Homeಕರ್ನಾಟಕಚೆಕ್‌ಬೌನ್ಸ್‌ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರ ಸೇರಿ ಮೂವರಿಗೆ ದಂಡ ವಿಧಿಸಿದ ಕೋರ್ಟ್

ಚೆಕ್‌ಬೌನ್ಸ್‌ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರ ಸೇರಿ ಮೂವರಿಗೆ ದಂಡ ವಿಧಿಸಿದ ಕೋರ್ಟ್

- Advertisement -
- Advertisement -

ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ ಮೂವರಿಗೆ ನ್ಯಾಯಾಲಯ 1.25 ಕೋಟಿ ರೂಪಾಯಿ ದಂಡ ವಿಧಿಸಿದೆ. ತಪ್ಪಿದ್ದಲ್ಲಿ ಒಂದು ವರ್ಷ ಸಾಮಾನ್ಯ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಿದೆ.

ವಿಎಸ್‌ಎಲ್‌ ಸ್ಟೀಲ್ಸ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಘೋಡ್ಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ತೀರ್ಪನ್ನು 42ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಕೆ.ಎನ್‌ ಶಿವಕುಮಾರ್‌ ಅವರು ಬುಧವಾರ (ಏ.9) ಪ್ರಕಟಿಸಿದ್ದಾರೆ.

ಎನ್‌ಐ ಕಾಯ್ದೆ ಸೆಕ್ಷನ್‌ 138ರ ಅಡಿ ಮೆಸರ್ಸ್‌ ಬಿ ಸಿ ಇನ್‌ಫ್ರಾಸ್ಟ್ರಕ್ಚರ್‌ ಅಂಡ್‌ ರಿಸೋರ್ಸ್‌ ಕಂಪೆನಿ ಮತ್ತು ಅದರ ಪಾಲುದಾರರಾದ ಅನಿಲ್‌ ರಾಜಶೇಖರ್‌, ಚಂಡೂರು ಭಾಸ್ಕರ್‌ ಮತ್ತು ಬಿ. ನಾಗೇಂದ್ರ ಅವರನ್ನು ದೋಷಿಗಳು ಎಂದು ಘೋಷಿಸಲಾಗಿದ್ದು, 1.25 ಕೋಟಿ ರೂಪಾಯಿ ದಂಡ ಪಾವತಿಸಲು ಆದೇಶಿಸಲಾಗಿದೆ. ಹಣ ಪಾವತಿಸಲು ದೋಷಿಗಳು ವಿಫಲರಾದರೆ ಒಂದು ವರ್ಷ ಸಾಮಾನ್ಯ ಶಿಕ್ಷೆ ಅನುಭವಿಸಬೇಕು. ದಂಡದ ಮೊತ್ತದ ಪೈಕಿ 1,24,90,000 ರೂಪಾಯಿ ದೂರುದಾರರಿಗೆ ಪರಿಹಾರದ ರೂಪದಲ್ಲಿ, ಬಾಕಿ 10 ಸಾವಿರ ರೂಪಾಯಿ ರಾಜ್ಯ ಸರ್ಕಾರಕ್ಕೆ ಪಾವತಿಸಬೇಕು ಎಂದು ಆದೇಶಿಸಿಲಾಗಿದೆ.

2013ರಲ್ಲಿ ವಿಎಸ್‌ಎಲ್‌ ಸ್ಟೀಲ್ಸ್‌ ಮತ್ತು ಬಿ ಸಿ ಇನ್‌ಫ್ರಾಸ್ಟ್ರಕ್ಚರ್‌ ಅಂಡ್‌ ರಿಸೋರ್ಸ್‌ ಕಂಪೆನಿ ನಡುವೆ ಹಣಕಾಸಿನ ವಿವಾದ ಸೃಷ್ಟಿಯಾಗಿದ್ದು, ಸಂಧಾನದ ಭಾಗವಾಗಿ ವಿಎಸ್‌ಎಲ್‌ ಸ್ಟೀಲ್ಸ್‌ಗೆ ಬಿ ಸಿ ಇನ್‌ಫ್ರಾಸ್ಟ್ರಕ್ಚರ್‌ 2.53 ಕೋಟಿ ರೂಪಾಯಿ ಪಾವತಿಸಬೇಕಿತ್ತು. ಇದರ ಭಾಗವಾಗಿ ಬಿ ಸಿ ಇನ್‌ಫ್ರಾಸ್ಟ್ರಕ್ಚರ್‌ 1 ಕೋಟಿ ಮೌಲ್ಯದ ಚೆಕ್‌ ನೀಡಿತ್ತು. ಅದು 2022ರಲ್ಲಿ ಬೌನ್ಸ್‌ ಆಗಿತ್ತು. ಈ ಹಿನ್ನೆಲೆಯಲ್ಲಿ ವಿಎಸ್‌ಎಲ್‌ ಸ್ಟೀಲ್ಸ್‌ ಚೆಕ್‌ ಬೌನ್ಸ್‌ ದಾವೆ ಹೂಡಿತ್ತು.

ಸೌಜನ್ಯ : barandbench.com

ರನ್ಯಾ ರಾವ್, ತರುಣ್ ರಾಜು ಭಾರತಕ್ಕೆ 31 ಕೆಜಿಗೂ ಅಧಿಕ ಚಿನ್ನ ಕಳ್ಳಸಾಗಣೆ ಮಾಡಿದ್ದಾರೆ: ಕೋರ್ಟ್‌ಗೆ ಡಿಆರ್‌ಐ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...