Homeಮುಖಪುಟಛತ್ತೀಸ್‌ಗಢ: 1.18 ಕೋಟಿ ರೂ. ಬಹುಮಾನ ಘೋಷಣೆಯಾಗಿದ್ದ 23 ನಕ್ಸಲರು ಪೊಲೀಸರಿಗೆ ಶರಣು

ಛತ್ತೀಸ್‌ಗಢ: 1.18 ಕೋಟಿ ರೂ. ಬಹುಮಾನ ಘೋಷಣೆಯಾಗಿದ್ದ 23 ನಕ್ಸಲರು ಪೊಲೀಸರಿಗೆ ಶರಣು

- Advertisement -
- Advertisement -

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ 23 ನಕ್ಸಲರು ಪೊಲೀಸರ ಮುಂದೆ ಶರಣಾಗಿದ್ದಾರೆ. 14 ಪುರುಷರು ಮತ್ತು 9 ಮಹಿಳೆಯರ ಈ ತಂಡದ ಮೇಲೆ ಒಟ್ಟು 1.18 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ.

ನಿಷೇಧಿತ ಭಾರತ ಕಮ್ಯುನಿಸ್ಟ್ ಪಕ್ಷದ (ಮಾವೋವಾದಿ) ಸಶಸ್ತ್ರ ವಿಭಾಗವಾದ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (ಪಿಎಲ್‌ಜಿಎ)ಯ ಬಲಿಷ್ಠ ಬೆಟಾಲಿಯನ್ 1ರ ಎಂಟು ಕಟ್ಟಾ ಮಾವೋವಾದಿಗಳು ಶರಣಾದವರಲ್ಲಿ ಸೇರಿದ್ದಾರೆ. ಶರಣಾಗುವಾಗ 23 ಜನರ ಪೈಕಿ ಯಾರ ಬಳಿಯೂ ಶಸ್ತ್ರಾಸ್ತ್ರಗಳು ಇರಲಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್.ಕಾಂ ವರದಿ ಮಾಡಿದೆ.

ಒಟ್ಟು 23 ನಕ್ಸಲರು ಶರಣಾಗಿದ್ದಾರೆ. ಅವರೆಲ್ಲರೂ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು. ಸರ್ಕಾರದ ನಿಯಮಗಳ ಪ್ರಕಾರ ಅವರಿಗೆ ಸೌಲಭ್ಯಗಳನ್ನು ಒದಗಿಸಲಾಗುವುದು. ನಕ್ಸಲರು ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬರುವಂತೆ ನಾನು ಈ ಸಂದರ್ಭದಲ್ಲಿ ಮನವಿ ಮಾಡುತ್ತೇನೆ ಎಂದು ಸುಕ್ಮಾ ಎಸ್ಪಿ ಕಿರಣ್ ಚೌಹಾಣ್ ಹೇಳಿದ್ದಾರೆ.

ಶರಣಾದವರಲ್ಲಿ 35 ವರ್ಷದ ಲೋಕೇಶ್ ಅಲಿಯಾಸ್ ಪೋಡಿಯಂ ಭೀಮಾ ಎಂಬ ವಿಭಾಗೀಯ ಸಮಿತಿ ಸದಸ್ಯ (ಡಿವಿಸಿಎಂ) ಸೇರಿದ್ದಾರೆ. 2007ರಿಂದ, ಇವರು ಬಸ್ತಾರ್ ಪ್ರದೇಶದಲ್ಲಿ ಹಲವಾರು ಭದ್ರತಾ ಸಿಬ್ಬಂದಿಯನ್ನು ಕೊಂದ ಕನಿಷ್ಠ ಒಂಬತ್ತು ದಾಳಿ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಮಟ್ಟದಲ್ಲಿ, ದಂಡಕಾರಣ್ಯ ವಿಶೇಷ ವಲಯ ಸಮಿತಿಯು ಉನ್ನತ ಸಮಿತಿಯಾಗಿದ್ದು, ನಂತರ ಪ್ರತಿ ವಿಭಾಗದಲ್ಲಿ ಡಿವಿಸಿಎಂಗಳು ಇರುತ್ತಾರೆ ಎಂದು ಎಸ್ಪಿ ವಿವರಿಸಿದ್ದಾರೆ.

ಶರಣಾದ ಮತ್ತೊಬ್ಬ ಮಾವೋವಾದಿಯನ್ನು ರಮೇಶ್ ಅಲಿಯಾಸ್ ಕಲ್ಮು (35) ಎಂದು ಗುರುತಿಸಲಾಗಿದ್ದು, ಇವರು ಉನ್ನತ ಮಾವೋವಾದಿ ನಾಯಕ ಮದ್ವಿ ಹಿಡ್ಮಾ ಅವರ ಗಾರ್ಡ್ ಕಮಾಂಡರ್ ಆಗಿದ್ದರು. ಇಬ್ಬರ ಮೇಲೂ ತಲಾ 8 ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು. ಶರಣಾದ ಪ್ರತಿಯೊಬ್ಬ ಮಾವೋವಾದಿಗೂ ಶರಣಾಗತಿ ಮೊತ್ತವಾಗಿ 50,000 ರೂ.ಗಳನ್ನು ನೀಡಲಾಗುತ್ತದೆ ಮತ್ತು ಕೌಶಲ್ಯ ತರಬೇತಿ ಒದಗಿಸಲಾಗುತ್ತದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್.ಕಾಂ ವರದಿ ಹೇಳಿದೆ

ಶುಕ್ರವಾರ, ಡಿವಿಸಿಎಂ ಸದಸ್ಯ ಸೇರಿದಂತೆ 37.50 ಲಕ್ಷ ರೂ. ಬಹುಮಾನ ಘೋಷಣೆಯಾಗಿದ್ದ 22 ಮಾವೋವಾದಿಗಳು ನಾರಾಯಣಪುರದಲ್ಲಿ ಶರಣಾಗಿದ್ದರು.

ಜೂನ್ 18ರಂದು ಛತ್ತೀಸ್‌ಗಢದ ಅವಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಮಾಪುರ-ಮುರ್ದಂಡ ರಸ್ತೆಯಲ್ಲಿ ನಕ್ಸಲರು ಇಟ್ಟಿದ್ದ ಐಇಡಿ ಸ್ಪೋಟಗೊಂಡು ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಜವಾನವರು ಗಾಯಗೊಂಡಿದ್ದರು.

ಅವಘಡ ನಡೆದಾಗ ಗಾಯಗೊಂಡ ಸಿರ್‌ಪಿಎಫ್ ಜವಾನರು ಕರ್ತವ್ಯದಲ್ಲಿದ್ದರು. ಅವರಿಗೆ ಘಟನಾ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಿಜಾಪುರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯವು ಶೀಘ್ರದಲ್ಲೇ ನಕ್ಸಲ್ ಹಿಂಸಾಚಾರದಿಂದ ಮುಕ್ತವಾಗಲಿದೆ. ನಕ್ಸಲ್ ಬಾಧಿತ ಪ್ರದೇಶಗಳು ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಪಡೆಯಲಿದೆ ಎಂದು ಜುಲೈ 5ರಂದು ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಹೇಳಿದ್ದರು.

ಎಲ್ಲಾ ರೀತಿಯಲ್ಲೂ ನಮ್ಮ ರಾಜ್ಯ ಶ್ರೀಮಂತವಾಗಿದೆ. ಶೇಕಡ 44 ಕ್ಕಿಂತ ಹೆಚ್ಚಿನ ಭೂಮಿ ಅರಣ್ಯವನ್ನು ಹೊಂದಿದೆ. ಮಣ್ಣು ಫಲತ್ತವಾಗಿದೆ ಮತ್ತು ರೈತರು ಕಷ್ಟಪಟ್ಟು ದುಡಿಯುತ್ತಿದ್ದಾರೆ. ನಕ್ಸಲಿಸಂ ನಮ್ಮ ಅಭಿವೃದ್ದಿಗೆ ದೊಡ್ಡ ತಡೆಯಾಗಿದೆ. ಆದರೆ, ನಾವು ಅದರಿಂದ ಹೊರ ಬರುತ್ತೇವೆ. ಶರಣಾದ ನಕ್ಸಲರಿಗೆ ನಾವು ಅದ್ಬುತವಾದ ಪುನರ್ವಸತಿ ನಿಯಮಗಳನ್ನು ರೂಪಿಸಿದ್ದೇವೆ. ಶೀಘ್ರದಲ್ಲೇ ಛತ್ತೀಸ್‌ಗಢ ನಕ್ಸಲ್ ಹಿಂಸಾಚಾರ ಮುಕ್ತವಾಗಲಿದೆ ಮತ್ತು ಬಸ್ತಾರ್‌ನಂತಹ ಪ್ರದೇಶಗಳು ರಸ್ತೆ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಪಡೆಯಲಿದೆ ಎಂದಿದ್ದರು.

ಕೇಂದ್ರ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ, 2024 ಒಂದರಲ್ಲೇ 290 ನಕ್ಸಲರನ್ನು ಹತ್ಯೆಗೈಯ್ಯಲಾಗಿದೆ, 1,090 ಜನರನ್ನು ಬಂಧಿಸಲಾಗಿದೆ ಮತ್ತು 881 ಮಂದಿ ಶರಣಾಗಿದ್ದಾರೆ. ಇತ್ತೀಚಿನ ಕಾರ್ಯಾಚರಣೆ, ಅಂದರೆ 2025ರ ಮಾರ್ಚ್‌ ತಿಂಗಳಲ್ಲಿ ಬಿಜಾಪುರದಲ್ಲಿ 50 ನಕ್ಸಲರು ಶರಣಾಗಿದ್ದಾರೆ. ಸುಕ್ಮಾದಲ್ಲಿ 16, ಕನ್ಕೇರ್ ಮತ್ತು ಬಿಜಾಪುರದಲ್ಲಿ 22 ಜನರನ್ನು ಹತ್ಯೆ ಮಾಡಲಾಗಿದೆ. ಮಾರ್ಚ್ 31, 2026ರೊಳಗೆ ದೇಶದಲ್ಲಿ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡುವುದಾಗಿ ಸರ್ಕಾರ ಹೇಳಿಕೊಂಡಿದೆ.

ಐಐಎಂ-ಕಲ್ಕತ್ತಾ ಕ್ಯಾಂಪಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ: ವಿದ್ಯಾರ್ಥಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...