ಛತ್ತಿಸ್‌ಗಢದಲ್ಲಿ ಮಾವೋವಾದಿಗಳೊಂದಿಗೆ ಸಂಘರ್ಷ: 22 ಯೋಧರು ಹುತಾತ್ಮರು

ಛತ್ತಿಸ್‌ಗಢ ರಾಜಧಾನಿ ರಾಯ್‌ಪುರದಿಂದ 400 ಕಿ.ಮೀ ದೂರದಲ್ಲಿರುವ ಬಿಜಾಪುರದಲ್ಲಿ ನಿನ್ನೆ ಮಾವೋವಾದಿಗಳೊಂದಿಗೆ ನಡೆದ ಸಂಘರ್ಷದಲ್ಲಿ ಕನಿಷ್ಠ 22 ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಒಬ್ಬ ಸದಸ್ಯರೊಬ್ಬರು ಕಾಣೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ಏಪ್ರಿಲ್ 3 ರ ಶನಿವಾರ ಛತ್ತಿಸ್‌ಗಢ ಬಿಜಾಪುರದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್‌ಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 22 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಸುಮಾರು 31 ಮಂದಿ ಗಾಯಗೊಂಡಿದ್ದಾರೆ ಎಂದು ಬಿಜಾಪುರ ಎಸ್‌ಪಿ ಕಮಲೋಚನ್ ಕಶ್ಯಪ್ ಎಎನ್‌ಐಗೆ ತಿಳಿಸಿದ್ದಾರೆ.

ಈವರೆಗೆ 17 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಇಪ್ಪತ್ಮೂರು ಸೈನಿಕರನ್ನು ಬಿಜಾಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಏಳು ಮಂದಿಯನ್ನು ರಾಯಪುರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಗೊಂಡ 31 ಸಿಬ್ಬಂದಿಗಳಲ್ಲಿ 16 ಮಂದಿ ಸಿಆರ್‌ಪಿಎಫ್‌ನವರು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರೈತ ಚಳವಳಿಗೆ ಹೊಸ ಭರವಸೆ ನೀಡಿದ ಕರ್ನಾಟಕದ ರೈತ ಮಹಾಪಂಚಾಯತ್‌ಗಳು

ಮಾವೋವಾದಿ ಭದ್ರಕೋಟೆಯೆಂದು ಪರಿಗಣಿಸಲ್ಪಟ್ಟ ದಕ್ಷಿಣ ಬಸ್ತಾರ್ ಕಾಡುಗಳಲ್ಲಿನ ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಗಳಲ್ಲಿ ಶನಿವಾರ, 2,000ಕ್ಕೂ ಹೆಚ್ಚು ಸಿಬ್ಬಂದಿಯೊಂದಿಗೆ ಭದ್ರತಾ ಪಡೆಗಳ ತಂಡಗಳು ಪ್ರಮುಖ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಮಧ್ಯಾಹ್ನ ಸುಮಾರು 12 ಗಂಟೆಗೆ ಶುರುವಾದ ಸಂಘರ್ಷ ಮೂರು ಗಂಟೆಗಳ ಕಾಲ ನಡೆದಿದೆ.

ಎನ್‌ಕೌಂಟರ್ ಸ್ಥಳದಲ್ಲಿ ನಕ್ಸಲ್ ಮಹಿಳೆಯ ಶವವೂ ಪತ್ತೆಯಾಗಿದೆ ಎಂದು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ನಕ್ಸಲ್ ಕಾರ್ಯಾಚರಣೆ) ಒಪಿ ಪಾಲ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಕನಿಷ್ಠ ಒಂಬತ್ತು ನಕ್ಸಲರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 15 ಮಂದಿ ಗಾಯಗೊಂಡಿದ್ದಾರೆ ಎಂದು ಬಸ್ತಾರ್ ಐಜಿ ಪಿ.ಸುಂದರರಾಜ್ ತಿಳಿಸಿದ್ದಾರೆ. ಜೊತೆಗೆ ಇದನ್ನು ಖಚಿತಪಡಿಸಲು ನಮಗೆ ಹೆಚ್ಚಿನ ಸಮಯ ಬೇಕಾಗುತ್ತದೆ. ನಮ್ಮ ಅಂದಾಜಿನ ಪ್ರಕಾರ, ಅಲ್ಲಿ 250 ನಕ್ಸಲರು ಇದ್ದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎರಡೇ ಪದದ ಟ್ವೀಟ್: ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್ ಗಾಂಧಿ

Central Reserve Police Force’s elite Commando Battalion for Resolute Action (ಕೋಬ್ರಾ) ಘಟಕ, ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್)ಗಳು ಜಿಲ್ಲೆಯಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಯನ್ನು ನಡೆಸುತ್ತಿದ್ದವು.

ಛತ್ತಿಸ್‌ಗಢ ನಾರಾಯಣಪುರ ಜಿಲ್ಲೆಯಲ್ಲಿ ಮಾವೋವಾದಿಗಳು 27 ಡಿಆರ್‌ಜಿ (District Reserve Guard) ತಂಡಗಳಿದ್ದ ಬಸ್ಸನ್ನು ಗುರಿಯಾಗಿಸಿ ದಾಳಿ ಮಾಡಿದ್ದರು. ಇದರಲ್ಲಿ ಐವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದರು ಮತ್ತು 14 ಮಂದಿ ಗಾಯಗೊಂಡಿದ್ದರು.

ಯೋಧರ ಸಾವಿಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್,  ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.


ಇದನ್ನೂ ಓದಿ: ‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

LEAVE A REPLY

Please enter your comment!
Please enter your name here