Homeಮುಖಪುಟಮುಸ್ಲಿಮರು, ಕ್ರಿಶ್ಚಿಯನ್ನರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

ಮುಸ್ಲಿಮರು, ಕ್ರಿಶ್ಚಿಯನ್ನರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

- Advertisement -
- Advertisement -

ವಾಟ್ಸಾಪ್ ಗ್ರೂಪ್ ನಲ್ಲಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ಸಂದೇಶ ಕಳುಹಿಸಿದ  ಆರೋಪದ ಮೇಲೆ ಚೆನ್ನೈನಲ್ಲಿ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ಚೆನ್ನೈನ ಪುಲಿಯಾಂತೋಪ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಂಚಾರ ತನಿಖಾ ಇನ್ಸ್‌ಪೆಕ್ಟರ್ ಪಿ ರಾಜೇಂದ್ರನ್, ಕ್ರಿಶ್ಚಿಯನ್ ಮತ್ತು ಮುಸ್ಲಿಮರ ವಿರುದ್ಧ ವಾಟ್ಸಾಪ್ ಗ್ರೂಪ್‌ನಲ್ಲಿ ಆಡಿಯೊ ಸಂದೇಶವನ್ನು ಹಂಚಿಕೊಂಡಿದ್ದಾರೆ.

ಪೊಲೀಸರ ಪ್ರಕಾರ, ವಾಟ್ಸಾಪ್  ಗ್ರೂಪ್ ನಲ್ಲಿ ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಕ್ರಿಸ್ಟೋಫರ್ ಎಂಬವರು ತಮಿಳುನಾಡಿನ ಹಿಂದಿನ ಎಐಎಡಿಎಂಕೆ ಆಡಳಿತ, ಬಿಜೆಪಿ ಮತ್ತು ರಥಯಾತ್ರೆಯನ್ನು ಟೀಕಿಸುವ ಸಾಮಾಜಿಕ ಕಾರ್ಯಕರ್ತ ಎಸ್ ಶಿವದಾಸ್ ಅವರ ವೀಡಿಯೊ ಹಾಡನ್ನು ಹಂಚಿಕೊಂಡಿದ್ದರು. ತಮಿಳುನಾಡಿನಲ್ಲಿ ರಾಮರಾಜ್ಯ (ರಾಮನ ಆಳ್ವಿಕೆ) ನಡೆಯುವುದಿಲ್ಲ ಎಂಬ ಶಿವದಾಸ್ ಅವರ ವೀಡಿಯೊ ಹಾಡನ್ನು ಕೂಡ  ಕ್ರಿಸ್ಟೋಫರ್ ಹಂಚಿಕೊಂಡಿದ್ದರು ಎನ್ನಲಾಗಿದೆ.

ಇದಕ್ಕೆ ಪ್ರತಿಯಾಗಿ ಆಡಿಯೋ ಸಂದೇಶದಲ್ಲಿ, ರಾಜೇಂದ್ರನ್, ಇದು ಭಾರತ. ನಾವು ಮಸೀದಿಯನ್ನು ಕೆಡವಿ ರಾಮಜನ್ಮಭೂಮಿಯಲ್ಲಿ ಮಂದಿರ ಕಟ್ಟಿದ್ದೇವೆ. ಇದು ಭಾರತ ಮತ್ತು ಇದು ಸಾಧ್ಯ. ದೇವಾಲಯಗಳಲ್ಲಿ ಪ್ರಾರ್ಥನೆಗಳನ್ನು ಮಾಡಲಾಗುತ್ತದೆ, ಅಡಿಗಲ್ಲುಗಳನ್ನು ಹಾಕಲಾಗುತ್ತದೆ, ಮತ್ತು ನಾವು ಸಂಸತ್ತಿನಲ್ಲಿ ಸೆಂಗೋಲ್‌ ನ್ನು ಇಡುತ್ತೇವೆ. ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ನಮ್ಮನ್ನು ತಡೆಯಲು ಪ್ರಯತ್ನಿಸಲಿ. ಇಲ್ಲವಾದರೆ ಅವರು ಪಾಕಿಸ್ತಾನ ಅಥವಾ ಸೌದಿ ಅರೇಬಿಯಾಕ್ಕೆ ಹೋಗಿ ಎಂದು ರಾಜೇಂದ್ರನ್  ವಾಟ್ಸಾಪ್ ಗ್ರೂಪ್‌ಗೆ ಕಳುಹಿಸಿದ ಆಡಿಯೋ ಸಂದೇಶದಲ್ಲಿ ಹೇಳಿದ್ದರು.

ಭಾರತದಲ್ಲಿ ಹಿಂದೂಗಳು ಬಹುಸಂಖ್ಯಾತರಾಗಿರುವುದರಿಂದ ರಾಮರಾಜ್ಯ (ಭಗವಾನ್ ರಾಮನ ಆಳ್ವಿಕೆ) ಖಂಡಿತವಾಗಿಯೂ ಸಂಭವಿಸುತ್ತದೆ ಎಂದು ರಾಜೇಂದ್ರನ್ ಹೇಳಿದ್ದಾರೆ. ಇಂತಹ ವಿಡಿಯೋ ಹಾಡುಗಳನ್ನು ಶೇರ್ ಮಾಡಿ ಧರ್ಮದ ಹೆಸರಿನಲ್ಲಿ ಅಶಾಂತಿ ಸೃಷ್ಟಿಸಬೇಡಿ ಎಂದು ಕ್ರಿಸ್ಟೋಫರ್ ಗೆ ಎಚ್ಚರಿಕೆ ನೀಡಿದ್ದಾರೆ.

ಈ ಆಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ರಾಜೇಂದ್ರನ್ ಅವರನ್ನು ಗ್ರೇಟರ್ ಚೆನ್ನೈ ಪೊಲೀಸ್ ಕಮಿಷನರ್ ಸಂದೀಪ್ ರೈ ರಾಥೋಡ್ ಅವರು ಅಮಾನತುಗೊಳಿಸಿದ್ದಾರೆ.ರಾಜೇಂದ್ರನ್ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಲಾಗಿದೆ.

ರಾಜೇಂದ್ರನ್ ಅವರು ಸರ್ಕಾರಿ ನೌಕರನಾಗಿದ್ದು, ಧರ್ಮದ ವಿರುದ್ಧ ಕೆಲವು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಮತ್ತು ಇದು ಸ್ವೀಕಾರಾರ್ಹವಲ್ಲ. ವಿವಾದಾತ್ಮಕ  ಹೇಳಿಕೆಯ ಹಿನ್ನೆಲೆ ಪೊಲೀಸ್ ಇನ್ಸ್ಪೆಕ್ಟರ್ ರಾಜೇಂದ್ರನ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಗ್ರೇಟರ್ ಚೆನ್ನೈ ಪೊಲೀಸ್ ಕಮಿಷನರ್ ಸಂದೀಪ್ ರೈ ರಾಥೋಡ್ ಹೇಳಿದ್ದಾರೆ.

ಇದನ್ನು ಓದಿ: ಪ್ರಧಾನಿ, ಕೇಂದ್ರದ ಯೋಜನೆ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ: 8 ಯುಟ್ಯೂಬ್ ಚಾನೆಲ್‌ ಬ್ಯಾನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

’ಆದಿವಾಸಿಗಳ ಅಭಿವೃದ್ಧಿ’ ಪುಸ್ತಕದಿಂದ ಆಯ್ದ ಅಧ್ಯಾಯ; ಆದಿವಾಸಿಗಳೊಡನೆ ಅನುಸಂಧಾನ ವಿಧಾನ ಯಾವುದಾಗಿರಬೇಕು?

0
ಶ್ರೀಮತಿ ಖೋಂಗಮೆನ್ (1) ಅವರು, ಈಗ್ಗೆ ಮೂರು ದಿನಗಳ ಹಿಂದೆ ಈ ಸಮ್ಮೇಳನದ ಕುರಿತು ನನಗೆ ವಿವರಗಳನ್ನು ನೀಡಿದರು. ಈ ಕಾರ್ಯಕ್ರಮದ ಆಯೋಜನೆ ಮತ್ತು ವಿವರಗಳನ್ನು ನೋಡಿ ನನಗೆ ಸಂತೋಷವಾಯಿತು. ಈ ತರಹದ...