Homeಕರೋನಾ ತಲ್ಲಣಛತ್ತೀಸ್‌ಗಢ: ರಾಯ್‌ಪುರ ಆಸ್ಪತ್ರೆಯಲ್ಲಿ ಬೆಂಕಿ ಅವಘಡ, ಐವರು ಕೊರೊನಾ ಸೋಂಕಿತರು ಸಾವು

ಛತ್ತೀಸ್‌ಗಢ: ರಾಯ್‌ಪುರ ಆಸ್ಪತ್ರೆಯಲ್ಲಿ ಬೆಂಕಿ ಅವಘಡ, ಐವರು ಕೊರೊನಾ ಸೋಂಕಿತರು ಸಾವು

- Advertisement -
- Advertisement -

ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ಆಸ್ಪತ್ರೆಯೊಂದರಲ್ಲಿ ಶನಿವಾರ ಬೆಂಕಿ ಅವಘಡ ಸಂಭವಿಸಿದ್ದು,  ಕನಿಷ್ಠ ಐವರು ಕೊರೊನಾ ಸೋಂಕಿತ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದುರಂತದಲ್ಲಿ ಸಾವನ್ನಪ್ಪಿದವರಿಗೆ ಮುಂದಿನವರಿಗೆ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ತಲಾ 4 ಲಕ್ಷ ರೂಪಾಯಿ  ಪರಿಹಾರವನ್ನು ಘೋಷಿಸಿದ್ದಾರೆ. ಇತರ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

‘ಬೆಂಕಿ ದುರಂತದಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಯ ಇತರ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ತನಿಖೆ ನಡೆಯುತ್ತಿದೆ’ ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ತರ್ಕೇಶ್ವರ ಪಟೇಲ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಛತ್ತೀಸ್‌ಗಢ: ಸರ್ಕಾರಿ ಆಸ್ಪತ್ರೆ ಹೊರಗಡೆ ಕೊರೊನಾ ಸೋಂಕಿತರ ಮೃತದೇಹಗಳ ರಾಶಿ

 

ಘಟನ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸಂತ್ರಸ್ತರ ಕುಟುಂಬ ಸದಸ್ಯರಿಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೊನೆಗೂ ಕುಂಭಮೇಳಕ್ಕೆ ತೆರೆ ಎಳೆಯಲು ಸಿದ್ಧರಾದ ಜುನಾ ಅಖಾರ ಮುಖ್ಯಸ್ಥ ಅವಧೇಶಾನಂದ ಗಿರಿ

“ರಾಯ್‌ಪುರದ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡದ ಸುದ್ದಿ ದುಃಖದಾಯಕವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಎಲ್ಲಾ ನೆರವು ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಕಳೆದ ಕೆಲವು ದಿನಗಳ ಹಿಂದಷ್ಟೆ ರಾಯ್‌ಪುರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವಗಳನ್ನು ಶವಾಗಾರದಲ್ಲಿ ಇಡಲು ಸಾಧ್ಯವಾಗದೆ, ಆಸ್ಪತ್ರೆಯ ಹೊರಗಡೆ ಬಿಸಿಲಿನಲ್ಲಿ ಸ್ಟ್ರೆಚರ್ ಮೇಲೆ ಮಲಗಿಸಿರುವ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು.

ಛತ್ತೀಸ್‌ಗಢ ಕೊರೊನಾ ಎರಡನೇ ಅಲೆಗೆ ತತ್ತರಿಸಿದೆ. ಕೊರೊನಾ ವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ದೇಶದ 10 ರಾಜ್ಯಗಳಲ್ಲಿ ಛತ್ತೀಸ್‌ಗಢ ಕೂಡ ಒಂದು. ಹೆಚ್ಚು ಪ್ರಕರಣಗಳನ್ನು ದಾಖಲಿಸಿರುವ ರಾಯ್‌ಪುರ ಮತ್ತು ದುರ್ಗ್ ಜಿಲ್ಲೆಗಳು ಸಂಪೂರ್ಣ ಲಾಕ್‌ಡೌನ್ ಹಂತದಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದರು.


ಇದನ್ನೂ ಓದಿ: ಕುರ್‌‌ಆನ್‌‌‌‌ ಶ್ಲೋಕಗಳನ್ನು ತೆಗೆದುಹಾಕುವಂತೆ ಸಲ್ಲಿಸಿದ್ದ ಅರ್ಜಿಯನ್ನು ‘ಕ್ಷುಲ್ಲಕ’ ಎಂದ ಸುಪ್ರೀಂಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...