ದ್ವಿತೀಯ ಪಿಯುಸಿಯ ಪರೀಕ್ಷೆಯ ಫಲಿತಾಂಶಗಳನ್ನು ಇಂದು (ಜೂನ್ 18) ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.
ಫಲಿತಾಂಶವನ್ನು ಮಧ್ಯಾಹ್ನ 12 ಗಂಟೆಯ ಬಳಿಕ ಬಿಡುಗಡೆ ಮಾಡಲಾಗುತ್ತಿದ್ದು, ಪರೀಕ್ಷೆಗಳಿಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಪರಿಶೀಲಿಸಬಹುದು.
ಕರ್ನಾಟಕ 2ನೇ ಪಿಯುಸಿ ಫಲಿತಾಂಶ 2022 ಪರಿಶೀಲಿಸುವುದು ಹೇಗೆ?
2022ರ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪರಿಶೀಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:
- ಅಧಿಕೃತ ವೆಬ್‌ಸೈಟ್ karresults.nic.in ಓಪನ್ ಮಾಡಿ.
- ‘ದ್ವಿತೀಯ ಪಿಯುಸಿ ಫಲಿತಾಂಶಗಳು 2022 ಕರ್ನಾಟಕ’ ಲಿಂಕ್ ಕ್ಲಿಕ್ ಮಾಡಿ.
- ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
- ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
- 2022ರ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ತೆರೆದುಕೊಳ್ಳುತ್ತದೆ.
- ಪ್ರಿಂಟೌಟ್ ತೆಗೆದುಕೊಳ್ಳಿ.
- ಯಾವುದೇ ವ್ಯತ್ಯಾಸವಿದ್ದಲ್ಲಿ, ಸಾಧ್ಯವಾದಷ್ಟು ಬೇಗ ನಿಮ್ಮ ಶಾಲೆಯನ್ನು ಸಂಪರ್ಕಿಸಿ.

ಇದನ್ನೂ ಓದಿ: ಪಿಯುಸಿ ಪಠ್ಯ ಪರಿಷ್ಕರಣೆಯ ‘ಚಕ್ರತೀರ್ಥ ವರದಿ’ ಪಡೆಯಲ್ಲ ಎಂದ ಸಚಿವ ಬಿಸಿ ನಾಗೇಶ್; ಜನಾಕ್ರೋಶಕ್ಕೆ ಮಣಿದ ಸರ್ಕಾರ
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ.
ವಿದ್ಯಾರ್ಥಿಗಳಿಗೆ ಶುಭಾಶಯಗಳು.
2nd PUC exam results will be announced tomorrow.
Best wishes to all students💐.
— B.C Nagesh (@BCNagesh_bjp) June 17, 2022
ರಾಜ್ಯದಲ್ಲಿ ಕಳೆದ ಏಪ್ರಿಲ್ 22 ರಿಂದ ಮೇ 18 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. 2021-22ನೇ ಸಾಲಿನಲ್ಲಿ, ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 6,00,519 ರೆಗ್ಯುಲರ್ ವಿದ್ಯಾರ್ಥಿಗಳಿದ್ದರೆ, 61,808 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಪರೀಕ್ಷೆ ನಡೆದಿತ್ತು.
ಇದನ್ನೂ ಓದಿ: ಅಗ್ನಿಪಥ್ ವಿರುದ್ಧ ಸಿಡಿದೆದ್ದ ಯುವಜನತೆ: ಒಂದು ಸಾವು, 8 ಜನರಿಗೆ ಗಾಯ – ವಯಸ್ಸಿನ ಮಿತಿ ಹೆಚ್ಚಳಕ್ಕೆ ಮುಂದಾದ ಕೇಂದ್ರ


