ಛತ್ತೀಸ್‌ಗಢದ ನಾರಾಯಣಪುರ-ದಂತೇವಾಡ ಗಡಿಯಲ್ಲಿರುವ ಅರಣ್ಯದಲ್ಲಿ ಶುಕ್ರವಾರ ಭದ್ರತಾ ಪಡೆಗಳು ಮೂವತ್ತು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಭದ್ರತಾ ಪಡೆಗಳು ಇತ್ತೀಚಿನ ದಿನಗಳಲ್ಲಿ ನಡೆಸಿದ ಅತೀ ದೊಡ್ಡ ಕಾರ್ಯಾಚರಣೆ ಇದಾಗಿದೆ ಎಂದು ಎಂದು ಮೂಲಗಳು ತಿಳಿಸಿವೆ.ಛತ್ತೀಸ್‌ಗಢ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಗುರುವಾರ ಮಾವೋವಾದಿ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಶುಕ್ರವಾರ ಮಧ್ಯಾಹ್ನ 12.30 ಕ್ಕೆ ಅವರ ಸಂಪರ್ಕ ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ. ಎನ್‌ಕೌಂಟರ್ ಇನ್ನೂ ಮುಂದುವರೆದಿದೆ ಎಂದು ಎನ್‌ಡಿಟಿವಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.
ಇದನ್ನೂಓದಿ: ಓಲಾ ಕ್ಯಾಬ್‌ನಲ್ಲಿ ಲೈಂಗಿಕ ಕಿರುಕುಳ ಪ್ರಕರಣ : ಸಂತ್ರಸ್ತೆಗೆ ಪರಿಹಾರ ಪಾವತಿಸುವ ಆದೇಶಕ್ಕೆ ಹೈಕೋರ್ಟ್ ತಡೆ
ಎಕೆ ಸರಣಿ ಮತ್ತು ಇತರ ಶಸ್ತ್ರಾಸ್ತ್ರಗಳು ಸೇರಿದಂತೆ ಹಲವಾರು ಆಕ್ರಮಣಕಾರಿ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಾವೋವಾದಿಗಳ ಗುಂಪು ಇರುವ ಬಗ್ಗೆ ಗುಪ್ತಚರ ವರದಿಗಳ ಆಧಾರದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗಿದ್ದು, ಪ್ರತ್ಯೇಕ ತಂಡಗಳನ್ನು ಗುರುವಾರ ಓರ್ಚಾ ಮತ್ತು ಬಾರ್ಸೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋವೆಲ್, ನೆಂದೂರು ಮತ್ತು ತುಳುತುಳಿ ಗ್ರಾಮಗಳಿಗೆ ಕಳುಹಿಸಲಾಗಿದೆ. ಅವರು ಈ ಗ್ರಾಮಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.
ನೆಂದೂರು-ತುಳತುಳಿ ಸಮೀಪದ ಅರಣ್ಯದಲ್ಲಿ ಇಂದು ಮಧ್ಯಾಹ್ನ ಎನ್‌ಕೌಂಟರ್ ನಡೆದಿದೆ. ತೀವ್ರ ಎಚ್ಚರಿಕೆಯ ಮೂಲಕ ಭದ್ರತಾ ಪಡೆಗಳು ಕಾಡಿನೊಳಗೆ ನುಸುಳಿರುವ ಕೆಲವು ಉಳಿದ ಮಾವೋವಾದಿಗಳನ್ನು ಹಿಂಬಾಲಿಸುತ್ತಿವೆ ಎಂದು ಮೂಲಗಳು ತಿಳಿಸಿವೆ.ಛತ್ತೀಸ್‌ಗಢ
ಪ್ರಸ್ತುತ ಎನ್‌ಕೌಂಟರ್ ಛತ್ತೀಸ್‌ಗಢದಲ್ಲಿ ಮಾವೋವಾದಿ ದಂಗೆಯ ವಿರುದ್ಧದ ಹೋರಾಟದಲ್ಲಿ ಭದ್ರತಾ ಪಡೆಗಳಿಗೆ ಸಿಕ್ಕ ದೊಡ್ಡ ಯಶಸ್ಸನ್ನು ಎಂದು ಬಣ್ಣಿಸಲಾಗಿದೆ.
ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ


