Homeಮುಖಪುಟಛತ್ತೀಸ್‌ಗಢ: ಸರಕಾರಿ ಆಸ್ಪತ್ರೆಯಲ್ಲಿ ಅಪಘಾತದ ಗಾಯಾಳುಗಳಿಗೆ ಮೊಬೈಲ್ ಬೆಳಕಿನಲ್ಲಿ ಚಿಕಿತ್ಸೆ

ಛತ್ತೀಸ್‌ಗಢ: ಸರಕಾರಿ ಆಸ್ಪತ್ರೆಯಲ್ಲಿ ಅಪಘಾತದ ಗಾಯಾಳುಗಳಿಗೆ ಮೊಬೈಲ್ ಬೆಳಕಿನಲ್ಲಿ ಚಿಕಿತ್ಸೆ

- Advertisement -
- Advertisement -

ಛತ್ತೀಸ್‌ಗಢದ ಸರಕಾರಿ ಆಸ್ಪತ್ರೆಯಲ್ಲಿ ವಿದ್ಯುತ್‌ ಕಡಿತದಿಂದ ವೈದ್ಯರು ಮೊಬೈಲ್ ಬೆಳಕಿನಲ್ಲಿ ಚಿಕಿತ್ಸೆ ನೀಡುತ್ತಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯಲ್ಲಿ ಅಪಘಾತದ ಗಾಯಾಳುಗಳಿಗೆ ಮೊಬೈಲ್ ಬೆಳಕಿನಲ್ಲಿ ಚಿಕಿತ್ಸೆ ನೀಡಲಾಗಿದೆ.

ಬಸ್‌ ಮತ್ತು ಟ್ರಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟು, 18 ಮಂದಿ ಗಾಯಗೊಂಡಿದ್ದರು.  ಗಾಯಾಳುಗಳನ್ನು ಗಂಭೀರವಾದ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಈ ವೇಳೆ ವಿದ್ಯುತ್‌ ಸಂಪರ್ಕವಿಲ್ಲದೆ ಕೆಲವು ರೋಗಿಗಳಿಗೆ ವೈದ್ಯರು ಮೊಬೈಲ್‌ ಬೆಳಕಿನಿಂದಲೇ ಚಿಕಿತ್ಸೆ ನೀಡಿದ್ದಾರೆ. ಆಸ್ಪತ್ರೆಗೆ ಬಂದ ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಬೇರೆ ಆಸ್ಪತ್ರೆಗೆ ಸಾಗಿಸಲಾಗಿದೆ.

ಇದಲ್ಲದೆ ಸರಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ಕೂಡ ಅಪಘಾತದ ಸ್ಥಳಕ್ಕೆ ಬಂದಿಲ್ಲ. ಗಾಯಾಳುಗಳನ್ನು  ಬೇರೆ ವಾಹನಗಳ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿತ್ತು. ಬಸ್ತಾನಾರ್ ಬ್ಲಾಕ್‌ನಲ್ಲಿದ್ದ ಈ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಗಾಯಾಳುಗಳ ಕುಟುಂಬಸ್ಥರು ಮತ್ತು ಸ್ಥಳೀಯರು ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಜವಾಬ್ಧಾರಿಯುತ ಸ್ಥಾನದಲ್ಲಿರುವ ಅಧಿಕಾರಿಗಳ ವಿರದ್ಧ ಕ್ರಮವನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಶಾಸಕ ರಾಜಮನ್ ಬೆಂಜಮಿನ್ ಈ ಕುರಿತು ಮಾತನಾಡಿದ್ದು, ವಿದ್ಯುತ್ ಇಲಾಖೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಆಸ್ಪತ್ರೆಯಲ್ಲಿನ ಎಲ್ಲಾ ಸಮಸ್ಯೆಗಳನ್ನು ಕೂಡಲೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

PWDಯ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿ ಅಜಯ್ ಕುಮಾರ್ ಟೆಂಬೂರ್ನ್ ಅವರನ್ನು ಈ ಬಗ್ಗೆ ಕೇಳಿದಾಗ, ಶಾರ್ಟ್ ಸರ್ಕ್ಯೂಟ್ ಘಟನೆಯ ನಂತರ ಕಟ್ಟಡದಲ್ಲಿ ಆರಂಭಿಕ ದುರಸ್ತಿ ಮಾಡಲಾಗಿದೆ ಹೆಚ್ಚಿನ ದುರಸ್ಥಿ ಕಾರ್ಯ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗುಜರಾತ್‌: ದಲಿತ ಇಂಜಿನಿಯರ್‌ಗೆ ಜಾತಿ ನಿಂದಿಸಿ ಥಳಿತ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read