Homeಕರ್ನಾಟಕಚೆಕ್ ಬೌನ್ಸ್ ಪ್ರಕರಣದಲ್ಲಿ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ದೋಷಿ; ಶಿಕ್ಷೆ ಪ್ರಕಟ

ಚೆಕ್ ಬೌನ್ಸ್ ಪ್ರಕರಣದಲ್ಲಿ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ದೋಷಿ; ಶಿಕ್ಷೆ ಪ್ರಕಟ

- Advertisement -
- Advertisement -

ಮಾಹಿತಿ ಹಕ್ಕು (ಆರ್‌ಟಿಐ) ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೈಸೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ ಎಂದು ಡೆಕ್ಕನ್ ಹೆರಾಲ್ಡ್‌ ಶುಕ್ರವಾರ ವರದಿ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಆರೋಪಿಯಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ ದೂರುದಾರರಾಗಿ ಕೃಷ್ಣ ಸುದ್ದಿಯಲ್ಲಿದ್ದಾರೆ.

ಚೆಕ್‌ನ ಮೊತ್ತವನ್ನು ತಕ್ಷಣ ಮರುಪಾವತಿಸಲು ವಿಫಲವಾದರೆ ಕೃಷ್ಣ ಅವರು ಆರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಸ್ನೇಹಮಯಿ ಕೃಷ್ಣ ಅವರು 2015 ರಲ್ಲಿ ಮೈಸೂರು ನಗರದ ಹೊರವಲಯದಲ್ಲಿರುವ ಲಲಿತಾದ್ರಿಪುರದ ಕುಮಾರ್ ಎಂಬುವವರಿಂದ ಸಾಲ ಪಡೆದಿದ್ದರು. ಈ ವೇಳೆ ಅವರು ಪ್ರತಿಯಾಗಿ, ಕೃಷ್ಣ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕಿನಿಂದ ಚೆಕ್ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದರೆ ಈ ಚೆಕ್‌ ಅನ್ನು ಪ್ರದೀಪ್‌ ಕುಮಾರ್ ಬ್ಯಾಂಕಿಗೆ ಠೇವಣಿ ಇಟ್ಟಾಗ, ಅದು ಬೌನ್ಸ್ ಆಗಿತ್ತು. ಈ ವೇಳೆ ಅವರು ಕೃಷ್ಣ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಗುರುವಾರ ಪ್ರಥಮ ದರ್ಜೆಯ ಮೂರನೇ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ನ್ಯಾಯಾಲಯವು ಕೃಷ್ಣ ಅವರನ್ನು ಚೆಕ್ ವಂಚನೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಘೋಷಿಸಿದೆ.

ಅದಾಗ್ಯೂ, ಕೃಷ್ಣ ಅವರು ತೀರ್ಪಿನ ವಿರುದ್ಧ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂಓದಿ:  ಉಮರ್ ಖಾಲಿದ್ ಮತ್ತು ಇತರರ ಬಿಡುಗಡೆಗೆ 150ಕ್ಕೂ ಹೆಚ್ಚು ಪ್ರಖ್ಯಾತ ಬರಹಗಾರರು, ಚಲನಚಿತ್ರ ನಿರ್ಮಾಪಕರಿಂದ ಹೇಳಿಕೆ ಬಿಡುಗಡೆ

ಉಮರ್ ಖಾಲಿದ್ ಮತ್ತು ಇತರರ ಬಿಡುಗಡೆಗೆ 150ಕ್ಕೂ ಹೆಚ್ಚು ಪ್ರಖ್ಯಾತ ಬರಹಗಾರರು, ಚಲನಚಿತ್ರ ನಿರ್ಮಾಪಕರಿಂದ ಹೇಳಿಕೆ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....