Homeಮುಖಪುಟಚೆಕ್‌ ಬೌನ್ಸ್ ಕೇಸ್: ಖ್ಯಾತ ನಟ ಶರತ್‌ಕುಮಾರ್ ಮತ್ತು ನಟಿ ರಾಧಿಕಾ ದಂಪತಿಗೆ ಒಂದು ವರ್ಷ...

ಚೆಕ್‌ ಬೌನ್ಸ್ ಕೇಸ್: ಖ್ಯಾತ ನಟ ಶರತ್‌ಕುಮಾರ್ ಮತ್ತು ನಟಿ ರಾಧಿಕಾ ದಂಪತಿಗೆ ಒಂದು ವರ್ಷ ಜೈಲು

- Advertisement -
- Advertisement -

2018 ರ ಚೆಕ್ ಬೌನ್ಸ್ ಪ್ರಕರಣದಲ್ಲಿ ತಮಿಳು ನಟ, ಸಂಸದ ಶರತ್‌ಕುಮಾರ್ ಮತ್ತು ಅವರ ಪತ್ನಿ ನಟಿ ರಾಧಿಕಾ ಶರತ್‌ಕುಮಾರ್‌ಗೆ ಚೆನ್ನೈನ ಶಾಸಕ ಮತ್ತು ಸಂಸದರಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯ ಬುಧವಾರ ವಿಚಾರಣೆ ನಡೆಸಿ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿದೆ.

2018 ರ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಕೋಟಿ ರೂಪಾಯಿಗಳ ದಂಡವನ್ನೂ ನ್ಯಾಯಾಲಯ ವಿಧಿಸಿದೆ. ಇವರ ಜೊತೆಗೆ ಮತ್ತೊಬ್ಬ ವ್ಯಕ್ತಿಗೂ ಶಿಕ್ಷೆ ನೀಡಲಾಗಿದೆ.

ಕಲಾವಿದರು, ನಿರ್ಮಾಪಕರಾಗಿರುವ ಈ ದಂಪತಿ 2015ರಲ್ಲಿ ‘ಇದು ಎನ್ನ ಮಾಯಾಂ’ ಎಂಬ ಸಿನಿಮಾವನ್ನು ಲಿಸ್ಟಿನ್ ಸ್ಟೀಫನ್ ಜೊತೆಗೆ ಪಾಲುದಾರರಾಗಿ ನಿರ್ಮಿಸಿದ್ದರು. ಮುಖ್ಯ ಪಾತ್ರದಲ್ಲಿ ನಟಿ ಕೀರ್ತಿ ಸುರೇಶ್ ಮತ್ತು ನಟ ವಿಕ್ರಮ್ ಪ್ರಭು ನಟಿಸಿದ್ದರು. ಇದಕ್ಕಾಗಿ ರೇಡಿಯನ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನಲ್ಲಿ 1.50 ಕೋಟಿ ರೂಪಾಯಿಗಳನ್ನು ಸಾಲ ಪಡೆದಿದ್ದರು.

ಇದನ್ನೂ ಓದಿ: ‘ಬಿರಿಯಾನಿ’ ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

ಮತ್ತೆ ಶರತ್ ಕುಮಾರ್ ರೇಡಿಯನ್ಸ್ ಮೀಡಿಯಾದಿಂದ‌ 50 ಲಕ್ಷ ರೂ.ಗಳ ಕೈ ಸಾಲವನ್ನು ಪಡೆದಿದ್ದರು. ಇದನ್ನು ಹಿಂತಿರುಗಿಸಲು ತಲಾ 10 ಲಕ್ಷ ರೂ.ಗೆ ಐದು ಚೆಕ್ ನೀಡಿದ್ದರು. ಆದರೆ, ಎಲ್ಲಾ ಚೆಕ್ ಬೌನ್ಸ್ ಆಗಿದ್ದವು. ಈ ಸಂಬಂಧ 2018 ರಲ್ಲೇ ರೇಡಿಯನ್ಸ್ ಗ್ರೂಪ್ ನ್ಯಾಯಾಲಯದ ಮೊರೆ ಹೋಗಿತ್ತು. ಇದೀಗ ವಿಚಾರಣೆ ನಡೆಸಿದ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಿದೆ.

ಇದಕ್ಕೂ ಮೊದಲು ಸೈದಾಪೇಟೆ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ಪ್ರಶ್ನಿಸಿ ಈ ತಾರಾ ದಂಪತಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಆದರೆ, 2019 ರ ಮೇ ತಿಂಗಳಲ್ಲಿ, ಶರತ್‌ಕುಮಾರ್, ರಾಧಿಕಾ ಮತ್ತು ಇತರ ಇಬ್ಬರು ವಿರುದ್ಧ ಬಾಕಿ ಇರುವ ಎರಡು ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ನ್ಯಾಯಮೂರ್ತಿ ಜಿ.ಕೆ. ಇಲಾಂತಿರಾಯನ್ ನಿರಾಕರಿಸಿದರು.

ಆರು ತಿಂಗಳೊಳಗೆ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ನ್ಯಾಯಾಧೀಶರು ಸೈದಾಪೇಟೆಯ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದರು. ಈ ಮಧ್ಯೆ, ಈ ಪ್ರಕರಣವನ್ನು ಚೆನ್ನೈ ಕಲೆಕ್ಟರೇಟ್ ಸಂಕೀರ್ಣದಲ್ಲಿನ  ಶಾಸಕ ಮತ್ತು ಸಂಸದರಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು.


ಇದನ್ನೂ ಓದಿ: ಕಮಲ್ ಹಾಸನ್ ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ: ನಟ, ರಾಜಕಾರಣಿ ಶರತ್‌ ಕುಮಾರ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...