Homeಮುಖಪುಟಚೆನ್ನೈ: ಬಿಜೆಪಿ ಮುಖಂಡ ಅಮರ್ ಪ್ರಸಾದ್ ರೆಡ್ಡಿ ಬಂಧನ

ಚೆನ್ನೈ: ಬಿಜೆಪಿ ಮುಖಂಡ ಅಮರ್ ಪ್ರಸಾದ್ ರೆಡ್ಡಿ ಬಂಧನ

- Advertisement -
- Advertisement -

ಚೆನ್ನೈನಲ್ಲಿ ಅಕ್ರಮ ಧ್ವಜಸ್ತಂಭ ತೆಗೆಯಲು ತಂದಿದ್ದ ಜೆಸಿಬಿ ಯಂತ್ರಕ್ಕೆ ದಾಳಿ ನಡೆಸಿ ಹಾನಿ ಮಾಡಿದ ಆರೋಪದ ಮೇಲೆ ತಮಿಳುನಾಡು ಬಿಜೆಪಿ ಮುಖಂಡ ಅಮರ್ ಪ್ರಸಾದ್ ರೆಡ್ಡಿ ಅವರನ್ನು ಬಂಧಿಸಲಾಗಿದೆ. ನವೆಂಬರ್ 3ರವರೆಗೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರ ಚೆನ್ನೈ ನಿವಾಸದ ಹೊರಗೆ ಧ್ವಜಸ್ತಂಭವನ್ನು ಹಾಕಲಾಗಿತ್ತು. ತಾಂಬ್ರಮ್ ಪೊಲೀಸರ ಪ್ರಕಾರ, ಅಣ್ಣಾಮಲೈ ಅವರ ಮನೆಯ ಕಾಂಪೌಂಡ್ ಗೋಡೆಯ ಹೊರಗೆ ಧ್ವಜ ಸ್ತಂಭವನ್ನು ಸ್ಥಾಪಿಸುವ ಮೊದಲು ಚೆನ್ನೈ ಕಾರ್ಪೊರೇಷನ್‌ನಿಂದ ಯಾವುದೇ ಅನುಮತಿಯನ್ನು ಪಡೆದಿಲ್ಲ.

ಈ ಧ್ವಜ ಸ್ತಂಭವು ಅಪಾಯಕಾರಿ ಹೈವೋಲ್ಟೇಜ್ ವಿದ್ಯುತ್ ಲೈನ್‌ಗಳಿಗೆ ಸಮೀಪದಲ್ಲಿದೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಧ್ವಜ ಸ್ತಂಭವನ್ನು ತೆಗೆದು ಹಾಕಲು ನಿರ್ಧರಿಸಿದ್ದರು.

ಅಧಿಕಾರಿಗಳು ಧ್ವಜಸ್ತಂಭವನ್ನು ತೆಗೆಯಲು ಬಂದಾಗ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅವರಲ್ಲಿ ಎಷ್ಟು ಮನವಿ ಮಾಡಿದರೂ ಅಧಿಕಾರಿಗಳ ಜೊತೆ ಜಗಳವಾಡುತ್ತಿದ್ದರು. ಈ ವೇಳೆ ಕೆಲವರನ್ನು ಬಂಧಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಮರ್ ಪ್ರಸಾದ್ ರೆಡ್ಡಿಯ ಜೊತೆಗೆ  ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರೆಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

 

ಇದನ್ನು ಓದಿ:  ಗಾಝಾಕ್ಕೆ ಪರಿಹಾರ ಸಾಮಾಗ್ರಿಗಳನ್ನು ಕಳುಹಿಸಿದ ಭಾರತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...