ಛತ್ತೀಸ್‌ಗಢದಲ್ಲಿ ಶಿಕ್ಷಕರ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ವಯನಾಡ್‌ನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ಶಿಕ್ಷಕರು ರಸ್ತೆಯಲ್ಲೆ ಸಾಷ್ಟಾಂಗ ನಮಸ್ಕಾರ ಮಾಡಿ ಪ್ರತಿಭಟಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಛತ್ತೀಸ್‌ಗಢ ಬಿಜೆಪಿ
ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳು ಮತ್ತು ಇತ್ತೀಚೆಗೆ 3,000 ಶಿಕ್ಷಕರನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ವೀಡಿಯೊದಲ್ಲಿ, ಮಹಿಳೆಯರು ಚಳಿಯಲ್ಲಿಯೂ ರಸ್ತೆಯಲ್ಲಿ ಮಲಗಿ ತಮ್ಮ ಉದ್ಯೋಗಗಳನ್ನು ಉಳಿಸುವಂತೆ ಸರ್ಕಾರವನ್ನು ಬೇಡಿಕೊಳ್ಳುವುದನ್ನು ಕಾಣಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಪ್ರಿಯಾಂಕ ಗಾಂಧಿ, ಛತ್ತೀಸ್‌ಗಢದ ಈ ವೀಡಿಯೊ ದೇಶದ ಯುವಜನರ ದುಃಸ್ಥಿತಿಗೆ ಒಂದು ಸಣ್ಣ ಉದಾಹರಣೆಯಾಗಿದೆ. ರಾಜ್ಯದಲ್ಲಿ 33 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, 1 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ ಬಿಜೆಪಿ ಸರ್ಕಾರ 3 ಸಾವಿರ ಶಿಕ್ಷಕರನ್ನು ಕೆಲಸದಿಂದ ತೆಗೆದುಹಾಕಿದೆ ಎಂದು ಹೇಳಿದ್ದಾರೆ.
“ಈ ಹುಡುಗಿಯರು ಈ ಕಠಿಣ ಚಳಿಯಲ್ಲಿ ರಸ್ತೆಯಲ್ಲಿ ಮಲಗಿ ಉದ್ಯೋಗಕ್ಕಾಗಿ ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ. ಇಂದು, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ಛತ್ತೀಸ್‌ಗಢ ಸೇರಿದಂತೆ ಪ್ರತಿಯೊಂದು ರಾಜ್ಯದಿಂದ ಯುವಕರು ಬಿಜೆಪಿಯ ಭ್ರಷ್ಟಾಚಾರ ಮತ್ತು ನಿರುದ್ಯೋಗದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಬಿಜೆಪಿ ಇಡೀ ದೇಶದ ಯುವಕರ ಭವಿಷ್ಯವನ್ನು ಕತ್ತಲೆಗೆ ತಳ್ಳಿದೆ” ಎಂದು ಪ್ರಿಯಾಂಕ ಹೇಳಿದ್ದಾರೆ. ಛತ್ತೀಸ್‌ಗಢ ಬಿಜೆಪಿ
छत्तीसगढ़ का यह वीडियो देश के युवाओं की दुर्दशा का एक छोटा सा उदाहरण है। प्रदेश में 33 हजार शिक्षकों के पद खाली पड़े हैं और 1 लाख नौकरी देने का वादा करने वाली भाजपा सरकार ने 3 हजार शिक्षकों को नौकरी से निकाल दिया। ये लड़कियां नौकरी की गुहार लगाते हुए इस कड़ाके की ठंड में सड़क पर… pic.twitter.com/tOVuWhtPyE
— Priyanka Gandhi Vadra (@priyankagandhi) January 13, 2025
ರಾಜ್ಯ ಸರ್ಕಾರವು ಇತ್ತಿಚೆಗೆ ಬಿ.ಇಡಿ ಪದವಿ ಪಡೆದ ಸುಮಾರು 2900 ಸಹಾಯಕ ಶಿಕ್ಷಕರನ್ನು ಅವರ ಹುದ್ದೆಗಳಿಂದ ವಜಾಗೊಳಿಸಿದೆ. ಇದನ್ನು ವಿರೋಧಿಸಿ ಗುರುವಾರ ರಾಜ್ಯ ಬಿಜೆಪಿ ಕಚೇರಿಯ ಹೊರಗೆ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 30 ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅದಾಗ್ಯೂ, ಪೊಲೀಸರ ಕ್ರಮದಿಂದ ವಿಚಲಿತರಾಗದ ಶಿಕ್ಷಕರು, ನ್ಯಾಯಕ್ಕಾಗಿ ನಯಾ ರಾಯ್‌ಪುರದ ಟುಟಾದಲ್ಲಿ ತಮ್ಮ ಆಂದೋಲನವನ್ನು ಮುಂದುವರೆಸಿದ್ದಾರೆ.
“ನೀವು ನಮಗೆ ಕೆಲಸ ನೀಡಲು ಸಾಧ್ಯವಾಗದಿದ್ದರೆ, ನಮಗೆ ದಯಾಮರಣ ನೀಡಿ” ಪ್ರತಿಭಟನಾಕಾರರು ಅಂದು ಆಗ್ರಹಿಸಿದ್ದರು. ತಮ್ಮನ್ನು ಅರ್ಹತೆಯ ಮೇಲೆ ಆಯ್ಕೆ ಮಾಡಲಾಗಿದೆ ಮತ್ತು ತಿಂಗಳುಗಳಿಂದ ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದರೂ, ನಂತರ ಹಠಾತ್ತನೆ ವಜಾಗೊಳಿಸಲಾಗಿದೆ ಎಂದು ಅವರು ಹೇಳಿದ್ದ, ತಮ್ಮನ್ನು ಮರುನೇಮಕ ಮಾಡುವಂತೆ ಒತ್ತಾಯಿಸಿದ್ದರು.
ಇದನ್ನೂಓದಿ: ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ
ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ


