Homeಮುಖಪುಟಚೆನ್ನೈ। ತಿರುವಳ್ಳೂರು ಬಳಿ ಕಚ್ಚಾ ತೈಲ ಸಾಗಣೆ ರೈಲಿನಲ್ಲಿ ಬೆಂಕಿ ಅವಘಡ: ರೈಲು ಸೇವೆಗಳಲ್ಲಿ ವ್ಯತ್ಯಯ

ಚೆನ್ನೈ। ತಿರುವಳ್ಳೂರು ಬಳಿ ಕಚ್ಚಾ ತೈಲ ಸಾಗಣೆ ರೈಲಿನಲ್ಲಿ ಬೆಂಕಿ ಅವಘಡ: ರೈಲು ಸೇವೆಗಳಲ್ಲಿ ವ್ಯತ್ಯಯ

- Advertisement -
- Advertisement -

ತಮಿಳುನಾಡಿನ ತಿರುವಲ್ಲೂರು ಬಳಿ ಕಚ್ಚಾ ತೈಲ ಸಾಗಿಸುತ್ತಿದ್ದ ಸರಕು ಸಾಗಣೆ ರೈಲಿನಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡ ನಂತರ ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿ ರೈಲು ಸೇವೆಗಳು ವ್ಯತ್ಯಯಗೊಂಡಿದ್ದು, ಸಾವಿರಾರು ರೈಲು ಪ್ರಯಾಣಿಕರು ಸಮಸ್ಯೆಗೆ ಸಿಲುಕಿದ್ದಾರೆ.

ರೈಲಿಗೆ ಬೆಂಕಿ ಆವರಿಸಿ ಹೊತ್ತಿ ಉರಿದಿದೆ. ಆಕಾಶದೆತ್ತರಕ್ಕೆ ದಟ್ಟವಾದ ಹೊಗೆ ಮತ್ತು ಬೆಂಕಿಯ ಜ್ವಾಲೆ ಕಾಣಿಸಿಕೊಂಡಿದೆ. ಇದರಿಂದ ಸುತ್ತಮುತ್ತಲಿನ ಹಳ್ಳಿಯ ಜನರು ಭಯಭೀತರಾಗಿದ್ದರು. ಮುನ್ನೆಚ್ಚರಿಕ ಕ್ರಮವಾಗಿ ಅವರನ್ನು ಸ್ಥಳಾಂತರಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಎನ್ನೋರ್‌ನಿಂದ ಜೋಲಾರ್‌ಪೆಟ್ಟೈಗೆ ಕಚ್ಚಾ ತೈಲ ಸಾಗಿಸುತ್ತಿದ್ದ 45 ಬೋಗಿಗಳನ್ನು ಹೊಂದಿದ್ದ ಸರಕು ಸಾಗಣೆ ರೈಲು, ಚೆನ್ನೈ ಸೆಂಟ್ರಲ್‌ನಿಂದ 43 ಕಿ.ಮೀ ದೂರದಲ್ಲಿರುವ ತಿರುವಳ್ಳೂರು-ಎಗತ್ತೂರು ವಿಭಾಗದ ಮೂಲಕ ಹಾದುಹೋಗುವಾಗ ಬೆಳಿಗ್ಗೆ 4.45ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ರೈಲಿನ ಎರಡು ವ್ಯಾಗನ್‌ಗಳು ಹಳಿತಪ್ಪಿದ ಕಾರಣ ಬೆಂಕಿ ಆವರಿಸಿರಬಹುದು ಎಂದು ಶಂಕಿಸಲಾಗಿದೆ. ಆದಾಗ್ಯೂ, ಅವಗಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಬೆಳಿಗ್ಗೆ 9 ಗಂಟೆಯ ಹೊತ್ತಿಗೆ ಐದು ಬೋಗಿಗಳನ್ನು ರೇಕ್‌ನಿಂದ ಬೇರ್ಪಡಿಸಲಾಗಿದೆ ಎಂದು ವರದಿ ವಿವರಿಸಿದೆ.

ನಾಲ್ಕು ಬೋಗಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಬೆಂಕಿ ಇತರ ಬೋಗಿಗಳಿಗೂ ವ್ಯಾಪಿಸಿದೆ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಬೆಂಕಿ ಅವಘಢದ ಹಿನ್ನೆಲೆ, ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿನ ಎಲ್ಲಾ ಉಪನಗರ ರೈಲು ಸೇವೆಗಳನ್ನು ಬೆಳಿಗ್ಗೆ 5 ಗಂಟೆಯಿಂದ ಸ್ಥಗಿತಗೊಳಿಸಲಾಗಿದೆ.

ಶನಿವಾರ ಚೆನ್ನೈಗೆ ಹೊರಟಿದ್ದ ಮಂಗಳೂರು ಮೇಲ್, ನೀಲಗಿರಿ ಎಕ್ಸ್‌ಪ್ರೆಸ್, ಮೈಸೂರು ಎಕ್ಸ್‌ಪ್ರೆಸ್, ಕೊಯಮತ್ತೂರು ಇಂಟರ್‌ಸಿಟಿ, ತಿರುವನಂತಪುರಂ ಮೇಲ್ ಮತ್ತು ಜೋಲಾರ್‌ಪೇಟೆ ಎಕ್ಸ್‌ಪ್ರೆಸ್ ಸೇರಿದಂತೆ ಸುಮಾರು ಎಂಟು ಎಕ್ಸ್‌ಪ್ರೆಸ್ ರೈಲುಗಳು ಅರಕ್ಕೋಣಂ ಮತ್ತು ಕಟ್ಪಾಡಿ ನಡುವೆ ಅಲ್ಪಾವಧಿಗೆ ಸ್ಥಗಿತಗೊಂಡವು.

ಅದೇ ರೀತಿ, ಚೆನ್ನೈ ಸೆಂಟ್ರಲ್‌ನಿಂದ ಬೆಳಿಗ್ಗೆ 6 ರಿಂದ 8.30 ರವರೆಗೆ ಹೊರಡಬೇಕಿದ್ದ ಎಂಟು ಎಕ್ಸ್‌ಪ್ರೆಸ್ ರೈಲುಗಳಾದ ಚೆನ್ನೈ-ಮೈಸೂರು ಶತಾಬ್ದಿ, ಚೆನ್ನೈ-ಕೊಯಮತ್ತೂರು ಕೋವೈ ಎಕ್ಸ್‌ಪ್ರೆಸ್, ಚೆನ್ನೈ-ತಿರುಪತಿ ಸಪ್ತಗಿರಿ ಎಕ್ಸ್‌ಪ್ರೆಸ್ ಮತ್ತು ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಗುಡೂರು ಮತ್ತು ರೇಣಿಗುಂಟ ಮೂಲಕ ನಾಲ್ಕು ರೈಲುಗಳ ಹಳಿ ಬದಲಿಸಲಾಗಿದೆ ಎಂದು ವರದಿಯಾಗಿದೆ.

ಅಗ್ನಿಶಾಮಕ ಸೇರಿದಂತೆ ರಕ್ಷಣಾ ತಂಡಗಳು ಅವಘಡ ನಡೆಸ ಸ್ಥಳಕ್ಕೆ ತೆರಳಿದ್ದು, ರೈಲು ಸೇವೆಯನ್ನು ಪುನಸ್ಥಾಪಿಸುವ ಕಾರ್ಯ ನಡೆಯುತ್ತಿದೆ.

ಸ್ಥಳ ಪರಿಶೀಲನೆ ನಡೆಸಿದ ತಿರುವಳ್ಳೂರು ಜಿಲ್ಲಾಧಿಕಾರಿ ಎಂ. ಪ್ರತಾಪ್, “ಹಳಿ ಪಕ್ಕದಲ್ಲಿರುವ ನಿವಾಸಿಗಳನ್ನು ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಕಿ ನಿಯಂತ್ರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಅರಕ್ಕೋಣಂ ಘಟಕದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಉಜ್ವಲ್ ನಿಕಮ್, ಮೀನಾಕ್ಷಿ ಜೈನ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...