Homeಚಳವಳಿಛತ್ತೀಸ್‌ಗಢ ಬಿಜೆಪಿ ಸರ್ಕಾರದಿಂದ 3 ಸಾವಿರ ಶಿಕ್ಷಕರ ವಜಾ

ಛತ್ತೀಸ್‌ಗಢ ಬಿಜೆಪಿ ಸರ್ಕಾರದಿಂದ 3 ಸಾವಿರ ಶಿಕ್ಷಕರ ವಜಾ

ರಸ್ತೆಯಲ್ಲೆ ಸಾಷ್ಟಾಂಗ ನಮಸ್ಕಾರ ಮಾಡಿ ಪ್ರತಿಭಟಿಸುತ್ತಿರುವ ಶಿಕ್ಷಕಿಯರು

- Advertisement -
- Advertisement -

ಛತ್ತೀಸ್‌ಗಢದಲ್ಲಿ ಶಿಕ್ಷಕರ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ವಯನಾಡ್‌ನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ಶಿಕ್ಷಕರು ರಸ್ತೆಯಲ್ಲೆ ಸಾಷ್ಟಾಂಗ ನಮಸ್ಕಾರ ಮಾಡಿ ಪ್ರತಿಭಟಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಛತ್ತೀಸ್‌ಗಢ ಬಿಜೆಪಿ

ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳು ಮತ್ತು ಇತ್ತೀಚೆಗೆ 3,000 ಶಿಕ್ಷಕರನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ವೀಡಿಯೊದಲ್ಲಿ, ಮಹಿಳೆಯರು ಚಳಿಯಲ್ಲಿಯೂ ರಸ್ತೆಯಲ್ಲಿ ಮಲಗಿ ತಮ್ಮ ಉದ್ಯೋಗಗಳನ್ನು ಉಳಿಸುವಂತೆ ಸರ್ಕಾರವನ್ನು ಬೇಡಿಕೊಳ್ಳುವುದನ್ನು ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಪ್ರಿಯಾಂಕ ಗಾಂಧಿ, ಛತ್ತೀಸ್‌ಗಢದ ಈ ವೀಡಿಯೊ ದೇಶದ ಯುವಜನರ ದುಃಸ್ಥಿತಿಗೆ ಒಂದು ಸಣ್ಣ ಉದಾಹರಣೆಯಾಗಿದೆ. ರಾಜ್ಯದಲ್ಲಿ 33 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, 1 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ ಬಿಜೆಪಿ ಸರ್ಕಾರ 3 ಸಾವಿರ ಶಿಕ್ಷಕರನ್ನು ಕೆಲಸದಿಂದ ತೆಗೆದುಹಾಕಿದೆ ಎಂದು ಹೇಳಿದ್ದಾರೆ.

“ಈ ಹುಡುಗಿಯರು ಈ ಕಠಿಣ ಚಳಿಯಲ್ಲಿ ರಸ್ತೆಯಲ್ಲಿ ಮಲಗಿ ಉದ್ಯೋಗಕ್ಕಾಗಿ ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ. ಇಂದು, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ಛತ್ತೀಸ್‌ಗಢ ಸೇರಿದಂತೆ ಪ್ರತಿಯೊಂದು ರಾಜ್ಯದಿಂದ ಯುವಕರು ಬಿಜೆಪಿಯ ಭ್ರಷ್ಟಾಚಾರ ಮತ್ತು ನಿರುದ್ಯೋಗದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಬಿಜೆಪಿ ಇಡೀ ದೇಶದ ಯುವಕರ ಭವಿಷ್ಯವನ್ನು ಕತ್ತಲೆಗೆ ತಳ್ಳಿದೆ” ಎಂದು ಪ್ರಿಯಾಂಕ ಹೇಳಿದ್ದಾರೆ. ಛತ್ತೀಸ್‌ಗಢ ಬಿಜೆಪಿ

 

ರಾಜ್ಯ ಸರ್ಕಾರವು ಇತ್ತಿಚೆಗೆ ಬಿ.ಇಡಿ ಪದವಿ ಪಡೆದ ಸುಮಾರು 2900 ಸಹಾಯಕ ಶಿಕ್ಷಕರನ್ನು ಅವರ ಹುದ್ದೆಗಳಿಂದ ವಜಾಗೊಳಿಸಿದೆ. ಇದನ್ನು ವಿರೋಧಿಸಿ ಗುರುವಾರ ರಾಜ್ಯ ಬಿಜೆಪಿ ಕಚೇರಿಯ ಹೊರಗೆ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 30 ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅದಾಗ್ಯೂ, ಪೊಲೀಸರ ಕ್ರಮದಿಂದ ವಿಚಲಿತರಾಗದ ಶಿಕ್ಷಕರು, ನ್ಯಾಯಕ್ಕಾಗಿ ನಯಾ ರಾಯ್‌ಪುರದ ಟುಟಾದಲ್ಲಿ ತಮ್ಮ ಆಂದೋಲನವನ್ನು ಮುಂದುವರೆಸಿದ್ದಾರೆ.

“ನೀವು ನಮಗೆ ಕೆಲಸ ನೀಡಲು ಸಾಧ್ಯವಾಗದಿದ್ದರೆ, ನಮಗೆ ದಯಾಮರಣ ನೀಡಿ” ಪ್ರತಿಭಟನಾಕಾರರು ಅಂದು ಆಗ್ರಹಿಸಿದ್ದರು. ತಮ್ಮನ್ನು ಅರ್ಹತೆಯ ಮೇಲೆ ಆಯ್ಕೆ ಮಾಡಲಾಗಿದೆ ಮತ್ತು ತಿಂಗಳುಗಳಿಂದ ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದರೂ, ನಂತರ ಹಠಾತ್ತನೆ ವಜಾಗೊಳಿಸಲಾಗಿದೆ ಎಂದು ಅವರು ಹೇಳಿದ್ದ, ತಮ್ಮನ್ನು ಮರುನೇಮಕ ಮಾಡುವಂತೆ ಒತ್ತಾಯಿಸಿದ್ದರು.

ಇದನ್ನೂಓದಿ:  ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...