Homeರಾಷ್ಟ್ರೀಯಛತ್ತೀಸ್‌ಗಢ: ಬೀಫ್‌ ಮಾರಾಟ ಆರೋಪ; ಗುಂಪು ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ

ಛತ್ತೀಸ್‌ಗಢ: ಬೀಫ್‌ ಮಾರಾಟ ಆರೋಪ; ಗುಂಪು ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ

ಪೊಲೀಸರು ಸಂತ್ರಸ್ತರನ್ನೇ ಬಂಧಿಸಿ, ಗೋಮಾಂಸವನ್ನು ವಶಕ್ಕೆ ಪಡೆದು ಪರೀಕ್ಷೆಗೆ ಕಳುಹಿಸಿದ್ದಾರೆ

- Advertisement -
- Advertisement -

ಗೋಮಾಂಸ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಗಳಿಬ್ಬರನ್ನು ಬೆತ್ತಲೆಗೊಳಿಸಿ ಜನನಿಭಿಡ ರಸ್ತೆಯಲ್ಲಿ ಗುಂಪು ಹಲ್ಲೆ ನಡೆಸಿ ಮೆರವಣಿಗೆ ಮಾಡಿರುವ ಅಘಾತಕಾರಿ ಘಟನೆ ಛತ್ತೀಸ್‌ಗಢದ ಬಿಲಾಪುರದಲ್ಲಿ ನಡೆದಿದೆ. ಇಷ್ಟೆ ಅಲ್ಲದೆ ಪೊಲೀಸರು ಸಂತ್ರಸ್ತರನ್ನೇ ಬಂಧಿಸಿದ್ದಾರೆ. ಹಲ್ಲೆ ನಡೆಸಿರುವವರ ಆರೋಪಿಗಳ ವಿರುದ್ಧ ಯಾವುದೆ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿಲ್ಲ.

ಘಟನೆಯ ವಿಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಸಂತ್ರಸ್ತ ವ್ಯಕ್ತಿಗಳಿಬ್ಬರನ್ನು ನರಸಿಂಗ್ ದಾಸ್ (50) ಮತ್ತು ರಾಮ್‌ನಿವಾಸ್ ಮಹರ್ (52) ಎಂದು ಗುರುತಿಸಲಾಗಿದೆ.ವಿಡಿಯೊದಲ್ಲಿ ಸಂತ್ರಸ್ತರಿಬ್ಬರೂ ತಮ್ಮ ಬೈಕ್‌ ಅನ್ನು ಹಿಡಿದುಕೊಂಡು ಒಳ ವಸ್ತ್ರಗಳನ್ನು ಮಾತ್ರ ಧರಿಸಿ ನಡೆಯುತ್ತಿರುವು ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತರಿಬ್ಬರು ಬೆತ್ತಲೆಯಾಗಿ ನಡೆಯುತ್ತಿರುವುದನ್ನು ಹಲವಾರು ಜನರು ವಿಡಿಯೊ ಮಾಡುತ್ತಿದ್ದು, ಕೂಗಾಡುತ್ತಾ ಅವರನ್ನು ಹಿಂಬಾಲಿಸಿದ್ದಾರೆ. ಇದೇ ವೇಳೆ ದುಷ್ಕರ್ಮಿಯೊಬ್ಬ ತನ್ನ ಬೆಲ್ಟ್‌ನಿಂದ ಅವರ ಮೇಲೆ ಹಲ್ಲೆ ನಡೆಸುವುದು ಕೂಡ ವಿಡಿಯೊದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ರಾಜ್ಯದ ಜನರಿಗೆ ಹೆಚ್ಚು ‘ಬೀಫ್’ ತಿನ್ನುವಂತೆ ಹೇಳಿದ ಮೇಘಾಲಯದ ಬಿಜೆಪಿ ಸಚಿವ!

ಆದರೆ ಪೊಲೀಸರು ಹಲ್ಲೆಗೊಳಗಾದ ಸಂತ್ರಸ್ತರನ್ನೇ ಬಂಧಿಸಿದ್ದು, ಅವರಿಂದ 33 ಕೆಜಿಗೂ ಹೆಚ್ಚು ಗೋಮಾಂಸ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನರಸಿಂಗ್ ದಾಸ್ (50) ಮತ್ತು ರಾಮನಿವಾಸ್ ಮೆಹರ್ (52) ಅವರು ಬಿಳಿ ಗೋಣಿಚೀಲದಲ್ಲಿ ಗೋಮಾಂಸ ತುಂಬಿಕೊಂಡು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು ಎಂದು ಆರೋಪಿಸಿ ಸುಮಿತ್ ನಾಯಕ್ ಎಂಬವರು ನಿನ್ನೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದೂರುದಾರರು ಮತ್ತು ಇತರರು ಗೋಣಿಚೀಲದಲ್ಲಿ ಏನಿದೆ ಎಂದು ಸಂತ್ರಸ್ತರನ್ನು ಪ್ರಶ್ನಿಸಿದಾಗ, “ಅದರಲ್ಲಿ ಗೋಮಾಂಸವಿದೆ” ಎಂದು ಅವರು ಹೇಳಿದ್ದಾರೆ. ಇದರ ನಂತರ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ವ್ಯಕ್ತಿಗಳಿಬ್ಬರಿಂದ 33.5 ಕೆಜಿ ದನದ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ಪೊಲೀಸರು ತಿಳಿಸಿದ್ದಾರೆ.

“ಇಂದು ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪತ್ತೆಯಾದ ಮಾಂಸವನ್ನು ಪಶುವೈದ್ಯರು ಪರೀಕ್ಷಿಸಿದ್ದಾರೆ”  ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಈ ಪರೀಕ್ಷೆಯ ವರದಿಯ ಬಗ್ಗೆ ಯಾವುದೇ ವಿವರಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಸಂತ್ರಸ್ತರಿಬ್ಬರಿಗೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಬಗ್ಗೆ ಯಾವುದೆ ಮಾಹಿತಿ ಇಲ್ಲ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...