Homeಮುಖಪುಟಬಜೆಟ್ ಮಂಡಿಸಲು ಹಸುವಿನ ಸಗಣಿಯಿಂದ ತಯಾರಿಸಿದ ಬ್ರೀಫ್‌ಕೇಸ್‌ ತಂದ ಛತ್ತೀಸ್‌ಗಢ ಸಿಎಂ!

ಬಜೆಟ್ ಮಂಡಿಸಲು ಹಸುವಿನ ಸಗಣಿಯಿಂದ ತಯಾರಿಸಿದ ಬ್ರೀಫ್‌ಕೇಸ್‌ ತಂದ ಛತ್ತೀಸ್‌ಗಢ ಸಿಎಂ!

- Advertisement -
- Advertisement -

ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ರಾಜ್ಯ ಬಜೆಟ್ ಮಂಡಿಸಲು ಹಸುವಿನ ಸಗಣಿಯಿಂದ ತಯಾರಿಸಿದ ಬ್ರೀಫ್‌ಕೇಸ್‌ನೊಂದಿಗೆ ರಾಜ್ಯದ ವಿಧಾನಸಭೆಗೆ ತೆರಳಿದ ಆಶ್ಚರ್ಯಕರ ಘಟನೆ ಬುಧವಾರ ನಡೆದಿದೆ.

2022-23ರ ಆರ್ಥಿಕ ವರ್ಷಕ್ಕೆ ರಾಜ್ಯ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಬಘೇಲ್‌ ಅವರು ವಿಧಾನಸಭೆಗೆ ಹಸುವಿನ ಸಗಣಿಯಿಂದ ಮಾಡಿದ ಚೌಕಾಕಾರದ ಬ್ರೀಫ್‌ಕೇಸ್‌ ಅನ್ನು ಹಿಡಿದುಕೊಂಡು ಪ್ರವೇಶಿಸಿದ್ದಾರೆ.

ಛತ್ತೀಸ್‌ಗಢ ವಿಧಾನಸಭೆಯ ಬಜೆಟ್ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, 2022-23ನೇ ಸಾಲಿನ ರಾಜ್ಯದ ಬಜೆಟ್ ಅನ್ನು ಬುಧವಾರ ಸದನದಲ್ಲಿ ಮಂಡಿಸಲಾಯಿತು.

ಇದಕ್ಕೂ ಮುನ್ನ ಭೂಪೇಶ್ ಬಘೇಲ್ ಅವರು ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸಲು ಕ್ರಮಗಳನ್ನು ಕೈಗೊಂಡರು. ಜೊತೆಗೆ ಬಿಡಾಡಿ ದನಗಳ ಸಮಸ್ಯೆಯನ್ನು ಪರಿಹರಿಸಲು, ಸಾವಯವ ಕೃಷಿಯನ್ನು ಉತ್ತೇಜಿಸಲು ಮತ್ತು ಗ್ರಾಮೀಣ ಆರ್ಥಿಕತೆಗೆ ನೆರವು ಘೋಷಿಸಿದ್ದಾರೆ.

2020 ರಲ್ಲಿ, ಕಾಂಗ್ರೆಸ್ ಆಡಳಿತದ ಛತ್ತೀಸ್‌ಗಢ ಸರ್ಕಾರವು ಹಸು ಸಾಕಣೆದಾರರು ಮತ್ತು ರೈತರಿಂದ ಹಸುವಿನ ಸಗಣಿ ಸಂಗ್ರಹಿಸುವುದಾಗಿ ಘೋಷಿಸಿತ್ತು. ಈ ಘೋಷಣೆಯನ್ನು ಮಾಡಿದ ದೇಶದ ಮೊದಲ ರಾಜ್ಯ  ಛತ್ತೀಸ್‌ಗಢವಾಗಿದೆ.

ರಾಜ್ಯದ ‘ಗೋಧನ್ ನ್ಯಾಯ್’ ಎಂಬ ಯೋಜನೆಯು ಜಾನುವಾರು ಮಾಲೀಕರಿಗೆ ಸಗಣಿ ಸಂಗ್ರಹಣೆಯ ಮೂಲಕ ಆದಾಯದ ಬೆಂಬಲವನ್ನು ಒದಗಿಸುವ ಉದ್ದೇಶವನ್ನು ಹೊಂದಿದ್ದು, ರಾಜ್ಯದಲ್ಲಿನ ರಾಸಾಯನಿಕ ಗೊಬ್ಬರಗಳ ಕೊರತೆಯನ್ನು ಪರಿಹರಿಸಲು ಭೂಪೇಶ್ ಬಘೇಲ್ ಸರ್ಕಾರವು ವರ್ಮಿಕಾಂಪೋಸ್ಟ್‌‌ಗಾಗಿ ಇದನ್ನು ಬಳಸಿಕೊಳ್ಳುತ್ತಿದೆ.

ಭೂಪೇಶ್ ಬಘೇಲ್ ಮಾತ್ರವಲ್ಲ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಉನ್ನತ ನಾಯಕರು ಗ್ರಾಮೀಣ ಆರ್ಥಿಕತೆಯನ್ನು ಹೆಚ್ಚಿಸಲು ಗೋವಿನ ಸಗಣಿ ಬಳಕೆಯನ್ನು ಪ್ರಸ್ತಾಪಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ರಾಸಾಯನಿಕ ಗೊಬ್ಬರಗಳನ್ನು ತ್ಯಜಿಸುವಂತೆ ರೈತರನ್ನು ಒತ್ತಾಯಿಸಿದ್ದ ಪ್ರಧಾನಿ ಮೋದಿ, “ನಾವು ಸಾವಯವ ಕೃಷಿ ವಿಧಾನಗಳಿಗೆ ಬದಲಾಗಬೇಕಾಗಿದೆ… ದೇಸಿ ಹಸುವಿನ ಸಗಣಿ ಮತ್ತು ಮೂತ್ರವು ನಿಮ್ಮ ಕೃಷಿ ಉತ್ಪನ್ನಗಳನ್ನು ರಕ್ಷಿಸಲು ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದನ್ನು ಸ್ವಾಭಾವಿಕವಾಗಿ ಮಾಡಬಹುದು” ಎಂದು ಹೇಳಿದ್ದರು.

ಇದನ್ನೂ ಓದಿ: ಸಿಬಿಐಗಿದ್ದ ಸಮ್ಮತಿಯನ್ನು ಹಿಂಪಡೆದ ಮೇಘಾಲಯ: ಒಂಬತ್ತು ರಾಜ್ಯಗಳಲ್ಲಿ ಸಿಬಿಐಗೆ ಎಂಟ್ರಿ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟೊಂದು‌ ಮೂಢನಂಬಿಕೆ ಇನ್ನೂ ನಮ್ಮ‌ ಜನಗಳಲ್ಲಿ ಇದೆಯಲ್ಲಾ……

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...