Homeಕರ್ನಾಟಕಲಂಚಕ್ಕೆ ಆಮಿಷ ಆರೋಪ: ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಅಧಿಕಾರಿಗಳು

ಲಂಚಕ್ಕೆ ಆಮಿಷ ಆರೋಪ: ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಅಧಿಕಾರಿಗಳು

- Advertisement -
- Advertisement -

ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಮಂಡ್ಯ ಜಿಲ್ಲೆಯ ಏಳು ಮಂದಿ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕೆ ಸಚಿವ ಚಲುವರಾಯಸ್ವಾಮಿ ಅವರು ಬೇಡಿಕೆ ಇಟ್ಟಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಪತ್ರದಲ್ಲಿ ಮಂಡ್ಯ, ಮಳ್ಳವಳ್ಳಿ, ಕೆ ಆರ್ ಪೇಟೆ, ನಾಗಮಂಗಲ, ಮದ್ದೂರು, ಶ್ರೀರಂಗಪಟ್ಟಣ ಮತ್ತು ಪಾಂಡವಪುರ ಕೃಷಿ ಸಹಾಯಕ ಅಧಿಕಾರಿಗಳು ಸಹಿ ಹಾಕಿದ್ದಾರೆ ಎನ್ನಲಾಗಿದೆ.
ಲಂಚಕ್ಕೆ ಕಡಿವಾಣ ಹಾಕದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಪತ್ರದಲ್ಲಿ ಉಲ್ಲೇಖಿಸಿದ್ದು,

ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ರಾಜ್ಯಪಾಲರು ಪತ್ರ ಬರೆದಿದ್ದು, ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಈ ಮೊದಲು ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಜಗದೀಶ್‌ ಆತ್ಮಹತ್ಯೆಗೆ ಯತ್ನ ಪ್ರಕರಣದಲ್ಲಿ ಕೂಡ ಸಚಿವ ಚೆಲುವರಾಯಸ್ವಾಮಿ ಅವರ ಹೆಸರು ಕೇಳಿ ಬಂದಿತ್ತು.ಈ ಪ್ರಕರಣ ಮಾಸುವ ಮುನ್ನವೇ ಚಲುವರಾಯಸ್ವಾಮಿ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ.

ತಮ್ಮ ವಿರುದ್ಧದ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಚಲುವರಾಯಸ್ವಾಮಿ, ಕೃಷಿ ಜಂಟಿ ನಿರ್ದೇಶಕರ ಜತೆ ಈಗಷ್ಟೇ ಮಾತನಾಡಿದ್ದೇನೆ. ಇದೊಂದು ಫೇಕ್ ಲೆಟರ್ ಎಂದು ಅವರು ಹೇಳಿದ್ದಾರೆ. ಕೆಲವರು ನಮ್ಮ ವಿರುದ್ಧ ಷಡ್ಯಂತ್ರ ಮಾಡಲು ಏನೇನೋ ಹುಡುಕುತ್ತಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ:ಲೋಕಸಭೆಯಲ್ಲಿ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ 2023 ಅಂಗೀಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read