Homeಮುಖಪುಟಛತ್ತೀಸ್‌ಗಢ: ಎಂಟು ಜನ ಶಸ್ತ್ರಧಾರಿಗಳ ವಿರುದ್ಧ ಹೋರಾಡಿ ತಂದೆಯನ್ನು ರಕ್ಷಿಸಿದ 17 ವರ್ಷದ ಬುಡಕಟ್ಟು ಬಾಲಕಿ

ಛತ್ತೀಸ್‌ಗಢ: ಎಂಟು ಜನ ಶಸ್ತ್ರಧಾರಿಗಳ ವಿರುದ್ಧ ಹೋರಾಡಿ ತಂದೆಯನ್ನು ರಕ್ಷಿಸಿದ 17 ವರ್ಷದ ಬುಡಕಟ್ಟು ಬಾಲಕಿ

- Advertisement -
- Advertisement -

ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ನಾರಾಯಣಪುರದ ಹಳ್ಳಿಯೊಂದರಲ್ಲಿ 17 ವರ್ಷದ ಬುಡಕಟ್ಟು ಜನಾಂಗದ ಹುಡುಗಿಯೊಬ್ಬಳು ತನ್ನ ಶೌರ್ಯ ಪ್ರದರ್ಶಿಸಿದ್ದು, ಎಂಟು ಜನ ಶಸ್ತ್ರಸಜ್ಜಿತ ಪುರುಷರ ಗುಂಪಿನೊಂದಿಗೆ ಹೋರಾಡಿ ತನ್ನ ತಂದೆಯನ್ನು ಪ್ರಾಣಪಾಯದಿಂದ ರಕ್ಷಿಸಿದ್ದಾಳೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಬಾಲಕಿಯ ತಂದೆ ಸೋಮಧರ್ ಕೊರ್ರಂ ಎಂಬಾತ ಕೊಲೆಯ ಯತ್ನದಿಂದ ಎದೆಯ ಮೇಲೆ ಗಾಯದಿಂದ ಪಾರಾಗಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಈ ಗ್ಯಾಂಗ್ ಸಂತ್ರಸ್ತನ ಹುಡುಕಾಟ ನಡೆಸಿತ್ತು, ಸೋಮವಾರ ಎಂಟು ಮಂದಿಯ ತಂಡ ಕೊರ್ರಂ ಮನೆಗೆ ನುಗ್ಗಿ ಕೊಡಲಿಯಿಂದ ಹಲ್ಲೆ ನಡೆಸಿದೆ. ಆತನಿಗೆ ಊಟ ಬಡಿಸಲು ಮುಂದಾದ ಆತನ ಮಗಳು ತನ್ನ ತಂದೆಯನ್ನು ಸುತ್ತುವರೆದಿರುವ ಗ್ಯಾಂಗ್ ನೋಡಿ ಬೆಚ್ಚಿಬಿದ್ದಳು.

“ಅವರಲ್ಲಿ ಎಂಟು ಮಂದಿ ಇದ್ದರು, ಬಾಗಿಲನ್ನು ಬಡಿದರು ಮತ್ತು ನನ್ನ ತಂದೆಯನ್ನು ನೋಡಲು ಒತ್ತಾಯಿಸಿದರು. ನಾನು ಕಿಟಕಿಯಿಂದ ಹೊರಗೆ ನೋಡಿದೆ ಮತ್ತು ಅವರು ಮುಸುಕು ಹಾಕಿಕೊಂಡು ಕೊಡಲಿಗಳನ್ನು ಹೊತ್ತೊಯ್ಯುತ್ತಿದ್ದರು. ಅವರಲ್ಲಿ ಇಬ್ಬರು ಬಂದೂಕುಗಳನ್ನು ಹೊಂದಿದ್ದರು” ಎಂದು ಹುಡುಗಿ ತಿಳಿಸಿದ್ದಾಳೆ.

ಅವಳು ಕೊಡಲಿ ಹಿಡಿದ ದಾಳಿಕೋರರಲ್ಲಿ ಒಬ್ಬನ ಮೇಲೆ ಧಾವಿಸಿ ಅವನಿಂದ ಆಯುಧವನ್ನು ಕಸಿದುಕೊಳ್ಳುವಲ್ಲಿ ಯಶಸ್ವಿಯಾದಳು. ಆಕೆಯ ನಡೆ ಗ್ಯಾಂಗ್ ಅನ್ನು ಅಸ್ಥಿರಗೊಳಿಸಿತು ಮತ್ತು ಆಕೆಯ ತಂದೆಯ ಮೇಲಿನ ದಾಳಿಯನ್ನು ವಿಳಂಬಗೊಳಿಸಿತು. ಇದರಿಂದ ಆಕೆಯ ನೆರೆಹೊರೆಯವರು ಮಧ್ಯಪ್ರವೇಶಿಸಿ ಆತನನ್ನು ರಕ್ಷಿಸಲು ಅಮೂಲ್ಯ ಸಮಯವನ್ನು ನೀಡಿತು. ನೆರೆಹೊರೆಯವರ ಮಧ್ಯಪ್ರವೇಶದ ನಂತರ ಗ್ಯಾಂಗ್ ಸ್ಥಳದಿಂದ ಪರಾರಿಯಾಗಿದೆ.

“ನಾನು ಅವರ ಕಡೆಗೆ ಓಡಲಾರಂಭಿಸಿದೆ. ಒಬ್ಬ ವ್ಯಕ್ತಿ ತನ್ನ ಕೊಡಲಿಯನ್ನು ಎತ್ತಿ ನನ್ನ ತಂದೆಯ ಎದೆಯ ಮೇಲೆ ಇಳಿಸುವುದನ್ನು ನಾನು ಗಾಬರಿಯಿಂದ ನೋಡಿದೆ. ನಾನು ಕೇವಲ ಒಂದು ಸೆಕೆಂಡ್ ತಡವಾಗಿದ್ದೆ. ಆದರೆ ನಾನು ಗಲಿಬಿಲಿಯಲ್ಲಿ ಧಾವಿಸಿ ಮತ್ತು ಕೊಡಲಿಗಳೊಂದಿಗೆ ಸೆಣಸಾಡಿದೆ. ನಾನು ಅವನಿಂದ ಕೊಡಲಿಯನ್ನು ಕಸಿದುಕೊಂಡೆ, ಅದನ್ನು ಎಸೆದಿದ್ದೇನೆ” ಎಂದು ಆಕೆ ತನ್ನ ಶೌರ್ಯದ ಸಾಹಸ ಮತ್ತು ಸಮಯ ಪ್ರಜ್ಞೆಯನ್ನು ವಿವರಿಸಿದ್ದಾರೆ.

ಕೊಲೆ ಯತ್ನದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ; ವಿನೇಶ್ ಫೋಗಟ್‌ ಬಗ್ಗೆ ಮಾತನಾಡುವವರಿಗೆ ಇಂದು ಉತ್ತರ ಸಿಕ್ಕಿದೆ, ಯಶಸ್ಸಿನ ಪ್ರತಿಧ್ವನಿ ದೆಹಲಿಗೆ ಮುಟ್ಟಿದೆ : ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...