Homeಮುಖಪುಟಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋಷಿ ಎಂದ ಕೋರ್ಟ್

ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋಷಿ ಎಂದ ಕೋರ್ಟ್

- Advertisement -
- Advertisement -

ಚೆನ್ನೈನ ಮಹಿಳಾ ನ್ಯಾಯಾಲಯವು ಅಣ್ಣಾ ವಿಶ್ವವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಜ್ಞಾನಶೇಖರನ್ ತಪ್ಪಿತಸ್ಥ ಎಂದು ಬುಧವಾರ (ಮೇ.28) ಘೋಷಿಸಿದೆ.

ಜ್ಞಾನಶೇಖರನ್ ವಿರುದ್ಧದ ಎಲ್ಲಾ 11 ಆರೋಪಗಳು ವಿಧಿವಿಜ್ಞಾನ ಸಾಕ್ಷ್ಯಗಳು ಮತ್ತು ಇತರ ಪುರಾವೆಗಳ ಮೂಲಕ ಸಾಬೀತಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣವು ಕಳೆದ ವರ್ಷ ಡಿಸೆಂಬರ್ 23ರಂದು ರಾತ್ರಿ 8 ಗಂಟೆ ಸುಮಾರಿಗೆ ನಡೆದ ಘಟನೆಗೆ ಸಂಬಂಧಿಸಿದೆ. ಅಂದು ಕ್ಯಾಂಪಸ್ ಬಳಿ ಬಿರಿಯಾನಿ ಅಂಗಡಿ ನಡೆಸುತ್ತಿದ್ದ ಕೊಟ್ಟೂರು ನಿವಾಸಿ ಜ್ಞಾನಶೇಖರನ್, ವಿಶ್ವವಿದ್ಯಾಲಯದ ಆವರಣಕ್ಕೆ ನುಗ್ಗಿ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯ ಪುರುಷ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಗ್ರೇಟರ್ ಚೆನ್ನೈ ಪೊಲೀಸರು ಜ್ಞಾನಶೇಖರನ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಪೊಲೀಸರ ಪ್ರಕಾರ, ಆರೋಪಿ ತನ್ನ ದುಷ್ಕೃತ್ಯವನ್ನು ವಿಡಿಯೋ ಚಿತ್ರೀಕರಿಸಿ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನನ್ನು ಬ್ಲ್ಯಾಕ್‌ಮೇಲ್ ಮಾಡಿದ್ದ ಎನ್ನಲಾಗಿದೆ.

ಜ್ಞಾನಶೇಖರನ್ ಬಂಧನದ ನಂತರ, ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಕಾರ್ಯಕರ್ತರೊಂದಿಗೆ ಆತ ಇದ್ದ ಫೋಟೋಗಳು ವೈರಲ್ ಆಗಿತ್ತು. ಇದು ಪ್ರಕರಣ ರಾಜಕೀಯ ತಿರುವು ಪಡೆಯಲು ಕಾರಣವಾಗಿತ್ತು. ಡಿಎಂಕೆ ಆರಂಭದಲ್ಲಿ ಆರೋಪಿಯೊಂದಿಗಿನ ಸಂಬಂಧವನ್ನು ನಿರಾಕರಿಸಿದರೂ, ವಿರೋಧ ಪಕ್ಷಗಳು ಆತ ಡಿಎಂಕೆ ಪಕ್ಷದಲ್ಲಿ ಸ್ಥಾನ ಹೊಂದಿದ್ದಾರೆಂದು ಆರೋಪಿಸಿ ಫೋಟೋಗಳನ್ನು ಬಿಡುಗಡೆ ಮಾಡಿತ್ತು.

ಬಿಜೆಪಿ ರಾಜ್ಯ ಘಟಕದ ನಾಯಕ ಕೆ. ಅಣ್ಣಾಮಲೈ ಅವರು ಜ್ಞಾನಶೇಖರನ್ ಡಿಎಂಕೆ ವಿದ್ಯಾರ್ಥಿ ವಿಭಾಗದ ಪದಾಧಿಕಾರಿ ಎಂದು ಆರೋಪಿಸಿದ್ದರು ಮತ್ತು ಡಿಎಂಕೆ ನಾಯಕರೊಂದಿಗೆ ಆರೋಪಿ ಇದ್ದ ಫೋಟೋಗಳನ್ನು ಹಂಚಿಕೊಂಡಿದ್ದರು.

ತಮಿಳುನಾಡು ಕಾನೂನು ಸಚಿವ ಎಸ್. ರೆಗುಪತಿ ಅವರು ಜ್ಞಾನಶೇಖರನ್ ಪಕ್ಷದ ಪದಾಧಿಕಾರಿಯಲ್ಲ ಎಂದು ಹೇಳುವ ಮೂಲಕ ಈ ಆರೋಪಗಳನ್ನು ನಿರಾಕರಿಸಿದ್ದರು. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೂಡ ವಿಧಾನಸಭೆಯಲ್ಲಿ ಆರೋಪಿ ಡಿಎಂಕೆ ಸದಸ್ಯರಲ್ಲದಿದ್ದರೂ, ಅವರು ಡಿಎಂಕೆ ಪರ ಸಹಾನುಭೂತಿ ಹೊಂದಿದ್ದರು ಎಂದು ಸ್ಪಷ್ಟಪಡಿಸಿದ್ದರು.

“ಚೆನ್ನೈ ವಿದ್ಯಾರ್ಥಿನಿಯ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿ ಡಿಎಂಕೆ ಸದಸ್ಯರಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಅವರು ಡಿಎಂಕೆ ಬೆಂಬಲಿಗರು, ನಾವು ಅದನ್ನು ನಿರಾಕರಿಸುವುದಿಲ್ಲ” ಎಂದು ಸ್ಟಾಲಿನ್ ಹೇಳಿದ್ದರು.

ಈ ಹಿಂದೆ ಜ್ಞಾನಶೇಖರನ್ ಅವರು ಪ್ರಕರಣದಿಂದ ತನ್ನನ್ನು ಮುಕ್ತಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ತನ್ನ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಅನುಮಾನದ ಮೇಲೆ ಬಂಧಿಸಲಾಗಿದೆ ಎಂದು ಹೇಳಿದ್ದರು. ತಮಿಳುನಾಡು ಪೊಲೀಸರು ಆರೋಪಿಯ ಅರ್ಜಿಗೆ ಪ್ರತಿ ಅರ್ಜಿ ಸಲ್ಲಿಸಿದ್ದರು. ಎರಡೂ ಕಡೆಯ ವಾದಗಳನ್ನು ನ್ಯಾಯಾಲಯ ಆಲಿಸಿತ್ತು.

ಮದ್ರಾಸ್ ಹೈಕೋರ್ಟ್ ನಿರ್ದೇಶನದಂತೆ, ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿತ್ತು. ನಂತರ ಎಸ್‌ಐಟಿ ಮಹಿಳಾ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿತ್ತು.

ಮಹಿಳಾ ನ್ಯಾಯಾಲಯವು ಜ್ಞಾನಶೇಖರನ್ ವಿರುದ್ಧ ಲೈಂಗಿಕ ಕಿರುಕುಳ, ಬಿಎನ್‌ಎಸ್‌ಎಸ್, ಐಟಿ ಕಾಯ್ದೆ ಮತ್ತು ತಮಿಳುನಾಡು ಮಹಿಳಾ ಕಿರುಕುಳ ತಡೆ ಕಾಯ್ದೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳಡಿ ಆರೋಪಗಳನ್ನು ಹೊರಿಸಿದೆ.

ತನ್ನ ತಾಯಿಯ ಅನಾರೋಗ್ಯದ ಕಾರಣ ನೀಡಿ ಶಿಕ್ಷೆಯಲ್ಲಿ ವಿನಾಯ್ತಿ ನೀಡುವಂತೆ ಜ್ಞಾನಶೇಖರನ್ ಕೋರಿದ್ದಾರೆ. ಜೂನ್ 2ರಂದು ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...