Homeಮುಖಪುಟದೆಹಲಿ ಅಬಕಾರಿ ನೀತಿ ಹಗರಣ: ಸಂಜಯ್ ಸಿಂಗ್ ವಿರುದ್ಧ ಚಾರ್ಜ್‌ ಶೀಟ್ ಸಲ್ಲಿಕೆ

ದೆಹಲಿ ಅಬಕಾರಿ ನೀತಿ ಹಗರಣ: ಸಂಜಯ್ ಸಿಂಗ್ ವಿರುದ್ಧ ಚಾರ್ಜ್‌ ಶೀಟ್ ಸಲ್ಲಿಕೆ

- Advertisement -
- Advertisement -

ದೆಹಲಿ ಅಬಕಾರಿ ನೀತಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಎಪಿ ಸಂಸದ ಸಂಜಯ್ ಸಿಂಗ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸ್ಥಳೀಯ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಪ್ರಕರಣಕ್ಕೆ ಪೂರಕವಾದ ಚಾರ್ಜ್ ಶೀಟ್ ಇದಾಗಿದ್ದು, ಇಡಿ ಈ ಹಿಂದೆ ಇಂತಹ ಐದು ಚಾರ್ಜ್ ಶೀಟ್ ಗಳನ್ನು ಸಲ್ಲಿಕೆ ಮಾಡಿದೆ.

ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದಾಗಿರುವ ಸಂಜಯ್ ಸಿಂಗ್ ಅವರನ್ನು ಅಕ್ಟೋಬರ್‌ನಲ್ಲಿ ಇಡಿ ಬಂಧಿಸಿದೆ. ಉದ್ಯಮಿ ದಿನೇಶ್ ಅರೋರಾ ಅವರಿಂದ ಸಂಜಯ್ ಸಿಂಗ್ 2 ಕೋಟಿ ರೂಪಾಯಿ ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಸಂಜಯ್ ಸಿಂಗ್ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಸಂಜಯ್ ಸಿಂಗ್ ಅಬಕಾರಿ ನೀತಿಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಎರಡನೇ ಎಎಪಿ ನಾಯಕರಾಗಿದ್ದಾರೆ. ಪ್ರಕರಣದಲ್ಲಿ ಮೊದಲು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನವಾಗಿದೆ. ಅವರು ಪ್ರಸ್ತುತ ಜೈಲಿನಲ್ಲೇ ಇದ್ದಾರೆ.

ಮದ್ಯ ವ್ಯಾಪಾರಿಗಳಿಗೆ ಪರವಾನಗಿ ನೀಡುವ ದೆಹಲಿ ಸರ್ಕಾರದ ಅಬಕಾರಿ ನೀತಿ ಅಥವಾ ಮದ್ಯ ನೀತಿ 2021-22 ಲಂಚ ನೀಡಿದ ಕೆಲವು ವಿತರಕರಿಗೆ ಅನುಕೂಲಕರವಾಗಿ ರೂಪಿಸಲಾಗಿದೆ ಎಂದು ಆರೋಪಿಸಲಾಗಿದೆ. ಹಗರಣದ ವಿಷಯ ಬೆಳಕಿಗೆ ಬಂದ ಬಳಿಕ ನಂತರ ಈ ನೀತಿಯನ್ನು ರದ್ದುಗೊಳಿಸಲಾಯಿತು ಮತ್ತು ದೆಹಲಿ ಲೆಫ್ಟಿನೆಂಟ್ ಗವರ್ನರ್ ಸಿಬಿಐ ತನಿಖೆಗೆ ಶಿಫಾರಸು ಮಾಡಿದರು. ನಂತರ ಇಡಿ ಪಿಎಂಎಲ್ಎ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

ಇದನ್ನೂ ಓದಿ : ಗಲ್ಲು ಶಿಕ್ಷೆ ಪ್ರಕರಣ: ಯೆಮೆನ್‌ಗೆ ತೆರಳಲು ನರ್ಸ್‌ ನಿಮಿಷಾ ತಾಯಿಗೆ ಸಿಗದ ಅನುಮತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬಿಜೆಪಿಗೆ ಮತ ಹಾಕುವಂತೆ...

0
ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಅಧೀರ್ ರಂಜನ್ ಚೌಧರಿ ಅವರಿ ಬಿಜೆಪಿ ಪರ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ. ವಿಡಿಯೋದಲ್ಲಿ " ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷಕ್ಕೆ ಮತ...