Homeಮುಖಪುಟಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ,...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

- Advertisement -
- Advertisement -

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದೆ.

ಜಿಲ್ಲಾಡಳಿತದ ಪ್ರಕಾರ, ಪ್ರತಿಭಟನಾಕಾರರು ಜಿಂದಾಲ್ ಪವರ್ ಲಿಮಿಟೆಡ್‌ನ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ನುಗ್ಗಿ, ಒಂದು ಕನ್ವೇಯರ್ ಬೆಲ್ಟ್, ಎರಡು ಟ್ರ್ಯಾಕ್ಟರ್‌ಗಳು ಮತ್ತು ಇತರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಮತ್ತು ಕಚೇರಿ ಆವರಣವನ್ನು ಧ್ವಂಸಗೊಳಿಸಿದ್ದಾರೆ. ಘರ್ಷಣೆಯ ಸಮಯದಲ್ಲಿ ಪೊಲೀಸ್ ಬಸ್, ಜೀಪ್ ಮತ್ತು ಆಂಬ್ಯುಲೆನ್ಸ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಮತ್ತು ಬೆಂಕಿ ಹಚ್ಚಿದ ನಂತರ ಉದ್ವಿಗ್ನತೆ ಹೆಚ್ಚಾಯಿತು. ಇದರಿಂದಾಗಿ ಹಲವಾರು ಸರ್ಕಾರಿ ವಾಹನಗಳಿಗೆ ಹಾನಿಯಾಯಿತು. ಹಿರಿಯ ಅಧಿಕಾರಿಗಳು ಮತ್ತು ಸ್ಥಳೀಯ ಶಾಸಕರು ಸ್ಥಳಕ್ಕೆ ತಲುಪಿ ಜನರನ್ನು ಸಮಾಧಾನಪಡಿಸಿದ ನಂತರವೂ ಪರಿಸ್ಥಿತಿ ಉದ್ವಿಗ್ನವಾಗಿತ್ತು ಎಂದು ಆಡಳಿತ ಹೇಳಿದೆ.

ತಮ್ನಾರ್ ಪ್ರದೇಶದ ಗೇರ್ ಪೆಲ್ಮಾ ಸೆಕ್ಟರ್-Iರ ಕಲ್ಲಿದ್ದಲು ಬ್ಲಾಕ್‌ ಪ್ರದೇಶದ 14 ಹಳ್ಳಿಗಳ ಜನರು ಡಿಸೆಂಬರ್ 12 ರಿಂದ ಲಿಬ್ರಾ ಗ್ರಾಮದ ಸಿಎಚ್‌ಪಿ ಚೌಕ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ. ಪ್ರಸ್ತಾವಿತ ಗಣಿಗಾರಿಕೆ ಯೋಜನೆಗಾಗಿ ಡಿಸೆಂಬರ್ 8 ರಂದು ಧೌರಭಟದಲ್ಲಿ ನಡೆದ ಸಾರ್ವಜನಿಕ ಪರಿಶೀಲನೆಯ ವಿರುದ್ಧ ಈ ಆಂದೋಲನ ನಡೆಯುತ್ತಿದೆ. ಇದನ್ನು ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿ ನಡೆಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಡಿಸೆಂಬರ್ 4ರಂದು ರಾಜ್ಯದ ಸುರ್ಗುಜಾ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಗೆ ಸಂಬಂಧಿಸಿದಂತೆ ನಡೆದ ಮತ್ತೊಂದು ಪ್ರಮುಖ ಘರ್ಷಣೆಯ ನಂತರ ಈ ಹಿಂಸಾಚಾರ ಸಂಭವಿಸಿದೆ. ಪರ್ಸೋಡಿ ಕಲಾ ಗ್ರಾಮದಲ್ಲಿ ಅಮೇರಾ ಕಲ್ಲಿದ್ದಲು ಗಣಿ ವಿಸ್ತರಣಾ ಯೋಜನೆಯನ್ನು ಪ್ರತಿಭಟಿಸುತ್ತಿದ್ದ ಗ್ರಾಮಸ್ಥರೊಂದಿಗಿನ ಘರ್ಷಣೆಯಲ್ಲಿ 30ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಓಪನ್-ಕಾಸ್ಟ್ ಗಣಿ ವಿಸ್ತರಣೆಗೆ ಸಂಬಂಧಿಸಿದ ಪ್ರತಿಭಟನೆಯು ಹಿಂಸಾತ್ಮಕವಾಗಿ ಮಾರ್ಪಟ್ಟಿತ್ತು. ಪ್ರತಿಭಟನಾಕಾರರು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದಾಗ ಪೊಲೀಸರು ಗುಂಪನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿ ಅಶ್ರುವಾಯು ಪ್ರಯೋಗಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೇರ್ ಪೆಲ್ಮಾ ಕಲ್ಲಿದ್ದಲು ಬ್ಲಾಕ್ ಈಶಾನ್ಯ ಛತ್ತೀಸ್‌ಗಢದ ಪರಿಸರ ಸೂಕ್ಷ್ಮ ಭಾಗದಲ್ಲಿದೆ. ಇದು ದಟ್ಟವಾದ ಕಾಡುಗಳು, ಫಲವತ್ತಾದ ಕೃಷಿ ಭೂಮಿ ಮತ್ತು ಆದಿವಾಸಿ ಸಮುದಾಯಗಳು ಹೆಚ್ಚಿನ ಸಂಖ್ಯೆಲ್ಲಿರುವ ಪ್ರದೇಶವಾಗಿದೆ. ತಮ್ನಾರ್-ಧರಮ್‌ಜೈಗಢ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಕಲ್ಲಿದ್ದಲು ಗಣಿಗಾರಿಕೆಯು ಅರಣ್ಯನಾಶ, ಅಂತರ್ಜಲ ಕುಸಿತ, ವಾಯು ಮಾಲಿನ್ಯ, ಕೃಷಿ ಮತ್ತು ಕುಡಿಯುವ ನೀರಿನ ಅಗತ್ಯಗಳನ್ನು ಬೆಂಬಲಿಸುವ ಸ್ಥಳೀಯ ಹೊಳೆಗಳ ಮಾಲಿನ್ಯಕ್ಕೆ ಕಾರಣವಾಗಬಹುದು ಎಂದು ಪರಿಸರ ಗುಂಪುಗಳು ಎಚ್ಚರಿಸಿವೆ.

ಕಲ್ಲಿದ್ದಲು ನಿರ್ವಹಣಾ ಘಟಕಗಳು, ರೈಲು ಕಾರಿಡಾರ್‌ಗಳು ಮತ್ತು ಬೂದಿ ಕೊಳಗಳು ಸೇರಿದಂತೆ ಗಣಿಗಾರಿಕೆ ಸಂಬಂಧಿತ ಮೂಲಸೌಕರ್ಯಗಳು ವೇಗವಾಗಿ ವಿಸ್ತರಿಸುತ್ತಿದ್ದರೂ, ಈ ಪ್ರದೇಶದಲ್ಲಿ ಬಹು ಕಲ್ಲಿದ್ದಲು ಬ್ಲಾಕ್‌ಗಳ ಸಂಚಿತ ಪರಿಸರ ಪರಿಣಾಮವನ್ನು ಸಮರ್ಪಕವಾಗಿ ನಿರ್ಣಯಿಸಲಾಗಿಲ್ಲ ಎಂದು ಹೋರಾಟಗಾರರು ವಾದಿಸುತ್ತಾರೆ.

ಭಾರತದ ಕಲ್ಲಿದ್ದಲು ಉತ್ಪಾದನೆಗೆ ಛತ್ತೀಸ್‌ಗಢವು ಈಗಾಗಲೇ ಹೆಚ್ಚಿನ ಕೊಡುಗೆ ನೀಡುತ್ತಿದೆ ಎಂದು ಹೋರಾಟಗಾರರು ಬೆಟ್ಟು ಮಾಡುತ್ತಾರೆ. ಹವಾಮಾನ ಬದಲಾವಣೆ ಮತ್ತು ಸಾರ್ವಜನಿಕ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ನಡುವೆ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಅನುಮತಿಗಳ ಅಗತ್ಯವನ್ನು ಪ್ರಶ್ನಿಸಿದ್ದಾರೆ.

ಶನಿವಾರ ಬೆಳಿಗ್ಗೆ ಸುಮಾರು 300 ಪ್ರತಿಭಟನಾಕಾರರು ಸ್ಥಳದಲ್ಲಿ ಜಮಾಯಿಸಿದ್ದರು, ಕೆಲವರು ರಸ್ತೆಗಳನ್ನು ತಡೆದು ಸಂಚಾರಕ್ಕೆ ಅಡ್ಡಿಪಡಿಸಿದರು ಎಂದು ಜಿಲ್ಲಾಡಳಿತ ಹೇಳಿಕೆಯಲ್ಲಿ ತಿಳಿಸಿದೆ. ಹಿರಿಯ ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳು ಬೆಳಿಗ್ಗೆ 10 ಗಂಟೆ ಸುಮಾರಿಗೆ ಮಧ್ಯಪ್ರವೇಶಿಸಿ ಅವರನ್ನು ತಮ್ಮ ಗೊತ್ತುಪಡಿಸಿದ ಪ್ರತಿಭಟನಾ ಪ್ರದೇಶಕ್ಕೆ ಮರಳುವಂತೆ ಮನವೊಲಿಸಿದರು ಎಂದು ಹೇಳಿದೆ.

ಆದಾಗ್ಯೂ, ಹತ್ತಿರದ ಹಳ್ಳಿಗಳ ಜನರು ಆಂದೋಲನದಲ್ಲಿ ಸೇರಿಕೊಂಡಾಗ ಜನಸಮೂಹ ಸುಮಾರು 1,000 ಕ್ಕೆ ಏರಿತು. ಶಾಂತಿ ಕಾಪಾಡುವಂತೆ ಅಧಿಕಾರಿಗಳು ಪದೇ ಪದೇ ಮನವಿ ಮಾಡಿದರೂ, ಮಧ್ಯಾಹ್ನ 2.30 ರ ಸುಮಾರಿಗೆ ಜನಸಮೂಹ ಹಿಂಸಾತ್ಮಕವಾಗಿ ತಿರುಗಿ, ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದು ಕಲ್ಲು ಮತ್ತು ಕೋಲುಗಳಿಂದ ಸಿಬ್ಬಂದಿ ಮೇಲೆ ದಾಳಿ ಮಾಡಿತು ಎಂದು ತಿಳಿಸಿದೆ.

ಉಪವಿಭಾಗೀಯ ಪೊಲೀಸ್ ಅಧಿಕಾರಿ ಅನಿಲ್ ವಿಶ್ವಕರ್ಮ, ತಮ್ನಾರ್ ಪೊಲೀಸ್ ಠಾಣೆಯ ಉಸ್ತುವಾರಿ ಕಮಲಾ ಪುಸಮ್ ಮತ್ತು ಒಬ್ಬ ಕಾನ್‌ಸ್ಟೆಬಲ್ ಗಂಭೀರ ಗಾಯಗೊಂಡಿದ್ದು, ಮಹಿಳಾ ಸಿಬ್ಬಂದಿ ಸೇರಿದಂತೆ ಹಲವಾರು ಪೊಲೀಸರು ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಸ್ಥಿರವಾಗಿದ್ದು, ಕೆಲವರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ರಾಯ್‌ಗಢಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರತಿಭಟನೆಯ ನಂತರ ಜನರ ಗುಂಪು ಜಿಂದಾಲ್ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ನುಗ್ಗಿ, ಯಂತ್ರೋಪಕರಣಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿ, ಕಚೇರಿಗಳನ್ನು ಧ್ವಂಸಗೊಳಿಸಿತು ಎಂದು ಆಡಳಿತ ತಿಳಿಸಿದೆ. ರಾಯ್‌ಗಢ ಜಿಲ್ಲಾಧಿಕಾರಿ ಮಾಯಂಕ್ ಚತುರ್ವೇದಿ, ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾಂಗ್ ಪಟೇಲ್ ಮತ್ತು ಸ್ಥಳೀಯ ಶಾಸಕಿ ವಿದ್ಯಾವತಿ ಸಿದರ್ ಪರಿಸ್ಥಿತಿಯನ್ನು ಶಾಂತಗೊಳಿಸಲು ಆಗಮಿಸಿದ ನಂತರವೂ ಮತ್ತೆ ಕಲ್ಲು ತೂರಾಟ ನಡೆಯಿತು. ಘಟಕದೊಳಗೆ ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ ಎಂದು ಹೇಳಿದೆ.

ಪರಿಸ್ಥಿತಿ ಉದ್ವಿಗ್ನವಾಗಿದ್ದರೂ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಪ್ರದೇಶದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಡಿಎ ಜೊತೆ ಯಾವುದೇ ಮೈತ್ರಿ ಇಲ್ಲ: ಓವೈಸಿ

ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಥವಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಯಾವುದೇ ಮೈತ್ರಿ ಇರುವುದಿಲ್ಲ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಭಾರತದ ಅತ್ಯಂತ ಶ್ರೀಮಂತ ರಾಜ್ಯವಾದ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ...

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ...

ದೇವರು-ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ; ಬಿಜೆಪಿ ಕೌನ್ಸಿಲರ್‌ಗಳಿಗೆ ಕೇರಳ ಹೈಕೋರ್ಟ್ ನೋಟಿಸ್

ತಿರುವನಂತಪುರಂ ನಗರಸಭೆಯ ಬಿಜೆಪಿ ಕೌನ್ಸಿಲರ್‌ಗಳು ವಿವಿಧ ದೇವರು, ಹುತಾತ್ಮರು ಮತ್ತು ರಾಜಕೀಯ ಚಳುವಳಿಗಳ ಹೆಸರಿನಲ್ಲಿ ಮಾಡಿದ ಪ್ರಮಾಣವಚನಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ಕುರಿತು ಕೇರಳ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ...

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ ಚುನಾವಣಾ ಭರವಸೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...