Homeಮುಖಪುಟಛತ್ತೀಸ್‌ಗಡ: ಅಧಿಕಾರ ಹಸ್ತಾಂತರಕ್ಕೆ ನಿರ್ದೇಶಿಸಿದ ಕಾಂಗ್ರೆಸ್; ಕೊನೆಯ ಪ್ರಯತ್ನದತ್ತ ಭೂಪೇಶ್‌!

ಛತ್ತೀಸ್‌ಗಡ: ಅಧಿಕಾರ ಹಸ್ತಾಂತರಕ್ಕೆ ನಿರ್ದೇಶಿಸಿದ ಕಾಂಗ್ರೆಸ್; ಕೊನೆಯ ಪ್ರಯತ್ನದತ್ತ ಭೂಪೇಶ್‌!

- Advertisement -
- Advertisement -

ಛತ್ತೀಸ್‌ಗಡದ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಆಂತರಿಕ ಬಿಕ್ಕಟ್ಟು ಹೊಸ ತಿರುವು ಪಡೆದುಕೊಂಡಿದೆ. ಈ ಹಿಂದೆ ಒಪ್ಪಿದಂತೆ ಅಧಿಕಾರದ ಹಸ್ತಾಂತರವನ್ನು ಸರಾಗವಾಗಿ ಮಾಡುವಂತೆ ಮುಖ್ಯಮಂತ್ರಿ ಭೂಪೇಶ್‌ ಬಘೇಲ್ ಅವರಲ್ಲಿ ಪಕ್ಷದ ಕೇಂದ್ರ ನಾಯಕತ್ವವೂ ಹೇಳಿಕೊಂಡಿದೆ ಎಂದು TNIE ವರದಿ ಮಾಡಿದೆ. ಎರಡು ವರ್ಷಗಳ ಹಿಂದೆ ಮಾತುಕತೆಯಾಗಿರುವಂತೆ ತಮ್ಮ ಸಂಪುಟದ ಸಹೋದ್ಯೋಗಿ ಟಿಎಸ್‌ ಸಿಂಗ್ ದಿಯೋಗೆ ಅಧಿಕಾರ ವರ್ಗಾಯಿಸುವಂತೆ ಕಾಂಗ್ರೆಸ್ ಕೇಂದ್ರ ನಾಯಕತ್ವವು ಮುಖ್ಯಮಂತ್ರಿಗೆ ನಿರ್ದೇಶನ ನೀಡಿದೆ.

ಅದಾಗಿಯು, ಭೂಪೇಶ್‌ ಅವರ ಬೆಂಬಲಿಗ ಶಾಸಕರು ಇದನ್ನು ಇನ್ನೂ ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಈಗಾಗಲೆ ಒಂದೆರೆಡು ಮಂತ್ರಿಗಳು, ಹಿರಿಯ ಶಾಸಕರು ಸೇರಿದಂತೆ ಹಲವರು ಗುರುವಾರ ರಾತ್ರಿ ದೆಹಲಿಗೆ ಹಾರಿದ್ದು, ಪಕ್ಷದ ಹೈಕಮಾಂಡ್‌‌ ಮುಂದೆ ಭೂಪೇಶ್‌ ಅವರ ಪರವಾಗಿ ನಿಲ್ಲಲಿದೆ.

ಇದನ್ನೂ ಓದಿ: ಛತ್ತೀಸ್‌ಗಡ ಸರ್ಕಾರದಲ್ಲಿ ಬಂಡಾಯ: ಕಾಂಗ್ರೆಸ್‌ಗೆ ಹೊಸ ತಲೆ ನೋವು!

ಈ ವಾರದ ಆರಂಭದಲ್ಲಿ ಭೂಪೇಶ್‌ ಮತ್ತು ದಿಯೋ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾಗಿದ್ದರು. ಆದರೆ ಶುಕ್ರವಾರ(ಇಂದು) ಕೂಡಾ ಭೂಪೇಶ್‌ ಅವರು ರಾಹುಲ್ ಗಾಂಧಿಯನ್ನು ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.

“ಸಭೆಯಲ್ಲಿ, 2018 ರ ವಿಧಾನಸಭಾ ಚುನಾವಣೆಯ ನಂತರ ಅವರೆ ಒಪ್ಪಿಕೊಂಡ ಅಧಿಕಾರ ಹಸ್ತಾಂತರದ ಸೂತ್ರವನ್ನು ಅನುಸರಿಸಲು ಭೂಪೇಶ್‌ ಅವರಿಗೆ ತಿಳಿಸಲಾಯಿತು. ಪಕ್ಷವು ಇದನ್ನು ಒಮ್ಮತದ ಮೂಲಕ ಮಾಡಲು ಬಯಸಿದೆ. ಆದರೆ ಈಗ ಅವರು ತಮ್ಮ ಪರವಾಗಿರುವ ಶಾಸಕರ ಮೂಲಕ ಅಧಿಕಾರದಲ್ಲಿ ಉಳಿಯಲು ಒತ್ತಡ ಹೇರುತ್ತಿದ್ದಾರೆ” ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಇದನ್ನೂ ಓದಿ: ಬಾಬಾ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಿಸಿದ ಛತ್ತೀಸ್‌ಗಢ ಪೊಲೀಸರು

ಈ ಮಧ್ಯೆ ಇಬ್ಬರೂ ನಾಯಕರು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಹೇಳಿಕೊಂಡಿದ್ದಾರೆ.

ಆದರೆ, “ಸರ್ಕಾರ ರಚೆನೆಯಾಗುವ ವೇಳೆಗೆ ಎರಡುವರೆ ವರ್ಷಗಳ ನಂತರ ಅಧಿಕಾರವನ್ನು ಹಸ್ತಾಂತರ ಮಾಡುವ ಬಗ್ಗೆ ಒಪ್ಪಂದವಾಗಿತ್ತು. ಮುಖ್ಯಮಂತ್ರಿ ಭೂಪೇಶ್‌‌‌ ಅವರೇ ಅದಕ್ಕೆ ಒಪ್ಪಿಕೊಂಡಿದ್ದರು” ಎಂದು ಈ ಹಿಂದೆ ಟಿಎಸ್‌ ಸಿಂಗ್ ದಿಯೊ ಪ್ರತಿಪಾದಿಸುತ್ತಿದ್ದರು. ಅಷ್ಟೆ ಅಲ್ಲದೆ ಆಪ್ತರು ಕೂಡಾ ಅವರಿಗೆ ಅಧಿಕಾರ ಸಿಗದೆ ಇದ್ದರೆ ಸರ್ಕಾರದಿಂದ ಮಾತ್ರವಲ್ಲ, ಪಕ್ಷದಿಂದಲೆ ಹೊರಹೋಗಲಿದ್ದಾರೆ ಎಂದು ಎಚ್ಚರಿಕೆಯನ್ನೂ ನೀಡಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

2018 ರಲ್ಲಿ ಛತ್ತೀಸ್‌ಗಡ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ನಂತರ, ಮುಖ್ಯಮಂತ್ರಿ ರೇಸ್‌ನಲ್ಲಿ ಟಿಎಸ್‌‌ ಸಿಂಗ್ ದಿಯೋ ದೇವ ಮತ್ತು ತಾಮ್ರಧ್ವಾಜ್ ಸಾಹು ಮತ್ತು ಭೂಪೇಶ್‌ ಬಘೇಲ್‌ ಇದ್ದರು. ಅಂತಿಮವಾಗಿ ಭೂಪೇಶ್ ಮುಖ್ಯಮಂತ್ರಿಯಾಗಿ, ಉಳಿದ ಇಬ್ಬರಿಗೆ ಮಂತ್ರಿ ಸ್ಥಾನಗಳನ್ನು ನೀಡಲಾಗಿತ್ತು.

ಇದನ್ನೂ ಓದಿ: ಯುವಕನ ಮೇಲೆ ಹಲ್ಲೆಗೈದು, ಮೊಬೈಲ್ ಹೊಡೆದುಹಾಕಿದ ಜಿಲ್ಲಾಧಿಕಾರಿ: ಕ್ರಮಕ್ಕೆ ಮುಂದಾದ ಛತ್ತೀಸ್‌ ಘಡ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...