Homeಮುಖಪುಟವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

ವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

- Advertisement -
- Advertisement -

ಮುಂಬೈ ಕರಾವಳಿಯ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ಎನ್‌ಸಿಬಿ ದಾಳಿ ನಡೆಸಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದ ಪ್ರಕರಣದ ವಿವಾದಾತ್ಮಕ ಸ್ವತಂತ್ರ ಸಾಕ್ಷಿಯಾಗಿದ್ದ ಕೆ.ಪಿ ಗೋಸಾವಿಯನ್ನು ವಂಚನೆ ಪ್ರಕರಣದಲ್ಲಿ ಪುಣೆಯಲ್ಲಿ ಬಂಧಿಸಲಾಗಿದೆ.

ಗೋಸಾವಿ ಎನ್‌ಸಿಬಿಯ ಸಾಕ್ಷಿಯಾಗಿದ್ದರೂ ಇಷ್ಟು ದಿನ ನಾಪತ್ತೆಯಾಗಿದ್ದ. 2018ರ ವಂಚನೆ ಪ್ರಕರಣ ಆತನ ಮೇಲಿದ್ದು ಆತನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿತ್ತು. ತನಗೆ ಮಹಾರಾಷ್ಟ್ರದಲ್ಲಿ ಜೀವ ಬೆದರಿಕೆಯಿರುವುದರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ ಪೊಲೀಸರ ಮುಂದೆ ಶರಣಾಗುವುದಾಗಿ ಈತ ಮೂರು ದಿನದ ಹಿಂದೆ ಹೇಳಿಕೆ ನೀಡಿದ್ದ. ಆತನ ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದರು.

ತನ್ನನ್ನು ಖಾಸಗಿ ತನಿಖಾಧಿಕಾರಿ ಎಂದು ಹೇಳಿಕೊಳ್ಳುವ ಕೆ.ಪಿ. ಗೋಸಾವಿ, ಬಂಧಿತ ಆರೋಪಿ ಆರ್ಯನ್ ಖಾನ್ ಅವರೊಂದಿಗೆ ಸೆಲ್ಫಿ ಮತ್ತು ಹಲವಾರು ವಿಡಿಯೊಗಳನ್ನು ತೆಗೆದುಕೊಳ್ಳುವುದು ಮಾಡಿದ್ದರು. ಈತ ಪ್ರಕರಣದ ‘ಸ್ವತಂತ್ರ ಸಾಕ್ಷಿ’ ಎಂದು ಎನ್‌ಸಿಬಿ ಹೇಳಿತ್ತು. ಸದ್ಯ ದಾಳಿ ನಡೆದ ಅಕ್ಟೋಬರ್‌ 2 ರಂದು ಕೇಸ್‌ನ ಸ್ವತಂತ್ರ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಬಂದರಿನಲ್ಲಿರುವ ಎನ್‌ಸಿಬಿ ಕಚೇರಿಯ ಒಳಗೆ ಎನ್‌ಸಿಬಿ ಅಧಿಕಾರಿಗಳೊಟ್ಟಿಗೆ ಕಾಣಿಸಿಕೊಂಡಿರುವ ಪೋಟೋಗಳು ವೈರಲ್ ಆಗಿವೆ. ಅದರೊಂದಿಗೆ ಎನ್‌ಸಿಬಿ ದಾಳಿಗೆ ಮಾಹಿತಿ ಒದಗಿಸಿದ್ದಾರೆ ಎನ್ನಲಾಗಿರುವ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಅಂದು ದಾಳಿಯಲ್ಲಿ ಬಂಧಿಸಲ್ಪಟ್ಟ ಇಬ್ಬರೊಂದಿಗೆ ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಮಾತುಕತೆ ನಡೆಸುತ್ತಿರುವುದು ವೈರಲ್ ಆಗಿದೆ.

PC: NDTV

PC: NDTV (ದಾಳಿ ದಿನ ಮುಂಬೈ ಬಂದರಿನ ಒಳಗಿನ ಫೋಟೋಗಳು, ಕೆಪಿ ಗೋಸಾವಿ ಜೊತೆ ಸಮೀರ್ ವಾಂಖೆಡೆ ಕಾಣಿಸಿಕೊಂಡಿರುವುದು)

ಇತ್ತ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಗೋಸಾವಿ ಕೇವಲ ಮಾಹಿತಿದಾರ ಮತ್ತು ಸಾಕ್ಷಿಯಾಗಿದ್ದಲ್ಲಿ, ಎನ್‌ಸಿಬಿ ದಾಳಿಯಲ್ಲಿ ಭಾಗವಹಿಸಲು ಮತ್ತು ಬಂಧಿತರೊಂದಿಗೆ ಸಂವಹನ ನಡೆಸಲು ಹೇಗೆ  ಅನುಮತಿ ನೀಡಲಾಗಿದೆ ಎಂಬುದು ಹಲವರ ಪ್ರಶ್ನೆಯಾಗಿದೆ. ಹಾಗಾಗಿ ಇಡೀ ಪ್ರಕರಣವೇ ನಕಲಿ ಎಂದು ಮಹಾರಾಷ್ಟ್ರ ಸರ್ಕಾರ ವಾದಿಸುತ್ತಿದೆ.

ಆರ್ಯನ್ ಖಾನ್ ಪ್ರಕರಣದಲ್ಲಿ ಬಂಧಿತನಾಗಿರುವ ಕೆ.ಪಿ ಗೋಸಾವಿಯ ವೈಯಕ್ತಿಕ ಅಂಗರಕ್ಷಕ ಎಂದು ಹೇಳಿಕೊಳ್ಳುವ ಪ್ರಭಾಕರ್ ಸೈಲ್, ಅಕ್ಟೋಬರ್ 3 ರಂದು ಸ್ಯಾಮ್ ಡಿಸೋಜಾ ಮತ್ತು ಕೆ.ಪಿ ಗೋಸಾವಿ ನಡುವೆ 18 ಕೋಟಿ ರೂಪಾಯಿ ಒಪ್ಪಂದದ ಬಗ್ಗೆ ನಡೆದ ಸಂಭಾಷಣೆಯನ್ನು ಕೇಳಿದ್ದೇನೆ ಎಂದು ಹೇಳಿದ್ದಾರೆ. ಇದರಲ್ಲಿ 8 ಕೋಟಿ ರೂಪಾಯಿಗಳನ್ನು ಎನ್‌ಸಿಬಿ ಅಧಿಕಾರಿ  ಸಮೀರ್ ವಾಂಖೆಡೆಗೆ ನೀಡಬೇಕಾಗುತ್ತದೆ ಎಂದು ಹೇಳಿದ್ದರು ಎಂದು ಆರೋಪಿಸಿದ್ದಾರೆ.

ಅಕ್ಟೋಬರ್ 3 ರ ಸಂಜೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮ್ಯಾನೇಜರ್ ಪೂಜಾ ದದ್ಲಾನಿ, ಕೆ.ಪಿ ಗೋಸಾವಿ ಮತ್ತು ಇನ್ನೊಬ್ಬ ವ್ಯಕ್ತಿ ಸ್ಯಾಮ್ ಡಿಸೋಜಾ ಅವರು ಕಾರಿನೊಳಗೆ 15 ನಿಮಿಷಗಳ ಸಭೆ ನಡೆಸಿದರು ಎಂದಿದ್ದಾರೆ. ಈ  ಪ್ರಕರಣದಲ್ಲಿ ಎನ್‌ಸಿಬಿ ಹೆಸರಿಸಿರುವ ಒಂಬತ್ತು ಸಾಕ್ಷಿಗಳಲ್ಲಿ ಪ್ರಭಾಕರ್ ಸೈಲ್ ಕೂಡ ಒಬ್ಬರು. ಆದರೆ ಈ ಆರೋಪವನ್ನು ಎನ್‌ಸಿಬಿ ನಿರಾಕರಿಸಿದೆ.


ಇದನ್ನೂ ಓದಿ: ಮುಂಬೈ ಡ್ರಗ್ಸ್ ಪ್ರಕರಣದ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಎನ್‌ಸಿಬಿ ಅಧಿಕಾರಿ ಮಾತುಕತೆಯ ಪೋಟೋಗಳು ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...