Homeಮುಖಪುಟಪೋಕ್ಸೋ ಪ್ರಕರಣದ ಆರೋಪಿಗೆ ರಕ್ಷಣೆ : ಮಹಿಳಾ ಇನ್‌ಸ್ಪೆಕ್ಟರ್, ಎಡಿಎಂಕೆ ಕಾರ್ಯಕರ್ತನ ಬಂಧನ

ಪೋಕ್ಸೋ ಪ್ರಕರಣದ ಆರೋಪಿಗೆ ರಕ್ಷಣೆ : ಮಹಿಳಾ ಇನ್‌ಸ್ಪೆಕ್ಟರ್, ಎಡಿಎಂಕೆ ಕಾರ್ಯಕರ್ತನ ಬಂಧನ

- Advertisement -
- Advertisement -

ಪೋಕ್ಸೋ ಪ್ರಕರಣದ ಆರೋಪಿಯನ್ನು ಬಂಧನದಿಂದ ರಕ್ಷಿಸಿ ಕಾನೂನುಬಾಹಿರ ಕೃತ್ಯವೆಸಗಿದ ಪ್ರಕರಣದಲ್ಲಿ ಚೆನ್ನೈನ ಅಣ್ಣಾ ನಗರ ಮಹಿಳಾ ಠಾಣೆಯ ಇನ್‌ಸ್ಪೆಕ್ಟರ್ ಮತ್ತು ಎಐಎಡಿಎಂಕೆ ಪಕ್ಷದ ಕಾರ್ಯಕರ್ತನನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದೆ.

ಅಣ್ಣಾ ನಗರ ಮಹಿಳಾ (ಎಲ್ಲಾ) ಠಾಣೆಯ ಇನ್‌ಸ್ಪೆಕ್ಟರ್ ರಾಜಿ ಮತ್ತು ಎಐಎಡಿಎಂಕೆ ಪಕ್ಷದ ಕಾರ್ಯಕರ್ತ ಸುಧಾಕರ್ ಬಂಧನಕ್ಕೊಳಗಾದ ಆರೋಪಿಗಳು ಎಂದು ದಿ ನ್ಯೂಸ್‌ ಮಿನಿಟ್ ವರದಿ ಹೇಳಿದೆ.

ಇನ್‌ಸ್ಪೆಕ್ಟರ್‌ ರಾಜಿ ವಿರುದ್ದ ಸಂತ್ರಸ್ತೆಗೆ ಬೆದರಿಕೆ ಹಾಕಿ ಹೇಳಿಕೆ ಬದಲಿಸುವ ಮೂಲಕ ಪ್ರಕರಣದ ದಿಕ್ಕು ತಪ್ಪಿಸಿದ ಅಥವಾ ಕಳಪೆ ತನಿಖೆ ನಡೆಸಿದ ಆರೋಪವಿದೆ. ಎಐಎಡಿಎಂ ಕಾರ್ಯಕರ್ತ ಸುಧಾಕರ್ ವಿರುದ್ದ ಆರೋಪಿಗೆ ರಕ್ಷಣೆ ಒದಗಿಸಿರುವ ಆರೋಪವಿದೆ.

ಪ್ರಕರಣದ ಹಿನ್ನೆಲೆ : ಆರೋಗ್ಯ ಹದೆಗೆಟ್ಟ ಕಾರಣ ಆಗಸ್ಟ್ 29, 2024ರಂದು 10 ವರ್ಷದ ಬಾಲಕಿಯನ್ನು ಆಕೆಯ ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದರು. ಪರೀಕ್ಷಿಸಿದ ವೈದ್ಯರು ಆಕೆಯ ಮೇಲೆ ಅತ್ಯಾಚಾರ ನಡೆದಿರುವುದಾಗಿ ಹೇಳಿದ್ದರು. ಬಾಲಕಿಯನ್ನು ವಿಚಾರಿಸಿದಾಗ, ಆಕೆ ತನ್ನ ಪಕ್ಷದ ಮನೆಯ ನೀರು ವಿತರಕ 30 ವರ್ಷದ ಸತೀಶ್ ಎಂಬಾತ ಕೃತ್ಯವೆಸಗಿರುವುದಾಗಿ ಹೇಳಿದ್ದಳು.

ತಮ್ಮ ಮಗಳ ಮೇಲೆ ದೌರ್ಜನ್ಯ ನಡೆದಿರುವ ಕುರಿತು ದೂರು ನೀಡಲು ಬಾಲಕಿಯ ಪೋಷಕರು ಆಗಸ್ಟ್ 30, 2024ರಂದು ಅಣ್ಣಾ ನಗರ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಇನ್‌ಸ್ಪೆಕ್ಟರ್ ರಾಜಿ ಅವರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಳಿಕ ಪೋಷಕರಿಂದ ದೂರು ಪಡೆದುಕೊಂಡ ಪೊಲೀಸರು, ಅಂದೇ ಎಫ್‌ಐಆರ್ ದಾಖಲಿಸಿದ್ದರು. ಬಾಲಕಿ ಹೆಸರಿಸಿದ ಆರೋಪಿ ಸತೀಶ್ ವಿರುದ್ದ ಸೆಕ್ಷನ್ 5(ಐ),5(ಎಂ), ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆ- 2012ರ ಸೆಕ್ಷನ್ 6ರ ಅಡಿಯಲ್ಲಿ ಆರೋಪ ಹೊರಿಸಿದ್ದರು. ರಾತ್ರಿ 10 ಗಂಟೆಯ ನಂತರ ಬಾಲಕಿ ದಾಖಲಾಗಿದ್ದ ಆಸ್ಪತ್ರೆಗೆ ತೆರಳಿ ಬಾಲಕಿಯಿಂದ ಹೇಳಿಕೆ ಪಡೆದಿದ್ದರು.

“ಬಾಲಕಿಯಿಂದ ಹೇಳಿಕೆ ಪಡೆಯವಾಗ, ಆರೋಪಿ ಸತೀಶ್ ಹೆಸರು ಹೇಳದಂತೆ ಪೊಲೀಸರು ಆಕೆಯನ್ನು ಹೆದರಿಸಿದ್ದಾರೆ. ಸತೀಶ್ ಹೆಸರು ಹೇಳಿದರೆ ನಿನ್ನ ತಂದೆ-ತಾಯಿ ಜೈಲಿಗೆ ಹೋಗುತ್ತಾರೆ. ನಂತರ ನಿನ್ನ ಸಹೋದರರು ಕೇರ್ ಹೋಮ್‌ನಲ್ಲಿ ಉಳಿಯಬೇಕಾಗುತ್ತದೆ ಎಂದು ಭಯ ಹುಟ್ಟಿಸಿದ್ದಾರೆ. ಇದರಿಂದ ಹೆದರಿದ ಬಾಲಕಿ ಆರಂಭದಲ್ಲಿ ಹೇಳಿದ್ದ ಸತೀಶ್ ಬದಲು, ಮತ್ತೊಬ್ಬ ಅಪ್ರಾಪ್ತನನ್ನು ಆರೋಪಿ ಎಂದು ಹೆಸರಿಸಿದ್ದಾಳೆ” ಎಂದು ಆಕೆಯ ತಾಯಿ ಆರೋಪಿಸಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಈ ನಡುವೆ ಸಂತ್ರಸ್ತ ಬಾಲಕಿ ಪೊಲೀಸರ ಮುಂದೆ ಹೇಳಿಕೆ ನೀಡಿದ ಆಡಿಯೋ ಮತ್ತು ಪ್ರಕರಣದ ಎಫ್‌ಐಆರ್ ಮಾಹಿತಿ ಸೆಪ್ಟೆಂಬರ್ 2024ರಂದು ಪೊಲೀಸರು ಸೋರಿಕೆ ಮಾಡಿದ್ದರು.

ಮದ್ರಾಸ್ ಹೈಕೋರ್ಟ್ ಈ ಸಂಬಂಧ ಸೆಪ್ಟೆಂಬರ್‌ನಲ್ಲಿ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು. ಅಕ್ಟೋಬರ್ 1ರಂದು ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಿತ್ತು. ಆದರೆ, ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸಿತ್ತು.

ಉದ್ಯಮಿ ಬಾಬಿ ಚೆಮ್ಮನ್ನೂರ್ ವಿರುದ್ಧ ದೂರು ದಾಖಲಿಸಿದ ಮಲಯಾಳಂ ನಟಿ ಹನಿ ರೋಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ’ ಮೀಸಲಾತಿ ಇಲ್ಲ : ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ತನ್ನ ಮತಾಂತರ ಪೂರ್ವದ ಜಾತಿ ಸ್ಥಿತಿಯ ಆಧಾರದ ಮೇಲೆ ಹಿಂದುಳಿದ ವರ್ಗದ (ಬಿಸಿ) ಮೀಸಲಾತಿಗೆ ಅರ್ಹನಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್...

‘ಎಸ್‌ಐಆರ್’ ವಿರುದ್ಧ ಇಂಡಿಯಾ ನಾಯಕರ ಅರ್ಜಿ: ಸುಪ್ರೀಂ ಕೋರ್ಟ್‌ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್

ಭಾರತೀಯ ಚುನಾವಣಾ ಆಯೋಗ ದೇಶಾದ್ಯಂತ ಜಾರಿಗೆ ತಂದಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯ ಕಾನೂನಾತ್ಮಕತೆಯನ್ನು ಪ್ರಶ್ನಿಸಿ ವಿಪಕ್ಷ 'ಇಂಡಿಯಾ' ಒಕ್ಕೂಟ ಸಲ್ಲಿಸಿರುವ ಪ್ರಮುಖ...

ಸಿಇಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್: ಅಕ್ಟೋಬರ್ 28ರ ಗಡುವು

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ...

2018ರ ‘ಬಿಜೆಪಿ ಐಟಿ ಸೆಲ್’ ವೀಡಿಯೊ ವಿವಾದ: ಯೂಟ್ಯೂಬರ್ ಧ್ರುವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್!

ಡಿಜಿಟಲ್ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದ 2018ರ ಕ್ರಿಮಿನಲ್ ಮಾನಹಾನಿ ದೂರಿಗೆ (Criminal Defamation Case) ಸಂಬಂಧಿಸಿದಂತೆ, ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಹೊಸದಾಗಿ...