Homeಕರ್ನಾಟಕBJP ಟಿಕೆಟ್ ಕೊಡಿಸುವುದಾಗಿ ವಂಚನೆ, ಕಟೀಲ್ ಶಾಮೀಲು: ಆರೋಪ

BJP ಟಿಕೆಟ್ ಕೊಡಿಸುವುದಾಗಿ ವಂಚನೆ, ಕಟೀಲ್ ಶಾಮೀಲು: ಆರೋಪ

- Advertisement -
- Advertisement -

ಚೈತ್ರಾ ವಂಚನೆ ಪ್ರಕರಣದ ಮಾದರಿಯಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ ಮಾಡಿರುವ ಕುರಿತು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಗರಿಬೊಮ್ಮನಹಳ್ಳಿ ಮೀಸಲು ಕ್ಷೇತ್ರದ ಟಿಕೆಟ್ ಕೋಡಿಸುವುದಾಗಿ ಕೊಟ್ಟೂರು ತಾಲೂಕಿನ ಬೆನಕನಹಳ್ಳಿಯ ರೇವಣಸಿದ್ದಪ್ಪ ಮತ್ತು ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎನ್ ಪಿ ಎಂಬವರು ಒಟ್ಟು 2.03 ಕೋಟಿ ರೂ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ನಿವೃತ್ತ ಎಂಜಿನಿಯರ್ ಸಿ ಶಿವಮೂರ್ತಿ ಅವರು ದೂರು ದಾಖಲಿಸಿದ್ದಾರೆ.

”ಈ ವಂಚನೆ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರೂ ಶಾಮೀಲಾಗಿದ್ದಾರೆ. ಹಣವನ್ನು ವಾಪಾಸ್ ಕೊಡುವಂತೆ ಒತ್ತಾಯಿಸಿದರೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ” ಎಂದು ಲೋಕೋಪಯೋಗಿ (ಪಿಡಬ್ಲ್ಯುಡಿ) ಇಲಾಖೆಯ ನಿವೃತ್ತ ಸಹಾಯಕ ಅಭಿಯಂತರ ಶಿವಮೂರ್ತಿ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ರವಿವಾರ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಮೂರ್ತಿ ಅವರು, ”ಕೊಟ್ಟೂರಿನ ರೇವಣ ಸಿದ್ದಪ್ಪ ನನ್ನ ನಿವೃತ್ತಿ ಕಾರ್ಯಕ್ರಮದಲ್ಲಿ ಪರಿಚಯವಾಗಿ 2023ರ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ನನ್ನನ್ನು ಪದೇ ಪದೇ ಭೇಟಿ ಮಾಡಿ ಬಿಜೆಪಿಯ ಟಿಕೆಟನ್ನು ನಿಮಗೆ ಕೊಡಿಸುವೆ, ನೀವು ಟಿಕೆಟ್ ಪಡೆಯಲು ಯೋಗ್ಯರು.. ಎಂದು ಪುಸಲಾಯಿಸುವ ಮಾತುಗಳನ್ನು ಹೇಳಿ ನನಗೆ ಟಿಕೆಟ್ ಮೇಲೆ ಶ್ರದ್ಧೆ ಬರುವ ರೀತಿಯಲ್ಲಿ ನಡೆದುಕೊಂಡಿದ್ದರು. 2022ರ ಅ.23ರಂದು ರೇವಣಸಿದ್ದಪ್ಪ ನನ್ನನ್ನು ಬೆಂಗಳೂರಿಗೆ ಕರೆತಂದು ಒಂದು ಹೋಟೆಲ್‌ನಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎನ್.ಪಿ. ಎಂಬವರನ್ನು ಪರಿಚಯಿಸಿದ್ದರು” ಎಂದು ವಿವರಿಸಿದರು.

”ಶೇಖರ್ ಎಸ್.ಪಿ. ನನಗೆ ಪರಿಚಯ ಆದ ಮೇಲೆ, ಮಲ್ಲೇಶ್ವರದ ಬಿಜೆಪಿ ಕಚೇರಿ ಜಗನ್ನಾಥ ವನಕ್ಕೆ ಕರೆದುಕೊಂಡು ಹೋಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನನ್ನ ಆತ್ಮೀಯ ಸ್ನೇಹಿತರೆಂದು ಹೇಳಿ ಪರಿಚಸಿದರು. ನಳಿನ್ ಕುಮಾರ್ ಕಟೀಲು ನನ್ನ ಬಳಿ ಮಾತನಾಡಿ ಟಿಕೆಟ್ ವಿಚಾರದ ಎಲ್ಲ ವ್ಯವಹಾರವನ್ನು ಶೇಖರ್ ಎನ್.ಪಿ. ಅವರ ಬಳಿಯೇ ಮಾತನಾಡಿ” ಎಂದು ತಿಳಿಸಿದರು.

”ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಶೇಖರ್ ಎನ್.ಪಿ. ನನ್ನ ಬಳಿ ಹಣ ಕೇಳಿದರು. ಟಿಕೆಟ್ ಸಿಗದೇ ಇದ್ದ ಪಕ್ಷದಲ್ಲಿ ನಿಮ್ಮ ಹಣವನ್ನು ವಾಪಸ್ ನೀಡುತ್ತೇನೆಂದು ತಿಳಿಸಿದರು. ಹೀಗೆ 2022ರ ಅ.9ರಿಂದ ಆರಂಭವಾದ ನಮ್ಮ ಹಣದ ವ್ಯವಹಾರ ಎಪ್ರಿಲ್ 2023ಕ್ಕೆ 2.55 ಕೋಟಿ ರೂ. ಪಡೆದುಕೊಂಡಿದ್ದಾರೆ” ಎಂದು ಅವರು ದೂರಿದರು.

”2022ರ ಅ.15ರಂದು ಚಿತ್ರದುರ್ಗದಲ್ಲಿ ರಸ್ತೆಯ ಬಳಿ ಶೇಖರ್ ಎನ್.ಪಿ. ಕುಂದಾಪುರದ ಅರ್ಜುನ ಎಂಬವನನ್ನು ಕಳುಹಿಸಿ 50 ಲಕ್ಷ ರೂ. ಪಡೆದಿದ್ದಾರೆ. ಆನಂತರ ಆನ್ಲೈನ್ ಪೇಮೆಂಟ್ ಸೇರಿ ಇದೇ ರೀತಿಯಲ್ಲಿ 1 ಕೋಟಿ 65 ಲಕ್ಷ ರೂ. ಶೇಖರ್ ಎನ್.ಪಿ. ಅವರಿಗೆ ಸಂದಾಯವಾಗಿದೆ” ಎಂದು ಶಿವಮೂರ್ತಿ ವಿವರ ನೀಡಿದರು.

”ಇದರ ಜೊತೆಗೆ ಕೊಟ್ಟೂರು ತಾಲೂಕಿನ, ಬೆನಕನಹಳ್ಳಿ ಗ್ರಾಮದ ಬಿಜೆಪಿ ಮುಖಂಡನಾಗಿದ್ದ ರೇವಣಸಿದ್ದು ಬಿನ್ ಸಿದ್ದಲಿಂಗಪ್ಪ ಒಂದು ಹೋಟೆಲ್‌ ಗೆ ಕರೆದುಕೊಂಡು ಹೋಗಿ, ಬಿಜೆಪಿ ಹಿರಿಯ ನಾಯಕರಿಗೆ ಮತ್ತು ಇತರರಿಗೆ ಕೊಡಬೇಕೆಂದು ಹೇಳಿ 50 ಲಕ್ಷ ರೂ. ನಗದನ್ನು ಕುಗ್ಗಿ ತಾಲೂಕಿನ ಚಿಕ್ಕಹೋಗಿಗಹಳ್ಳಿ ಗ್ರಾಮದ ಆರೆಸೆಸ್ಸ್ ಮುಖಂಡರಾದ ನಾಗಣ್ಣ ಅವರು ಪಡೆದಿರುತ್ತಾರೆ” ಎಂದು ಶಿವಮೂರ್ತಿ ಹೇಳಿದರು.

”ಈ ಹಣವನ್ನು ನನ್ನ ಸ್ವಂತ ನಿವೇಶನವನ್ನು ಮಾರಾಟ ಮಾರಿ ನನ್ನ ಜಮೀನಿನಲ್ಲಿ ಬೆಳೆದ ಬೆಳೆಗಳನ್ನು ಮಾಡಿ, ನನ್ನ ಆಪ್ತ ಸ್ನೇಹಿತರಿಂದ ಸಾಲ ಪಡೆದು ಹಾಗೂ ನಿವೃತ್ತಿಯಿಂದ ಬಂದ ಹಣವನ್ನೆಲ್ಲಾ ಸೇರಿಸಿ ಇವರಿಗೆ ಕೊಟ್ಟಿರುತ್ತೇನೆ. ಇದಾದ ನಂತರದ ದಿನಗಳಲ್ಲಿ 2023ರ ಎಪ್ರಿಲ್ ತಿಂಗಳಿನಲ್ಲಿ ಹಗರಿಬೊಮ್ಮನಹಳ್ಳಿ ಮೀಸಲು ಕ್ಷೇತ್ರ(ಎಸ್ಸಿ)ದ ಬಿಜೆಪಿ ಟಿಕೆಟ್ ನನಗೆ ಬರುವುದಿಲ್ಲ. ಬದಲಿಗೆ ಬಿ.ರಾಮು ಎಂಬವರಿಗೆ ಸಿಗುತ್ತದೆ” ಎಂದು ಬೇಸರ ಹೊರಹಾಕಿದರು.

”ಇದರಿಂದ ಆಘಾತವಾದ ನನಗೆ ಏನು ಮಾಡಬೇಕೆಂದು ತಿಳಿಯದೆ ಮೇಲೆ ತಿಳಿಸಿರುವ ಹಣ ಪಡೆದವರಿಗೆ ಕರೆ ಮಾಡಿದಾಗ ಒಂದು ತಿಂಗಳು ಅವರು ನನ್ನ ಕರೆಯನ್ನು ಸ್ವೀಕರಿಸಲಿಲ್ಲ. ಬೇರೆಯವರ ನಂಬರಿನಿಂದ ಕರೆ ಮಾಡಿದಾಗ ಸ್ವೀಕರಿಸಿದ್ದಾರೆ. ಆಗ ನನ್ನ ಬಳಿ ಮಾತನಾಡಿದ ಇವರು ಹಣ ವಾಪಸ್ ನೀಡಲು ಹಲವಾರು ದಿನಾಂಕಗಳು, ಸಬೂಬುಗಳನ್ನು ನೀಡುತ್ತಾ ಬಂದಿದ್ದು, ಈವರೆಗೆ ಹಣ ನೀಡಲು ಸತಾಯಿಸುತ್ತಿದ್ದಾರೆ” ಎಂದು ಅವರು ದೂರಿದರು.

”ನನ್ನ ತಮ್ಮನ ಸ್ನೇಹಿತರು, ಕೆಲ ಸಂಘಟನೆಯವರ ಬಳಿ ಮಾತನಾಡಿದಾಗ ಚೆಕ್ ಕೊಟ್ಟರು. ಅವುಗಳು ಬೌನ್ಸ್ ಆಗಿವೆ. ಹಾಗಾಗಿ ನಾನು ಅನಿವಾರ್ಯವಾಗಿ ಸ್ಥಳಿಯ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದೇನೆ. ಈಗ ಹಣ ಕೊಡುವಂತೆ ಒತ್ತಾಯಿಸಿದರೆ ನನಗೆ ಜೀವ ಬೆದರಿಕೆಯನ್ನು ಒಡ್ಡುತ್ತಿದ್ದಾರೆ. ಹಾಗಾಗಿ ನನ್ನ ಹಣವನ್ನು ನನಗೆ ಕೊಡಿಸಿ, ನ್ಯಾಯ ಒದಗಿಸಬೇಕು” ಎಂದು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಒತ್ತಾಯಿಸಿದರು.

ಹಣ ವಾಪಸ್ ಕೇಳಿದ್ದಕ್ಕೆ ಧಮಕಿ ಆರೋಪ

”ನಾಲ್ವರು ತಂಡದಿಂದ ಹಂತ ಹಂತವಾಗಿ ಕೋಟಿ ಕೋಟಿ ಹಣ ಪಡೆದಿದ್ದಾರೆ ಎನ್ನಲಾಗಿದ್ದು, ಅದರಲ್ಲಿ ನಿವೃತ್ತ ಎಂಜಿನಿಯರ್ ಶಿವಮೂರ್ತಿ ಅವರು 1.90 ಕೋಟಿ ಹಣ ಪ್ರೂಫ್ ಸಮೇತ ನೀಡಿದ್ದಾರೆ. ಇನ್ನೂ ಪಡೆದ ಹಣ ವಾಪಸ್ ಕೇಳಿದ್ದಕ್ಕೆ ಧಮಕಿ ಹಾಕುತ್ತಿದ್ದಾರೆ” ಎಂದು ಆರೋಪ ಅವರು ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...