ತಮಿಳುನಾಡಿನ ತಿರುವಲ್ಲೂರು ಬಳಿ ಕಚ್ಚಾ ತೈಲ ಸಾಗಿಸುತ್ತಿದ್ದ ಸರಕು ಸಾಗಣೆ ರೈಲಿನಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡ ನಂತರ ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿ ರೈಲು ಸೇವೆಗಳು ವ್ಯತ್ಯಯಗೊಂಡಿದ್ದು, ಸಾವಿರಾರು ರೈಲು ಪ್ರಯಾಣಿಕರು ಸಮಸ್ಯೆಗೆ ಸಿಲುಕಿದ್ದಾರೆ.
ರೈಲಿಗೆ ಬೆಂಕಿ ಆವರಿಸಿ ಹೊತ್ತಿ ಉರಿದಿದೆ. ಆಕಾಶದೆತ್ತರಕ್ಕೆ ದಟ್ಟವಾದ ಹೊಗೆ ಮತ್ತು ಬೆಂಕಿಯ ಜ್ವಾಲೆ ಕಾಣಿಸಿಕೊಂಡಿದೆ. ಇದರಿಂದ ಸುತ್ತಮುತ್ತಲಿನ ಹಳ್ಳಿಯ ಜನರು ಭಯಭೀತರಾಗಿದ್ದರು. ಮುನ್ನೆಚ್ಚರಿಕ ಕ್ರಮವಾಗಿ ಅವರನ್ನು ಸ್ಥಳಾಂತರಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಎನ್ನೋರ್‌ನಿಂದ ಜೋಲಾರ್‌ಪೆಟ್ಟೈಗೆ ಕಚ್ಚಾ ತೈಲ ಸಾಗಿಸುತ್ತಿದ್ದ 45 ಬೋಗಿಗಳನ್ನು ಹೊಂದಿದ್ದ ಸರಕು ಸಾಗಣೆ ರೈಲು, ಚೆನ್ನೈ ಸೆಂಟ್ರಲ್‌ನಿಂದ 43 ಕಿ.ಮೀ ದೂರದಲ್ಲಿರುವ ತಿರುವಳ್ಳೂರು-ಎಗತ್ತೂರು ವಿಭಾಗದ ಮೂಲಕ ಹಾದುಹೋಗುವಾಗ ಬೆಳಿಗ್ಗೆ 4.45ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ರೈಲಿನ ಎರಡು ವ್ಯಾಗನ್‌ಗಳು ಹಳಿತಪ್ಪಿದ ಕಾರಣ ಬೆಂಕಿ ಆವರಿಸಿರಬಹುದು ಎಂದು ಶಂಕಿಸಲಾಗಿದೆ. ಆದಾಗ್ಯೂ, ಅವಗಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಬೆಳಿಗ್ಗೆ 9 ಗಂಟೆಯ ಹೊತ್ತಿಗೆ ಐದು ಬೋಗಿಗಳನ್ನು ರೇಕ್‌ನಿಂದ ಬೇರ್ಪಡಿಸಲಾಗಿದೆ ಎಂದು ವರದಿ ವಿವರಿಸಿದೆ.
A fuel-laden railway tanker caught fire near Tiruvallur.Thick black smoke and intense flames engulfed the area, disrupting train services.Firefighters are on the scene, & officials are investigating the cause.
#TrainFire #BreakingNews #ChennaiUpdates @NewIndianXpress@xpresstn pic.twitter.com/kPX08p5lKu— Ashwin Prasath (@ashwinacharya05) July 13, 2025
ನಾಲ್ಕು ಬೋಗಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಬೆಂಕಿ ಇತರ ಬೋಗಿಗಳಿಗೂ ವ್ಯಾಪಿಸಿದೆ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಬೆಂಕಿ ಅವಘಢದ ಹಿನ್ನೆಲೆ, ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿನ ಎಲ್ಲಾ ಉಪನಗರ ರೈಲು ಸೇವೆಗಳನ್ನು ಬೆಳಿಗ್ಗೆ 5 ಗಂಟೆಯಿಂದ ಸ್ಥಗಿತಗೊಳಿಸಲಾಗಿದೆ.
ಶನಿವಾರ ಚೆನ್ನೈಗೆ ಹೊರಟಿದ್ದ ಮಂಗಳೂರು ಮೇಲ್, ನೀಲಗಿರಿ ಎಕ್ಸ್‌ಪ್ರೆಸ್, ಮೈಸೂರು ಎಕ್ಸ್‌ಪ್ರೆಸ್, ಕೊಯಮತ್ತೂರು ಇಂಟರ್‌ಸಿಟಿ, ತಿರುವನಂತಪುರಂ ಮೇಲ್ ಮತ್ತು ಜೋಲಾರ್‌ಪೇಟೆ ಎಕ್ಸ್‌ಪ್ರೆಸ್ ಸೇರಿದಂತೆ ಸುಮಾರು ಎಂಟು ಎಕ್ಸ್‌ಪ್ರೆಸ್ ರೈಲುಗಳು ಅರಕ್ಕೋಣಂ ಮತ್ತು ಕಟ್ಪಾಡಿ ನಡುವೆ ಅಲ್ಪಾವಧಿಗೆ ಸ್ಥಗಿತಗೊಂಡವು.
ಅದೇ ರೀತಿ, ಚೆನ್ನೈ ಸೆಂಟ್ರಲ್‌ನಿಂದ ಬೆಳಿಗ್ಗೆ 6 ರಿಂದ 8.30 ರವರೆಗೆ ಹೊರಡಬೇಕಿದ್ದ ಎಂಟು ಎಕ್ಸ್‌ಪ್ರೆಸ್ ರೈಲುಗಳಾದ ಚೆನ್ನೈ-ಮೈಸೂರು ಶತಾಬ್ದಿ, ಚೆನ್ನೈ-ಕೊಯಮತ್ತೂರು ಕೋವೈ ಎಕ್ಸ್‌ಪ್ರೆಸ್, ಚೆನ್ನೈ-ತಿರುಪತಿ ಸಪ್ತಗಿರಿ ಎಕ್ಸ್‌ಪ್ರೆಸ್ ಮತ್ತು ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಗುಡೂರು ಮತ್ತು ರೇಣಿಗುಂಟ ಮೂಲಕ ನಾಲ್ಕು ರೈಲುಗಳ ಹಳಿ ಬದಲಿಸಲಾಗಿದೆ ಎಂದು ವರದಿಯಾಗಿದೆ.
ಅಗ್ನಿಶಾಮಕ ಸೇರಿದಂತೆ ರಕ್ಷಣಾ ತಂಡಗಳು ಅವಘಡ ನಡೆಸ ಸ್ಥಳಕ್ಕೆ ತೆರಳಿದ್ದು, ರೈಲು ಸೇವೆಯನ್ನು ಪುನಸ್ಥಾಪಿಸುವ ಕಾರ್ಯ ನಡೆಯುತ್ತಿದೆ.
ಸ್ಥಳ ಪರಿಶೀಲನೆ ನಡೆಸಿದ ತಿರುವಳ್ಳೂರು ಜಿಲ್ಲಾಧಿಕಾರಿ ಎಂ. ಪ್ರತಾಪ್, “ಹಳಿ ಪಕ್ಕದಲ್ಲಿರುವ ನಿವಾಸಿಗಳನ್ನು ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಕಿ ನಿಯಂತ್ರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಅರಕ್ಕೋಣಂ ಘಟಕದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಉಜ್ವಲ್ ನಿಕಮ್, ಮೀನಾಕ್ಷಿ ಜೈನ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ


