Homeಮುಖಪುಟಛತ್ತೀಸ್‌ಗಢ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್‌ ಭರ್ಜರಿ ಗೆಲುವು; BJP ಹೀನಾಯ ಸೋಲು

ಛತ್ತೀಸ್‌ಗಢ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್‌ ಭರ್ಜರಿ ಗೆಲುವು; BJP ಹೀನಾಯ ಸೋಲು

- Advertisement -
- Advertisement -

ಛತ್ತೀಸ್‌ಗಢದ 15 ನಗರ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಜಯ ದಾಖಲಿಸಿದೆ. ಇದೀಗ ಮತ ಎಣಿಕೆ ಪೂರ್ಣಗೊಂಡಿದ್ದು, 300 ವಾರ್ಡ್‌ಗಳ ಪೈಕಿ 174ರಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಬಿಜೆಪಿ ಭಾರಿ ಹಿನ್ನಡೆ ಅನುಭವಿಸಿದ್ದು 89 ವಾರ್ಡ್‌ಗಳನ್ನಷ್ಟೇ ಜಯಿಸಿಕೊಂಡಿದೆ.

ಸೋಮವಾರದಂದು 15 ನಗರ ಸಂಸ್ಥೆಗಳಲ್ಲಿ ಮತ್ತು 15 ವಾರ್ಡ್‌ಗಳ ಉಪಚುನಾವಣೆಯ ಮತಗಳ ಎಣಿಕೆಯು ಗುರುವಾರದಂದು 29 ಎಣಿಕೆ ಕೇಂದ್ರಗಳಲ್ಲಿ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಿತ್ತು.

ಇದನ್ನೂ ಓದಿ:ಉತ್ತರ ಪ್ರದೇಶ:ಪ್ರಧಾನಿ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದ 70 ಮಂದಿ ಎಸ್‌ಪಿ ಕಾರ್ಯಕರ್ತರ ಬಂಧನ, ಬಿಡುಗಡೆ

ಫಲಿತಾಂಶ ಘೋಷಿಸಿದ ನಂತರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ತಮ್ಮ ಸರ್ಕಾರವು ಪ್ರಾರಂಭಿಸಿದ ಕಲ್ಯಾಣ ಯೋಜನೆಗಳ ಯಶಸ್ಸನ್ನು ಈ ಫಲಿತಾಂಶವು ಸೂಚಿಸುತ್ತದೆ ಎಂದು ಹೇಳಿದ್ದಾರೆ.

15 ನಗರ ಸಂಸ್ಥೆಗಳ ಒಟ್ಟು 370 ವಾರ್ಡ್‌ಗಳ ಪೈಕಿ 300 ವಾರ್ಡ್‌ಗಳಿಗೆ ರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ಫಲಿತಾಂಶ ಪ್ರಕಟಿಸಿದ್ದು, ಇದರಲ್ಲಿ 174 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು, 89 ರಲ್ಲಿ ಬಿಜೆಪಿ, 6 ರಲ್ಲಿ ಜನತಾ ಕಾಂಗ್ರೆಸ್ ಛತ್ತೀಸ್‌ಗಢ (ಜೆ) ಮತ್ತು 31 ರಲ್ಲಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ.

ದುರ್ಗ್ ಜಿಲ್ಲೆಯ ಪ್ರಮುಖ ಭಿಲಾಯಿ ಮುನ್ಸಿಪಲ್ ಕಾರ್ಪೊರೇಷನ್‌ಗೆ ಒಳಪಡುವ ಉಳಿದ 70 ವಾರ್ಡ್‌ಗಳ ಫಲಿತಾಂಶವನ್ನು ಇನ್ನೂ ಅಧಿಕೃತವಾಗಿ ಘೋಷಿಸಲಾಗಿಲ್ಲ. ಅಲ್ಲಿ ಎಣಿಕೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ರಾಹುಲ್‌ ಸಾಮರ್ಥ್ಯ ಅಲ್ಲಗಳೆದು ಕಾಂಗ್ರೆಸ್ ವಕ್ತಾರರೊಬ್ಬರು ಮೋದಿಯನ್ನು ಹೊಗಳಿದ್ದಾರೆಯೇ?

ಆದಾಗ್ಯೂ, 70 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಮುನ್ನಡೆ ಸಾಧಿಸಿದೆ ಎಂದು ಹೇಳಲಾಗುತ್ತಿದೆ. ಈ 70 ವಾರ್ಡ್‌ಗಳಲ್ಲಿ ಕಾಂಗ್ರೆಸ್ 37, ಬಿಜೆಪಿ 24, ಇತರರು 8 ರಲ್ಲಿ ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) 1 ರಲ್ಲಿ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್ ಶಾಸಕ ದೇವೇಂದ್ರ ಯಾದವ್ ಅವರು ಭಿಲಾಯಿ ಮುನ್ಸಿಪಲ್ ಕಾರ್ಪೊರೇಷನ್‌ನ ಹಾಲಿ ಮೇಯರ್ ಆಗಿದ್ದಾರೆ.

4 ಮುನಿಸಿಪಲ್ ಕಾರ್ಪೊರೇಶನ್‌ಗಳು, 6 ಮುನ್ಸಿಪಲ್ ಕೌನ್ಸಿಲ್‌ಗಳು ಮತ್ತು ಐದು ನಗರ ಪಂಚಾಯತ್‌ಗಳಿಗೆ ಚುನಾವಣೆ ನಡೆದಿತ್ತು.

ರಾಯ್‌ಪುರ ಜಿಲ್ಲೆಯ ಬಿರ್‌ಗಾಂವ್ ಮುನ್ಸಿಪಲ್ ಕಾರ್ಪೊರೇಷನ್‌ನ 40 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 19 ಮತ್ತು ಬಿಜೆಪಿ 10, ಜೆಸಿಸಿ (ಜೆ) ಮತ್ತು ಸ್ವತಂತ್ರ ಅಭ್ಯರ್ಥಿಗಳು ಕ್ರಮವಾಗಿ 5 ಮತ್ತು 6 ವಾರ್ಡ್‌ಗಳಲ್ಲಿ ವಿಜೇತರಾಗಿದ್ದಾರೆ.

ಇದನ್ನೂ ಓದಿ:ಗೋವಾ: ಕಾಂಗ್ರೆಸ್‌‌‌ನ ಮಾಜಿ ಕಾರ್ಯಾಧ್ಯಕ್ಷ, ಶಾಸಕ ಅಲೆಕ್ಸೊ ಟಿಎಂಸಿಗೆ ಸೇರ್ಪಡೆ

13 ನಗರ ಸಂಸ್ಥೆಗಳ ವ್ಯಾಪ್ತಿಯ 15 ವಾರ್ಡ್‌ಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ 11 ಮತ್ತು ಬಿಜೆಪಿ 1 ಸ್ಥಾನ ಗಳಿಸಿದರೆ, ಉಳಿದ 3 ರಲ್ಲಿ ಸ್ವತಂತ್ರ ಅಭ್ಯರ್ಥಿಗಳು ಜಯಗಳಿಸಿದ್ದಾರೆ.

“ಎಲ್ಲಾ ಪುರಸಭೆಯ ಫಲಿತಾಂಶಗಳು ಕಾಂಗ್ರೆಸ್ ಪರವಾಗಿವೆ. ಈ ಫಲಿತಾಂಶವು ರಾಜ್ಯ ಸರ್ಕಾರದ ಜನಕಲ್ಯಾಣ ಯೋಜನೆಗಳ ಯಶಸ್ಸನ್ನು ತೋರಿಸುತ್ತದೆ. ರಾಜ್ಯದಲ್ಲಿ ಮೂರು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಜನರು ನಂಬಿಕೆ ಇರಿಸಿದ್ದಾರೆ ಮತ್ತು ಹೀಗಾಗಿ ಪಕ್ಷದ ಪರವಾಗಿ ತಮ್ಮ ಜನಾದೇಶವನ್ನು ನೀಡಿದ್ದಾರೆ” ಎಂದು ಮುಖ್ಯಮಂತ್ರಿ ಬಘೇಲ್ ಹೇಳಿದ್ದಾರೆ.

ಮತದಾರರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ವಿಜೇತರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಯುಪಿ ವಿಧಾನಸಭಾ ಚುನಾವಣೆಗೆ ಬಘೇಲ್ ಅವರನ್ನು ಕಾಂಗ್ರೆಸ್ ಹಿರಿಯ ವೀಕ್ಷಕರನ್ನಾಗಿ ನೇಮಿಸಿದೆ.

ಇದನ್ನೂ ಓದಿ:ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 10 ದಿನ ಕಾಂಗ್ರೆಸ್‌ನಿಂದ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...