Homeಮುಖಪುಟಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ.

ಸರ್ಕಾರದ ಹೊಸ ಶರಣಾಗತಿ ಮತ್ತು ಪುನರ್ವಸತಿ ನೀತಿ ಮತ್ತು ‘ಪೂನಾ ಮಾರ್ಗಂ’ (ಬಸ್ತರ್ ಶ್ರೇಣಿ ಪೊಲೀಸರ ಸಾಮಾಜಿಕ ಪುನರ್ವಸತಿ ಅಭಿಯಾನ) ನಿಂದ ಪ್ರಭಾವಿತರಾಗಿ 12 ಮಹಿಳೆಯರು ಸೇರಿದಂತೆ 41 ಮಂದಿ ನಕ್ಸಲರು ಹಿರಿಯ ಪೊಲೀಸ್ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ತಿಳಿಸಿದ್ದಾರೆ.

ಶರಣಾದವರಲ್ಲಿ ನಾಲ್ವರು ಪಿಎಲ್‌ಜಿಎ (ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ) ಬೆಟಾಲಿಯನ್ ನಂ.1 ಮತ್ತು ಮಾವೋವಾದಿಗಳ ವಿವಿಧ ಕಂಪನಿಗಳ ಸದಸ್ಯರು, ಮೂವರು ಪ್ರದೇಶ ಸಮಿತಿಗಳ ಸದಸ್ಯರು, 11 ಪ್ಲಟೂನ್ ಮತ್ತು ಪ್ರದೇಶ ಸಮಿತಿ ಪಕ್ಷದ ಸದಸ್ಯರು, ಇಬ್ಬರು ಪಿಎಲ್‌ಜಿಎ ಸದಸ್ಯರು, ನಾಲ್ವರು ಮಿಲಿಟಿಯಾ ಪ್ಲಟೂನ್ ಕಮಾಂಡರ್‌ಗಳು, ಒಬ್ಬ ಉಪ ಕಮಾಂಡರ್, ಆರು ಮಂದಿ ಮಿಲಿಟಿಯಾ ಪ್ಲಟೂನ್ ಸದಸ್ಯರು, ಮತ್ತು ಉಳಿದವರು ನಿಷೇಧಿತ ಸಿಪಿಐ (ಮಾವೋವಾದಿ) ನ ಮುಂಚೂಣಿ ಸಂಘಟನೆಗಳಿಗೆ ಸೇರಿದವರು ಎಂದು ಪೊಲೀಸ್ ವರಿಷ್ಠಾಧಿಕಾರಿ ವಿವರಿಸಿದ್ದಾರೆ.

ಒಟ್ಟು 41 ಮಂದಿಯಲ್ಲಿ 39 ಜನರು ಮಾವೋವಾದಿಗಳ ದಕ್ಷಿಣ ಉಪ-ವಲಯ ಬ್ಯೂರೋಗೆ ಸೇರಿದವರು ಎಂದು ಹೇಳಿದ್ದಾರೆ.

ಶರಣಾದವರೆಲ್ಲರೂ ದಂಡಕಾರಣ್ಯ ವಿಶೇಷ ವಲಯ ಸಮಿತಿ, ತೆಲಂಗಾಣ ರಾಜ್ಯ ಸಮಿತಿ ಮತ್ತು ನಿಷೇಧಿತ ಸಂಘಟನೆಯ ಧಮ್ತಾರಿ-ಗರಿಯಾಬಂದ್-ನುವಾಪಾ ವಿಭಾಗಗಳೊಂದಿಗೆ ಸಂಬಂಧ ಹೊಂದಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಶರಣಾದವರು ಸಂವಿಧಾನದಲ್ಲಿ ನಂಬಿಕೆ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ಘನತೆಯ ಮತ್ತು ಸುರಕ್ಷಿತ ಜೀವನವನ್ನು ನಡೆಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಪುನರ್ವಸತಿ ನೀತಿಯಡಿಯಲ್ಲಿ, ಪ್ರತಿ ಕೇಡರ್‌ಗೆ ಪ್ರೋತ್ಸಾಹ ಧನವಾಗಿ 50 ಸಾವಿರ ರೂಗಳ ತಕ್ಷಣದ ಆರ್ಥಿಕ ಸಹಾಯವನ್ನು ನೀಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ಹೇಳಿದ್ದಾರೆ.

ಶರಣಾದವರಲ್ಲಿ ಪಾಂಡ್ರು ಹಪಕ ಅಲಿಯಾಸ್ ಮೋಹನ್ (37), ಬಂಡಿ ಹಪ್ಕಾ (35), ಲಕ್ಕು ಕೊರ್ಸ (37), ಬದ್ರು ಪುಣೆಂ (35), ಸುಖರಾಮ್ ಹೇಮ್ಲಾ (27), ಮಂಜುಳಾ ಹೇಮ್ಲಾ (25), ಮಂಗಳಿ ಮದ್ವಿ ಅಲಿಯಾಸ್ ಶಾಂತಿ (29), ಜೈರಾಮ್ ಕಡಿಯಂ (28) ಈ ಎಲ್ಲರ ತಲೆಗೂ ತಲಾ 8 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿತ್ತು.

ಇದಲ್ಲದೆ, ಮೂವರು ಕೇಡರ್‌ಗಳ ತಲೆಗೆ ತಲಾ 5 ಲಕ್ಷ ರೂ., 12 ಕೇಡರ್‌ಗಳ ತಲೆಗೆ ತಲಾ 2 ಲಕ್ಷ ರೂ. ಮತ್ತು 8 ಕೇಡರ್‌ಗಳ ತಲೆಗೆ ತಲಾ 1 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಜಿತೇಂದ್ರ ಕುಮಾರ್ ಯಾದವ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಪುನರ್ವಸತಿ ನೀತಿಯು ಮಾವೋವಾದಿಗಳು ಹಿಂಸಾಚಾರವನ್ನು ತ್ಯಜಿಸಿ ಮುಖ್ಯವಾಹಿನಿಗೆ ಮರಳಲು ಪ್ರೋತ್ಸಾಹಿಸುತ್ತಿದೆ ಎಂದು ಜಿತೇಂದ್ರ ಕುಮಾರ್ ಯಾದವ್ ಹೇಳಿದ್ದು, ಉಳಿದ ಮಾವೋವಾದಿಗಳು ಹಿಂಸಾಚಾರದ ಮಾರ್ಗವನ್ನು ತ್ಯಜಿಸುವಂತೆ ಮನವಿ ಮಾಡಿದ್ದಾರೆ.

ಮಾವೋವಾದಿಗಳು ದಾರಿತಪ್ಪಿಸುವ ಮತ್ತು ಹಿಂಸಾತ್ಮಕ ಸಿದ್ಧಾಂತಗಳನ್ನು ತ್ಯಜಿಸಿ ಭಯವಿಲ್ಲದೆ ಸಮಾಜಕ್ಕೆ ಮರಳಬೇಕು. ‘ಪೂನಾ ಮಾರ್ಗಂ’ ಅಭಿಯಾನವು ಶರಣಾಗುವವರಿಗೆ ಸುರಕ್ಷಿತ, ಗೌರವಾನ್ವಿತ ಮತ್ತು ಸ್ವಾವಲಂಬಿ ಭವಿಷ್ಯವನ್ನು ಖಾತ್ರಿಗೊಳಿಸುತ್ತದೆ. ಈ ಶರಣಾಗತಿಯೊಂದಿಗೆ, ಜನವರಿ 2024 ರಿಂದ ಇದುವರೆಗೆ ಜಿಲ್ಲೆಯಲ್ಲಿ ಹಿಂಸಾಚಾರವನ್ನು ತೊರೆದು ಮುಖ್ಯವಾಹಿನಿಗೆ ಸೇರಿದ ಮಾವೋವಾದಿಗಳ ಸಂಖ್ಯೆ 790ಕ್ಕೆ ಏರಿಕೆಯಾಗಿದೆ ಎಂದು ಜಿತೇಂದ್ರ ಕುಮಾರ್ ಯಾದವ್ ಹೇಳಿದ್ದಾರೆ.

ಇದೇ ಅವಧಿಯಲ್ಲಿ ಜಿಲ್ಲೆಯಲ್ಲಿ 202 ನಕ್ಸಲರು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಹತರಾಗಿದ್ದಾರೆ ಮತ್ತು 1,031 ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದಾರೆ.

ಕಳೆದ 23 ತಿಂಗಳಲ್ಲಿ ಛತ್ತೀಸ್‌ಗಢದಲ್ಲಿ ಉನ್ನತ ಕೇಡರ್‌ಗಳು ಸೇರಿದಂತೆ 2,200 ಕ್ಕೂ ಹೆಚ್ಚು ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...