Homeಮುಖಪುಟಛತ್ತೀಸ್‌ಗಢ: ನಕ್ಸಲರ ಐಇಡಿ ಸ್ಫೋಟದಲ್ಲಿ ಎಎಸ್‌ಪಿ ಸಾವು, 4 ಜವಾನರಿಗೆ ತೀವ್ರ ಗಾಯ

ಛತ್ತೀಸ್‌ಗಢ: ನಕ್ಸಲರ ಐಇಡಿ ಸ್ಫೋಟದಲ್ಲಿ ಎಎಸ್‌ಪಿ ಸಾವು, 4 ಜವಾನರಿಗೆ ತೀವ್ರ ಗಾಯ

- Advertisement -
- Advertisement -

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಸೋಮವಾರ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, 4 ಭದ್ರತಾ ಸಿಬ್ಬಂದಿ ತೀವ್ರ ಗಾಯಗೊಂಡಿದ್ದಾರೆ.

2013ರ ಬ್ಯಾಚ್‌ನ ರಾಜ್ಯ ಪೊಲೀಸ್ ಸೇವಾ ಅಧಿಕಾರಿ, ಕೊಂಟಾ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಆಕಾಶ್ ರಾವ್ ಗಿರೆಪುಂಜೆ ಅವರು ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ಗೃಹ ಖಾತೆಯನ್ನೂ ಹೊಂದಿರುವ ರಾಜ್ಯದ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ತಿಳಿಸಿದ್ದಾರೆ.

ಕೊಂಟಾ-ಎರ್ರಾಬೋರ್ ರಸ್ತೆಯ ಡೋಂಡ್ರಾ ಗ್ರಾಮದ ಬಳಿ ಘಟನೆ ಸಂಭವಿಸಿದಾಗ ಎಎಸ್‌ಪಿ ಮತ್ತು ಇತರ ಸಿಬ್ಬಂದಿ ಕಾಲ್ನಡಿಗೆಯಲ್ಲಿ ಗಸ್ತು ತಿರುಗುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸುಕ್ಮಾದ ಎಎಸ್ಪಿ ಆಕಾಶ್ ರಾವ್ ಗಿರೆಪುಂಜೆ ಕೊಂಟಾ ಎರ್ರಾಬೋರ್ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದರು.  ಆಗ ಈ ಸ್ಪೋಟ ಸಂಭವಿಸಿದೆ. ಈ ಐಇಡಿ ಸ್ಫೋಟದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಜವಾನರು ಕೂಡ ಗಾಯಗೊಂಡಿದ್ದಾರೆ ಮತ್ತು ಅವರನ್ನು ತಕ್ಷಣ ಚಿಕಿತ್ಸೆಗಾಗಿ ಕೊಂಟಾ ಸಮುದಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಎಎಸ್ಪಿ ಆಕಾಶ್ ರಾವ್ ಚಿಕಿತ್ಸೆಯ ಸಮಯದಲ್ಲಿ ನಿಧನರಾದರು. ಇತರ ಗಾಯಾಳುಗಳು  ಅಪಾಯದಿಂದ ಪಾರಾಗಿದ್ದಾರೆ ಎಂದು ಬಸ್ತಾರ್ ಐಜಿ ಸುಂದರರಾಜ್ .ಪಿ ಹೇಳಿದರು.

ಈ ಘಟನೆ ಸೋಮವಾರ ಬೆಳಿಗ್ಗೆ 9ರಿಂದ 10 ಗಂಟೆಯ ನಡುವೆ ನಡೆದಿದೆ ಎಂದು ಅವರು ಹೇಳಿದರು. ನಾಳೆ (ಮಂಗಳವಾರ) ನಕ್ಸಲರು ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಗಸ್ತು ತಿರುಗುವಿಕೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

ಎಎಸ್ಪಿ ಆಕಾಶ್ ರಾವ್ ಸ್ಫೋಟದಲ್ಲಿ ಹುತಾತ್ಮರಾಗಿದ್ದಾರೆ. ಅವರು ಧೈರ್ಯಶಾಲಿ ಅಧಿಕಾರಿಯಾಗಿದ್ದರು ಮತ್ತು ಶೌರ್ಯ ಪ್ರಶಸ್ತಿ ಪುರಸ್ಕೃತರಾಗಿದ್ದರು ಎಂದು ಉಪ ಮುಖ್ಯಮಂತ್ರಿ ಶರ್ಮಾ ನಾಗ್ಪುರದಲ್ಲಿ ತಿಳಿಸಿದರು.

ನಕ್ಸಲರು ಮತ್ತು ಸರ್ಕಾರದ ನಡುವೆ ಮಾತುಕತೆಗೆ ಪರಿಸ್ಥಿತಿ ಹೇಗೋ ಸೃಷ್ಟಿಯಾದರೆ, ಅದು ಇಂತಹ ಘಟನೆಗಳೊಂದಿಗೆ (ಸ್ಫೋಟವನ್ನು ಉಲ್ಲೇಖಿಸಿ) ಕೊನೆಗೊಳ್ಳುತ್ತದೆ ಎಂದು ಅವರು ಹೇಳಿದರು.

ಒಂದೇ ಒಂದು ಗುಂಡನ್ನು ಹಾರಿಸಲು ಬಯಸುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆದರೆ ಅವರು (ನಕ್ಸಲರು) ಮುಖ್ಯವಾಹಿನಿಗೆ ಬರಬೇಕು, ಪುನರ್ವಸತಿ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು ಮತ್ತು ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶರ್ಮಾ ಹೇಳಿದರು.

2025ರಲ್ಲಿ ಛತ್ತೀಸ್‌ಗಢದಲ್ಲಿ ನಡೆದ ಐಇಡಿ ಘಟನೆಗಳ ಪಟ್ಟಿ

• 30 ಮಾರ್ಚ್: ಬಿಜಾಪುರದಲ್ಲಿ ನಕ್ಸಲ್ ಎನ್‌ಕೌಂಟರ್‌ನ ಎರಡನೇ ದಿನದಂದು ಐಇಡಿ ಸ್ಫೋಟದಲ್ಲಿ ಮಹಿಳೆ ಸಾವನ್ನಪ್ಪಿದರು.

• 4 ಏಪ್ರಿಲ್: ನಾರಾಯಣಪುರದಲ್ಲಿ ನಕ್ಸಲರ ಐಇಡಿ ಸ್ಫೋಟಕ್ಕೆ ಒಬ್ಬ ಮೃತಪಟ್ಟು, ಒಬ್ಬ ಗಾಯಗೊಂಡಿದ್ದರು.

• 7 ಏಪ್ರಿಲ್: ಅಬುಜ್ಮದ್ ಕಾಡುಗಳಲ್ಲಿ ಐಇಡಿ ಸ್ಫೋಟದಲ್ಲಿ ಒಬ್ಬ ಗ್ರಾಮಸ್ಥರಿಗೆ ಗಾಯಗೊಂಡಿದ್ದರು.

• 9 ಏಪ್ರಿಲ್: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಜವಾನನು ಗೊಂಡಿದ್ದರು.

• 10 ಏಪ್ರಿಲ್: ಬಿಜಾಪುರದ ಅರಣ್ಯ ರಸ್ತೆಯಲ್ಲಿ ನಕ್ಸಲರು ಇರಿಸಿದ್ದ ಐಇಡಿಯನ್ನು ಯೋಧರು ನಿಷ್ಕ್ರಿಯಗೊಳಿಸಿದರು.

• 13 ಏಪ್ರಿಲ್: ಬಿಜಾಪುರದ ರಾಣಿಬೋಡ್ಲಿ ಕಟ್ಟೂರ್ ರಸ್ತೆಯಲ್ಲಿ 20 ಕೆಜಿ ಐಇಡಿ ನಿಷ್ಕ್ರಿಯಗೊಳಿಸಲಾಗಿದೆ.

• 14 ಏಪ್ರಿಲ್: ಯೋಧರು ಇರಿಸಿದ್ದ 5 ಐಇಡಿಗಳನ್ನು ನಾಶಪಡಿಸಿದ ನಕ್ಸಲರು.

• ಏಪ್ರಿಲ್ 18: ಬಿಜಾಪುರದ ಕೋಬ್ರಾ ಬೆಟಾಲಿಯನ್‌ನಲ್ಲಿ ಮಾವೋವಾದಿಯೊಬ್ಬನ ಬಂಧನ. ಆತ ಬಿಯರ್ ಬಾಟಲಿಗಳಲ್ಲಿ ತಯಾರಿಸಿದ 8 ಐಇಡಿಗಳ ವಶ.

• ಏಪ್ರಿಲ್ 21: ಬಿಜಾಪುರದಲ್ಲಿ ನಕ್ಸಲರು ಇರಿಸಿದ್ದ ಐಇಡಿ ಸ್ಫೋಟದಲ್ಲಿ ಸಿಎಎಫ್ ಜವಾನ್ ಸಾವು.

• ಏಪ್ರಿಲ್ 26: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಜವಾನನಿಗೆ ಗಾಯ

• ಮೇ 6: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಸಿಆರ್‌ಪಿಎಫ್ ಅಧಿಕಾರಿಗೆ ಗಾಯ.

• ಮೇ 19: ಗೌರ್ಮುಂಡ್ ಗ್ರಾಮದ ಕಾಡುಗಳಲ್ಲಿ ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್)ದಿಂದ 5 ಕೆಜಿ ತೂಕದ ಎರಡು ಐಇಡಿಗಳ ನಾಶ.

• ಮೇ 30: ಬಿಜಾಪುರದ ಮದ್ದೀದ್ ರಾಷ್ಟ್ರೀಯ ಉದ್ಯಾನವನದಲ್ಲಿ ಐಇಡಿ ಸ್ಫೋಟದಲ್ಲಿ ಮೂವರು ಗ್ರಾಮಸ್ಥರಿಗೆ ಗಾಯ.

• ಮೇ 31: ಗುರ್ಮಕಾ ಮತ್ತು ಖೋಡ್‌ಪರ್ ಗ್ರಾಮದ ಅರಣ್ಯ ಮಾರ್ಗದಲ್ಲಿ ಭದ್ರತಾ ಪಡೆಗಳಿಂದ 10 ಐಇಡಿಗಳ ನಿಷ್ಕ್ರಿಯ.

ವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...