Homeಮುಖಪುಟಛತ್ತೀಸ್‌ಗಢ: ಅಪ್ರಾಪ್ತ ಬಾಲಕಿ ಸೇರಿ ಇಬ್ಬರು ಸಹೋದರಿಯರ ಮೇಲೆ ಸಾಮೂಹಿಕ ಅತ್ಯಾಚಾರ; 10 ಜನರ ಬಂಧನ

ಛತ್ತೀಸ್‌ಗಢ: ಅಪ್ರಾಪ್ತ ಬಾಲಕಿ ಸೇರಿ ಇಬ್ಬರು ಸಹೋದರಿಯರ ಮೇಲೆ ಸಾಮೂಹಿಕ ಅತ್ಯಾಚಾರ; 10 ಜನರ ಬಂಧನ

- Advertisement -
- Advertisement -

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಅಪ್ರಾಪ್ತ ಬಾಲಕಿ ಸೇರಿದಂತೆ ಇಬ್ಬರು ಸಹೋದರಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಗುರುವಾರ ತಡರಾತ್ರಿ ರಕ್ಷಾಬಂಧನ ಆಚರಿಸಿ 19 ಮತ್ತು 16 ವರ್ಷ ವಯಸ್ಸಿನ ಸಹೋದರಿಯರು ತುಮಗಾಂವ್ ಗ್ರಾಮದಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಹಿರಿಯ ಸಹೋದರಿಯ ಭಾವಿ ಪತಿಯೊಂದಿಗೆ ಇಬ್ಬರು ಸಹೋದರಿಯರು ಮೋಟಾರ್‌ಸೈಕಲ್‌ನಲ್ಲಿ ಬರುತ್ತಿದ್ದರು.

ಈ ಬಗ್ಗೆ ಮಾತನಾಡಿದ ರಾಯ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಅಗರವಾಲ್, ”ಭನ್ಸೋಜ್ ಬಳಿ ಅವರ ಮೋಟಾರ್‌ಸೈಕಲ್‌ಅನ್ನು ಮೂವರು ಆರೋಪಿಗಳು ಅಡ್ಡಗಟ್ಟಿದ್ದಾರೆ. ಅವರ ಬಳಿ ಇದ್ದ ನಗದು ಮತ್ತು ಮೊಬೈಲ್ ಫೋನ್ ದೋಚಿದ್ದಾರೆ ಎನ್ನಲಾಗಿದೆ. ಇತರ ಏಳು ಆರೋಪಿಗಳು ನಾಲ್ಕು ಮೋಟಾರ್ ಸೈಕಲ್‌ಗಳಲ್ಲಿ ಸ್ಥಳಕ್ಕೆ ಬಂದು, ಅವರಿಗೆ ಬೆದರಿಕೆ ಹಾಕಿದ್ದಾರೆ” ಎಂದು ತಿಳಿಸಿದ್ದಾರೆ.

”ಇಬ್ಬರು ಸಹೋದರಿಯರನ್ನು ಮುಖ್ಯ ರಸ್ತೆಯಿಂದ ದೂರವಿರುವ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ. ಜೊತೆಗಿದ್ದ ವ್ಯಕ್ತಿಯ ಮೇಲೂ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ” ಎಂದು ಹೇಳಿದರು.

ಆ ಬಳಿಕ ಸ್ಥಳೀಯ ಪೊಲೀಸ್ ಗಸ್ತು ಘಟಕವನ್ನು ತಲುಪಿ, ಘಟನೆ ಬಗ್ಗೆ ತಿಳಿಸಿದ್ದಾರೆ. ಆನಂತರ ಅಲ್ಲಿಂದ ಅವರನ್ನು ಹತ್ತಿರದ ಪೊಲೀಸ್ ಠಾಣೆಗೆ ಕರೆದೊಯ್ದು, ಎಫ್‌ಐಆರ್ ದಾಖಲಿಸಿದ್ದಾರೆ.

”ಆರೋಪಿಗಳ ನಾಲ್ಕು ಬೈಕ್‌ಗಳಲ್ಲಿ ಒಂದು ಬೈಕ್‌ನ ನೋಂದಣಿ ಸಂಖ್ಯೆಯನ್ನು ಬಲಿಪಶುಗಳು ನೆನಪಿನಲ್ಲಿಟ್ಟುಕೊಂಡಿದ್ದರು. ಸಂತ್ರಸ್ತರು ನೀಡಿದ ಇನ್ನೂ ಕೆಲವು ವಿವರಣೆಯನ್ನು ಆಧರಿಸಿ ನಾವು ಆರೋಪಿಯನ್ನು ಪತ್ತೆ ಹಚ್ಚಿದ್ದೇವೆ” ಎಂದು ರಾಯ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376ಡಿ (ಗ್ಯಾಂಗ್ ರೇಪ್), 376ಡಿಎ (ಹದಿನಾರು ವರ್ಷದೊಳಗಿನ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್‌ ನಿರ್ಬಂಧ

0
ದೇಶದಲ್ಲೇ ಭಾರೀ ಸುದ್ದಿಯಾಗಿರುವ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ನಿರ್ಬಂಧ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳು ತಮ್ಮ...