ಲಿ ಸಿಬ್ಬಂದಿಯು ಪರೀಕ್ಷಾರ್ಥಿಗಳಿಂದ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಈ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ 150ಕ್ಕೂ ಹೆಚ್ಚು ಅಭ್ಯರ್ಥಿಗಳ ಪೈಕಿ ಬಹುತೇಕರು ಮೊಬೈಲ್, ಬ್ಯಾಗ್‌ಗಳನ್ನು ತಂದಿದ್ದರು. ಪರೀಕ್ಷೆ ಆರಂಭವಾಗುವುದಕ್ಕಿಂತ ಮೊದಲು ಎಲ್ಲ ಅಭ್ಯರ್ಥಿಗಳು ಮೊಬೈಲ್‌ಗಳನ್ನು ಪರೀಕ್ಷಾ ಸಿಬ್ಬಂದಿ ಬಳಿ ಡೆಪಾಸಿಟ್ ಮಾಡಿದ್ದರು. ಪರೀಕ್ಷೆ ಮುಗಿದ ನಂತರ ಆ ಮೊಬೈಲ್‌ಗಳನ್ನು ವಾಪಸ್ ಕೊಡಬೇಕಾದರೆ ಪ್ರತಿಯೊಬ್ಬರೂ 20 ರುಪಾಯಿ ಕೊಡಬೇಕೆಂದು ಪರೀಕ್ಷಾ ಸಿಬ್ಬಂದಿ ಹೇಳಿದ್ದರು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ‘ನಾವೇಕೆ ದುಡ್ಡು ಕೊಡಬೇಕು? ನಮ್ಮ ಬಳಿ ದುಡ್ಡು ಇಲ್ಲ’ ಎಂದು ಹೇಳಿದ್ದಾರೆ. ಆಗ ಪರೀಕ್ಷಾ ಸಿಬ್ಬಂದಿ ‘ದುಡ್ಡು ಕೊಡುವವರೆಗೂ ನಿಮ್ಮ ಮೊಬೈಲ್‌ಗಳನ್ನು ವಾಪಸ್ ಕೊಡುವುದಿಲ್ಲ’ ಎಂದು ಹೇಳಿದ್ದಾರೆ.

ಸಿಬ್ಬಂದಿಯ ಈ ನಡೆಯಿಂದ ಕೆರಳಿದ ಪರೀಕ್ಷಾರ್ಥಿಗಳು, ತಂದಿರುವ ಬ್ಯಾಗ್ ಮತ್ತು ಮೊಬೈಲ್‌ಗಳನ್ನು ಎಲ್ಲಿ ಇಡಬೇಕು? ಎಂದು ಪ್ರಶ್ನಿಸಿದ್ದಾರೆ. ಆಗ ಸಿಬ್ಬಂದಿಗಳು, ದುಡ್ಡು ಕೊಟ್ಟರೆ ನಾವು ಇಟ್ಟುಕೊಳ್ಳುತ್ತೇವೆ, ಇಲ್ಲವಾದರೆ ಹೊರಗೆ ಇಡಿ ಎಂದು ಹೇಳಿದ್ದಾರೆ. ಇದರಿಂದ ಅಸಮಾಧಾನಗೊಂಡ ಪರೀಕ್ಷಾರ್ಥಿಗಳು ಪರೀಕ್ಷೆ ಕೇಂದ್ರದಲ್ಲಿ ಮೊಬೈಲ್ ಡೆಪಾಸಿಟ್‌ಗೂ ಹಣ ಪಡೆದದ್ದು ಇದೆ ಮೊದಲು ಎಂದು ಎನ್‌ಟಿ‌ಎಗೆ ಹಿಡಿಶಾಪ ಹಾಕಿದರು.

ಈ ಬಗ್ಗೆ ಪರೀಕ್ಷಾರ್ಥಿಯಾಗಿರುವ ಅನಿಲ್ ಕುಮಾರ್ ಮಾತನಾಡಿ, ”ಪರೀಕ್ಷಾ ನೋಂದಣಿ ಶುಲ್ಕವಾಗಿ ನಾವು 1000 ರೂ. ಪಾವತಿಸಿರುತ್ತೇವೆ. ಆದರೂ ಪರೀಕ್ಷಾ ಕೇಂದ್ರದಲ್ಲಿ 20 ರೂಪಾಯಿ ಮೊಬೈಲ್ ಡೆಪಾಸಿಟ್‌ಗೆ ಪಡೆದರು. ಈ ಹಿಂದೆಯೂ ಸಹ ನಾವು ನೆಟ್ ಪರೀಕ್ಷೆ ಮತ್ತು ಹಲವು ಸರ್ಕಾರಿ ಪರೀಕ್ಷೆಗಳನ್ನು ಬರೆದಿದ್ದೇವೆ, ಆದರೆ ಅಲ್ಲೆಲ್ಲೂ ಮೊಬೈಲ್ ಡಿಪಾಸಿಟ್‌ಗೆ ಹಣ ಪಡೆದಿರಲಿಲ್ಲ. ಈ ಬಗ್ಗೆ UGC ಕೂಡಲೇ ಗಮನ ಹರಿಸಬೇಕು” ಎಂದು ಹೇಳಿದರು.

ಮತ್ತೋರ್ವ ಪರೀಕ್ಷಾರ್ಥಿಯಾಗಿರುವ ಮುನಿಸ್ವಾಮಿ ಮಾತನಾಡಿ, ”ಮೊಬೈಲ್ ಡೆಪಾಸಿಟ್‌ಗೆ ಹಣ ವಸೂಲಿ ಮಾಡುತ್ತಿರುವುದು ಇದೇ ಮೊದಲ ಎನಿಸುತ್ತದೆ. ಈ ಪರೀಕ್ಷಾ ಕೇಂದ್ರದಲ್ಲಿ ಸರಿಯಾದ ಸೌಲಭ್ಯಗಳೂ ಇಲ್ಲ, ಆದರೂ ಹೆಚ್ಚಿನ ಹಣ ವಸೂಲಿಗೆ ಮುಂದಾಗಿದೆ. ಈ ಕೇಂದ್ರದಲ್ಲಿ 150 ಜನರಿಗೆ ಒಂದೇ ಶೌಚಾಲಯವಿದೆ. ಅಭ್ಯರ್ಥಿಗಳು ಪರೀಕ್ಷೆಯ ಅರ್ಧ ಸಮಯವನ್ನು ಶೌಚಾಲಯದ ಬಾಗಿಲಲ್ಲೇ ಕಳೆಯುವಂತಾಯಿತು. ಸೂಕ್ತ ಸೌಲಭ್ಯಗಳಿರುವ ಕೇಂದ್ರಗಳನ್ನು ಎನ್‌ಟಿ‌ಎ ಆಯ್ಕೆ ಮಾಡಬೇಕು. ಇಲ್ಲವಾದರೆ ಅಭ್ಯರ್ಥಿಗಳಿಗೆ ವಿನಾಕಾರಣ ತೊಂದರೆಯಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿದ್ಯುತ್ ದರ ಏರಿಕೆ: ಇಂದು ಕರ್ನಾಟಕ ಬಂದ್‌ಗೆ ವ್ಯಾಪಾರ, ಉದ್ಯಮ ಸಂಸ್ಥೆಗಳಿಂದ ಕರೆ; ಸಿಪಿಎಂ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...