Homeಮುಖಪುಟದಾನದ ಹೆಸರಿನಲ್ಲಿ 'ಧಾರ್ಮಿಕ ನಂಬಿಕೆ'ಯನ್ನು ಪ್ರಭಾವಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ - ಉಪ ರಾಷ್ಟ್ರಪತಿ ಜಗದೀಪ್ ಧನಕರ್

ದಾನದ ಹೆಸರಿನಲ್ಲಿ ‘ಧಾರ್ಮಿಕ ನಂಬಿಕೆ’ಯನ್ನು ಪ್ರಭಾವಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ – ಉಪ ರಾಷ್ಟ್ರಪತಿ ಜಗದೀಪ್ ಧನಕರ್

- Advertisement -
- Advertisement -

ದಾನ ಪಡೆದವರ ‘ಧಾರ್ಮಿಕ ನಂಬಿಕೆ’ಯ ಮೇಲೆ ಪ್ರಭಾವ ಬೀರಲು ದಾನವನ್ನು ಬಳಸುವುದು ಪ್ರಜಾಪ್ರಭುತ್ವಕ್ಕೆ ಗಂಭೀರ ಸವಾಲುಗಳನ್ನು ಒಡ್ಡುತ್ತದೆ, ಅಗತ್ಯವಿರುವವರಿಗೆ ಬೇಷರತ್ತಾಗಿ ಸಹಾಯ ಮಾಡಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಖರ್ ಒತ್ತಿ ಹೇಳಿದ್ದಾರೆ. ಅವರು ಶುಕ್ರವಾರ ಮಂಡ್ಯದ ಬಿಜಿ ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಿದ್ದರು. ದಾನದ ಹೆಸರಿನಲ್ಲಿ

“ದಾನ, ನೆರವು ಅಥವಾ ಅಶಕ್ತರ ಕೈಹಿಡಿಯುವುದ ಯಾವುದೆ ನಿರೀಕ್ಷೆಗಳು ಅಥವಾ ಯಾವುದೆ ಪ್ರತಿಪಾದನೆಗಳು ಇಲ್ಲದೆ ಮಾಡಬೇಕು. ನಮ್ಮ ತತ್ತ್ವಶಾಸ್ತ್ರವು ಒಳ್ಳೆಯದನ್ನು ಮಾಡಿ, ಅದನ್ನು ಮರೆತುಬಿಡಲು ಹೇಳುತ್ತದೆ” ಎಂದು ಅವರು ಹೇಳಿದ್ದಾರೆ. ದಾನವು ಧಾರ್ಮಿಕ ನಂಬಿಕೆಯ ಸ್ವಾತಂತ್ರ್ಯವನ್ನು ನಿರ್ಬಂಧಿಸಿದರೆ ಅದು ರಾಷ್ಟ್ರೀಯ ಏಕತೆಗೆ ಮತ್ತು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೇಶದ ಯುವಜನರು ಸಾಂಪ್ರದಾಯಿಕವಾಗಿ ಹುಡುಕುವ ಸರ್ಕಾರಿ ಉದ್ಯೋಗಗಳ ಅನ್ವೇಷಣೆಯಿಂದ ದೂರವಿರಲು ಹೇಳಿದ ಅವರು, ಬದಲಿಯಾಗಿ ವೇಗವಾಗಿ ಮುನ್ನಡೆಯುತ್ತಿರುವ ಭಾರತದಲ್ಲಿ ಹೊರಹೊಮ್ಮುತ್ತಿರುವ ವೃತ್ತಿ ಅವಕಾಶಗಳನ್ನು ಅನ್ವೇಷಿಸಲು ಒತ್ತಾಯಿಸಿದ್ದಾರೆ. ದಾನದ ಹೆಸರಿನಲ್ಲಿ

“ನಿಮ್ಮಲ್ಲಿ ಕೆಲವರು ಸರ್ಕಾರಿ ಸೇವೆಯೊಂದೇ ದಾರಿ ಎಂದು ಭಾವಿಸುತ್ತಾರೆ. ಅದರೆ ಅದು ಹಾಗೆ ಇಲ್ಲ. ಸುತ್ತಲೂ ನೋಡಿ, ಭಾರತವು ಸಮುದ್ರ, ಭೂಮಿ, ಆಕಾಶ ಮತ್ತು ಬಾಹ್ಯಾಕಾಶದಲ್ಲಿ ಮುನ್ನಡೆಯುತ್ತಿರುವಾಗ ನೀವು ಅವಕಾಶಗಳನ್ನು ಕಂಡುಕೊಳ್ಳುತ್ತೀರಿ” ಎಂದು ಧನಖರ್ ಹೇಳಿದ್ದಾರೆ. ಸುಳ್ಳು ಮತ್ತು ತಪ್ಪು ಮಾಹಿತಿಯ ವಿರುದ್ಧ ಜಾಗರೂಕರಾಗಿರಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ ಅವರು, ಇವುಗಳು ರಾಷ್ಟ್ರೀಯ ಆರೋಗ್ಯಕ್ಕೆ ಹಾನಿಕಾರಕವೆಂದು ವಿವರಿಸಿದ್ದಾರೆ.

“ನಾವು 5,000 ವರ್ಷಗಳಿಂದ ಒಳಗೊಳ್ಳುವಿಕೆಯನ್ನು ಮಾಡುತ್ತಲೆ ಬಂದಿದ್ದು, ಅದರಲ್ಲಿ ನಮಗೆ ಯಾವುದೆ ಪಾಠಗಳ ಅಗತ್ಯವಿಲ್ಲ. ಈ ತತ್ತ್ವಶಾಸ್ತ್ರ ಮಾತ್ರ ಸಮರ್ಥನೀಯವಾಗಿದ್ದು, ಜಾಗತಿಕ ಶಾಂತಿ ಮತ್ತು ಸೌಹಾರ್ದತೆಯನ್ನು ಉಂಟುಮಾಡುತ್ತದೆ. ಆದರೆ ಕೆಲವು ಜನರು ಅಂತರ್ಗತತೆಯ ಪ್ರಜ್ಞೆಯನ್ನು ವಿನಾಶಗೊಳಿಸುವ ವಿಭಿನ್ನ ಪರಿಕಲ್ಪನೆಯನ್ನು ಹೊಂದಿದ್ದಾರೆ. ಅಂತವರ ಬಗ್ಗೆ ನಾವು ಅತ್ಯಂತ ಜಾಗರೂಕರಾಗಿರಬೇಕು” ಎಂದು ಹೇಳಿದ್ದಾರೆ.

ಆದಿಚುಂಚನಗಿರಿ ಮಠವು ಜಾಗತಿಕವಾಗಿ ತನ್ನ 26 ಶಾಖಾ ಮಠಗಳು ಮತ್ತು 500 ಶಿಕ್ಷಣ ಸಂಸ್ಥೆಗಳ ಮೂಲಕ ವ್ಯಾಪಕವಾದ ಸಾಮಾಜಿಕ ಕಾರ್ಯಗಳನ್ನು ಮಾಡಿದೆ ಎಂದು ಶ್ಲಾಘಿಸಿದ ಅವರು, ತಳಮಟ್ಟದ ಗುಂಪುಗಳಿಗೆ ಅದು ಮಾಡಿರುವ ಸಮರ್ಪಣೆಯನ್ನು ಶ್ಲಾಘಿಸಿದ್ದಾರೆ. “ದುರ್ಬಲರಿಗಾಗಿ ಸಂಸ್ಥೆ ಮಾಡುತ್ತಿರುವ ಸೇವೆಯು ಸನಾತನ ಧರ್ಮದ ವಿಮರ್ಶಕರಿಗೆ ಪ್ರತಿಕ್ರಿಯೆಯಾಗಿ ನಿಂತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋಲ್ಡ್‌ಪ್ಲೇ, ದಿಲ್ಜೀತ್ ದೋಸಾಂಜ್‌ನ ಸಂಗೀತ ಕಚೇರಿಗಳ ಟಿಕೆಟ್ ಮಾರಾಟದಲ್ಲಿ ‘ಅಕ್ರಮ’ ಪತ್ತೆ – ಇಡಿ ಹೇಳಿಕೆ

ಕೋಲ್ಡ್‌ಪ್ಲೇ, ದಿಲ್ಜೀತ್ ದೋಸಾಂಜ್‌ನ ಸಂಗೀತ ಕಚೇರಿಗಳ ಟಿಕೆಟ್ ಮಾರಾಟದಲ್ಲಿ ‘ಅಕ್ರಮ’ ಪತ್ತೆ – ಇಡಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...